ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಈ ವರ್ಷ ನಟಿ ರಾಗಿಣಿ ದ್ವಿವೇದಿಗೆ ಬಿಡುಗಡೆ ಭಾಗ್ಯವಿಲ್ಲ!

|
Google Oneindia Kannada News

ಬೆಂಗಳೂರು, ಡಿಸೆಂಬರ್ 04; ನಟಿ ರಾಗಿಣಿ ದ್ವಿವೇದಿ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಹೊಸ ವರ್ಷವನ್ನು ಆಚರಣೆ ಮಾಡಬೇಕಿದೆ. ಡ್ರಗ್ಸ್ ಜಾಲದ ಕುರಿತ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

Recommended Video

ಹೊಸ ವರ್ಷದ ಆಸೆಗೆ ಬ್ರೇಕ್ ಹಾಕಿದ್ದು ಯಾರು ಗೊತ್ತಾ?? | Oneindia Kannada

ರಾಗಿಣಿ ದ್ವಿವೇದಿ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಗಿಣಿ ಪರ ವಕೀಲರು ಸುಪ್ರೀಂಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿಯನ್ನು (ಎಸ್‌ಎಲ್‌ಪಿ) ಸಲ್ಲಿಸಿದ್ದರು.

ಜಾಮೀನಿಗಾಗಿ ಸುಪ್ರೀಂಕೋರ್ಟ್‌ ಮೊರೆ ಹೋದ ರಾಗಿಣಿ ಜಾಮೀನಿಗಾಗಿ ಸುಪ್ರೀಂಕೋರ್ಟ್‌ ಮೊರೆ ಹೋದ ರಾಗಿಣಿ

ಶುಕ್ರವಾರ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯ 2021ರ ಜನವರಿಗೆ ಅರ್ಜಿಯ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿತು. ಆದ್ದರಿಂದ, ಈ ವರ್ಷ ರಾಗಿಣಿ ಜೈಲಿನಲ್ಲಿಯೇ ಕಳೆಯಬೇಕಿದೆ.

ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮುಂದೇನು? ರಾಗಿಣಿ, ಸಂಜನಾ ಜಾಮೀನು ಅರ್ಜಿ ವಜಾ; ಮುಂದೇನು?

ಇದೇ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿಯನ್ನು ಬಂಧಿಸಲಾಗಿದೆ. ಕರ್ನಾಟಕ ಹೈಕೋರ್ಟ್‌ನಲ್ಲಿ ಸಂಜನಾ ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪು ಮಧ್ಯಾಹ್ನ 3 ಗಂಟೆಗೆ ಬರಲಿದೆ.

ಎನ್‌ಡಿಪಿಎಸ್‌ ಕೋರ್ಟ್‌ಗೆ 3 ಅರ್ಜಿ ಸಲ್ಲಿಸಿದ ನಟಿ ರಾಗಿಣಿ ಎನ್‌ಡಿಪಿಎಸ್‌ ಕೋರ್ಟ್‌ಗೆ 3 ಅರ್ಜಿ ಸಲ್ಲಿಸಿದ ನಟಿ ರಾಗಿಣಿ

ಸೆಪ್ಟೆಂಬರ್ 4ರಂದು ಬಂಧನ

ಸೆಪ್ಟೆಂಬರ್ 4ರಂದು ಬಂಧನ

ಬೆಂಗಳೂರಿನ ಸಿಸಿಬಿ ಪೊಲೀಸರು 30 ವರ್ಷದ ರಾಗಿಣಿ ದ್ವಿವೇದಿಯನ್ನು ಸೆಪ್ಟೆಂಬರ್ 4ರಂದು ಬೆಂಗಳೂರಿನಲ್ಲಿ ಬಂಧಿಸಿದ್ದರು. ವಿಚಾರಣೆ ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ನವೆಂಬರ್ 3ರಂದು ಕರ್ನಾಟಕ ಹೈಕೋರ್ಟ್ ರಾಗಿಣಿ ಜಾಮೀನು ಅರ್ಜಿ ವಜಾಗೊಳಿಸಿತ್ತು.

ಜಾಮೀನು ಸಿಗಲಿಲ್ಲ

ಜಾಮೀನು ಸಿಗಲಿಲ್ಲ

ಬೆಂಗಳೂರಿನ ಎಚ್‌ಡಿಪಿಎಸ್ ವಿಶೇಷ ಕೋರ್ಟ್ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿ ವಜಾಗೊಳಿಸಿತ್ತು. ಇಬ್ಬರೂ ನಟಿಯರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ರಾಗಿಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಂಜನಾ ಅರ್ಜಿಯ ತೀರ್ಪು ಮಧ್ಯಾಹ್ನ 3 ಗಂಟೆಗೆ ಬರಲಿದೆ.

ಆರೋಪಗಳೇನು?

ಆರೋಪಗಳೇನು?

ಡ್ರಗ್ಸ್‌ ಪ್ರಕರಣದ ತನಿಖೆ ಕೈಗೊಂಡಿದ್ದ ಬೆಂಗಳೂರಿನ ಸಿಸಿಬಿ ಪೊಲೀಸರು ನಟಿ ರಾಗಿಣಿ ದ್ವಿವೇದಿ ನಿವಾಸದ ಮೇಲೆ ಸೆಪ್ಟೆಂಬರ್ 4ರಂದು ದಾಳಿ ಮಾಡಿದ್ದರು. ಬಳಿಕ ಅವರನ್ನು ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತರಲಾಗಿತ್ತು. ವಿಚಾರಣೆ ಬಳಿಕ ಬಂಧಿಸಲಾಗಿತ್ತು. ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ನಟಿ ರಾಗಿಣಿ ದ್ವಿವೇದಿ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಲಾಗಿದೆ. ಅಂತರಾಷ್ಟ್ರೀಯ ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸಂಪರ್ಕ, ರೇವ್ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಕೆ ಆರೋಪ ಅವರ ಮೇಲಿದೆ.

ಸಿಗಲಿಲ್ಲ ಜಾಮೀನು

ಸಿಗಲಿಲ್ಲ ಜಾಮೀನು

ಕರ್ನಾಟಕದಲ್ಲಿ ಯಾವ ನ್ಯಾಯಾಲಯದಲ್ಲಿಯೂ ಜಾಮೀನು ಸಿಗದ ಕಾರಣ ರಾಗಿಣಿ ದ್ವಿವೇದಿ ಕುಟುಂಬದವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಜನವರಿ ತಿಂಗಳಿಗೆ ಮುಂದೂಡಿದೆ. ಅಲ್ಲಿಯ ತನಕ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರಬೇಕಿದೆ.

English summary
Ragini Dwivedi bail application hearing adjourned to January 2021 by supreme court. Karnataka high court rejected bail petition.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X