ಎಸ್.ಸಿ. ಹಾಗೂ ಎಸ್.ಟಿ. ಮೀಸಲು ಹೆಚ್ಚಳ ವಿಧೇಯಕ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ
ಬೆಳಗಾವಿ, ಡಿಸೆಂಬರ್ 26: ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಜಾತಿಯ ಮೀಸಲು ಪ್ರಮಾಣವನ್ನು ಶೇ. 15 ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸುವ 2022ನೇ ಸಾಲಿನ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಹಾಗೂ ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಮತ್ತು ಹುದ್ದೆಗಳಲ್ಲಿ ಮೀಸಲಾತಿ ವಿಧೇಯಕಕ್ಕೆ ವಿಧಾನ ಸಭೆಯಲ್ಲಿ ಸರ್ವಾನುಮತದ ಅಂಗೀಕಾರ ದೊರೆಯಿತು.
ಸೋಮವಾರ ನಡೆದ ವಿಧಾನಸಭೆಯಲ್ಲಿ ಎಸ್.ಸಿ. ಹಾಗೂ ಎಸ್.ಟಿ. ಮೀಸಲು ಹೆಚ್ಚಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಜೆ.ಸಿ. ಮಾಧುಸ್ವಾಮಿ ಅವರು ಮಂಡಿಸಿದ ವಿಧೇಯಕಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳ ಎಲ್ಲಾ ಸದಸ್ಯರ ಒಕ್ಕೋರಲಿನ ಸಹಮತ ವ್ಯಕ್ತಪಡಿಸಿ ಸರ್ವಾನುಮತದ ಬೆಂಬಲ ಸೂಚಿಸಿದರು.
ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧೇಯಕವು ಸರ್ವಾನುಮತದಿಂದ ಅಂಗೀಕಾರಗೊಂಡು ಅನುಮೋದನೆ ಪಡೆದಿದೆ ಎಂದು ಪ್ರಕಟಿಸಿದರು.
ಇದಕ್ಕೂ ಮುನ್ನ ನಿಯಮ 69 ರಡಿ ನಡೆದ ಚರ್ಚೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಸದಸ್ಯರಾದ ಹೆಚ್.ಕೆ. ಪಾಟೀಲ, ಬಂಡೆಪ್ಪ ಕಾಶೆಂಪುರ, ಡಾ. ಕೆ. ಅನ್ನದಾನಿ, ಕೆ.ಎಂ. ಶಿವಲಿಂಗೇಗೌಡ, ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಮೀಸಲಾತಿಯು ಕೇವಲ ಸರ್ಕಾರಿ ಹುದ್ದೆಗಳಿಗೆ ಸೀಮಿತವಾಗದೇ ಖಾಸಗಿ ಕ್ಷೇತ್ರದ ಉದ್ಯೋಗಗಳು ಮತ್ತು ಸರ್ಕಾರಿ ಹೊರಗುತ್ತಿಗೆ ಹುದ್ದೆಗಳಿಗೂ ಅನ್ವಯವಾಗಬೇಕು ಎಂದು ಒತ್ತಾಯಿಸಿದರು.

ಇನ್ನೂ ಎಸ್ ಸಿ ಹಾಗೂ ಎಸ್ ಟಿ ಮೀಸಲಾತಿ ಹೆಚ್ಚಳ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿಲ್ಲ. ಬಿಜೆಪಿ ಯಾವಾಗಲಾದರೂ ಮೀಸಲಾತಿ ಬೇಕು ಎಂದು ಹೋರಾಟ ಮಾಡಿದೆ? ಮಂಡಲ್ ಕಮಿಷನ್ ವರದಿಯನ್ನು ವಿರೋಧ ಮಾಡಿದವರು ಯಾರು? ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಸಂವಿಧಾನಕ್ಕೆ 73 ಹಾಗೂ 74ನೇ ತಿದ್ದುಪಡಿಯನ್ನು ತಂದು ಹಿಂದುಳಿದವರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರಿಗೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮೀಸಲಾತಿ ನೀಡಿದಾಗ ಅದನ್ನು ವಿರೋಧ ಮಾಡಿದವರು ಯಾರು? ಬಿಜೆಪಿಯ ಉಪಾಧ್ಯಕ್ಷರು, ರಾಜ್ಯಸಭಾ ಸದಸ್ಯರು ಆಗಿದ್ದ ರಾಮಾಜೋಯಿಸ್ ಅವರು. ಸುಪ್ರೀಂಕೋರ್ಟ್ ನಲ್ಲಿ ಅವರು ಮನವಿ ಮಾಡಿದ ಹೊರತಾಗಿಯೂ ಕೋರ್ಟ್ ಅವರ ಮನವಿಯನ್ನು ತಿರಸ್ಕಾರ ಮಾಡಿತು, ಸ್ವತಂ ರಾಮಾಜೋಯಿಸ್ ಅವರೇ ಕೋರ್ಟ್ ನಲ್ಲಿ ವಾದ ಮಾಡಿದ್ದರು. ಉನ್ನತ ಶಿಕ್ಷಣದಲ್ಲಿ ಮೀಸಲಾತಿ ನೀಡಿದವರು ಅರ್ಜುನ್ ಸಿಂಗ್ ಅವರು, ಆಗಲೂ ವಿರೋಧ ಮಾಡಿದವರು ಯಾರು ಎಂಬುದು ನಮಗೆಲ್ಲ ಗೊತ್ತಿದೆ.
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಜನರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಗಬೇಕು ಎಂಬುದಕ್ಕೆ ನಾವು ಬದ್ಧರಾಗಿದ್ದೇವೆ. ಇದೇ ಕಾರಣಕ್ಕೆ ನಾವು ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಿದ್ದು. ಈ ವರ್ಗದ ಜನರಿಗೆ ಮೀಸಲಾತಿ ನೀಡಲೇಬೇಕು ಆದರೆ ಇದು ಸುಪ್ರೀಂ ಕೋರ್ಟ್ ನ ತೀರ್ಪಿನ ಉಲ್ಲಂಘನೆಯಾಗುತ್ತದೆ. ಮೀಸಲಾತಿ ಹೆಚ್ಚಳ ಊರ್ಜಿತವಾಗಬೇಕಾದರೆ ಸಂಸತ್ತಿನಲ್ಲಿ ಸಂವಿಧಾನ ತಿದ್ದುಪಡಿ ಆಗಬೇಕು. ಸಂವಿಧಾನದ 9ನೇ ಶೇಡ್ಯೂಲ್ ಗೆ ಸೇರಿಸಬೇಕು. ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾಡಿದ ಕೂಡಲೇ, ಕಾನೂನು ತಂದ ಕೂಡಲೇ ಇದು ಸಂವಿಧಾನಬದ್ಧವಾಗಲ್ಲ.
ನಮ್ಮ ಡಬ್ಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತೀರ, ನಾವು ನಿಮ್ಮೊಂದಿಗೆ ದೆಹಲಿಗೆ ಬರುತ್ತೇವೆ, ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವಂತೆ ಒತ್ತಾಯ ಮಾಡೋಣ.

ರಾಜ್ಯಸಭೆಯಲ್ಲಿ ಕೇಂದ್ರದ ರಾಜ್ಯ ಖಾತೆಯ ಸಮಾಜ ಕಲ್ಯಾಣ ಸಚಿವರಾದ ಪ್ರತಿಮಾ ಪೌಲಿಕ್ ಅವರು 7/12/2022ರಲ್ಲಿ ಉತ್ತರ ನೀಡುವಾಗ, ಮೀಸಲಾತಿಯನ್ನು 50% ಗಿಂತ ಹೆಚ್ಚಿಗೆ ಮಾಡುವ ಯಾವುದೇ ಪ್ರಸ್ತಾವ ನಮ್ಮ ಮುಂದೆ ಇಲ್ಲ ಎಂದು ಹೇಳಿದ್ದಾರೆ. ಅಂದರೆ ಸರ್ಕಾರ ಇವತ್ತಿನವರೆಗೆ ಬಿಲ್ ಅನ್ನೇ ಕೇಂದ್ರ ಸರ್ಕಾರಕ್ಕೆ ಕಳಿಸಿಲ್ಲ. ಈ ಸರ್ಕಾರ ಚುನಾವಣೆ ಬಂದಿರುವುದರಿಂದ ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿರುವಂತೆ ಕಾಣುತ್ತಿದೆ.
ಲೋಕಸಭಾ ಸದಸ್ಯರಾದ ಎಸ್, ಮುನಿಸ್ವಾಮಿ ಪ್ರಶ್ನೆಗೆ 20/12/2022ರಲ್ಲಿ ಉತ್ತರ ನೀಡಿರುವ ಎ.ನಾರಾಯಣಸ್ವಾಮಿ ಅವರು, ಮೀಸಲಾತಿ ಹೆಚ್ಚಳದ ಬಗ್ಗೆ ಯಾವುದೇ ಪ್ರಸ್ತಾಪಗಳಿಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ನಾವು ಮೀಸಲಾತಿ ಹೆಚ್ಚಳ ಮಾಡಿದ್ದೇವೆ, ನೀವು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಎಂದು ಒತ್ತಡ ಹಾಕಿದೆಯಾ? ರಾಜ್ಯದಿಂದ ಯಾರಾದರೂ ಕೇಂದ್ರ ಸಮಾಜ ಕಲ್ಯಾಣ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರ? ಕೇಂದ್ರಕ್ಕೆ ಈ ಬಗ್ಗೆ ಮನವಿ ಮಾಡಿದ್ದಾರ?
ಮೀಸಲಾತಿ ಹೆಚ್ಚಳಕ್ಕೆ ಕಾಂಗ್ರೆಸ್ ಪಕ್ಷದ ಪೂರ್ಣ ಬೆಂಬಲ ಇದೆ. ನೀವು ಸರ್ವಪಕ್ಷ ಸಭೆ ಕರೆದು ಕೇಂದ್ರಕ್ಕೆ ನಿಯೋಗ ತೆಗೆದುಕೊಂಡು ಹೋಗುವುದಾದರೆ ನಾವು ಸಿದ್ಧರಿದ್ದೇವೆ. ಮೀಸಲಾತಿ ಹೆಚ್ಚಳ ಆಗಬೇಕು ಎಂಬುದು ನಮ್ಮ ಕಳಕಳಿ. ನಾವು ಮೀಸಲಾತಿ ಪರವಾಗಿದ್ದೇವೆ ಎಂಬುದನ್ನು ಮತ್ತೊಮ್ಮೆ ಹೇಳಲು ಬಯಸುತ್ತೇನೆ.
ಈಗ ಸಂಸತ್ ಅಧಿವೇಶನ ನಡೆಯುತ್ತಿತ್ತು, ಅಲ್ಲಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಪಾಸ್ ಮಾಡಿಕೊಳ್ಳದೆ ಹೋದರೆ ಮೀಸಲಾತಿ ಹೆಚ್ಚಳಕ್ಕೆ ಸಂವಿಧಾನಾತ್ಮಕ ರಕ್ಷಣೆ ಸಿಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಒಪ್ಪದೇ ಹೋದರೆ ಸರ್ವ ಪಕ್ಷಗಳ ನಿಯೋಗವನ್ನು ತೆಗೆದುಕೊಂಡು ಹೋಗಿ ನಾವು ನಿಮ್ಮೊಂದಿಗೆ ಬರುತ್ತೇವೆ. ಈ ಅಧಿವೇಶನದ ಸಮಯದಲ್ಲೇ ಸಂವಿಧಾನದ 9ನೇ ಶೆಡ್ಯೂಲ್ ಗೆ ಸೇರಿಸುವ ಕೆಲಸ ಆಗಲಿ ಎಂದರು
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications