ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

SSLC ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

|
Google Oneindia Kannada News

ಬೆಂಗಳೂರು, ಜೂನ್ 17: ಕೊರೊನಾ ವೈರಸ್ ಭೀತಿಯ ನಡುವೆ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸುವುದು ಉತ್ತಮವಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಈ ಹಿನ್ನೆಲೆ 10ನೇ ತರಗತಿ ಪರೀಕ್ಷೆಯನ್ನು ರದ್ದು ಗೊಳಿಸಬೇಕು ಎಂದು ಬೆಳಗಾವಿ ಮೂಲದ ರಾಜಶ್ರೀ ಎನ್ನುವವರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

Recommended Video

ಆಹಾರ ಅರಸಿ ಊರಿಗೆ ಬಂದ ನಾಗರಹಾವು | Naja Cobra snake rescue by snake lover Mohan | Oneindia Knanada

ಬುಧವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪರೀಕ್ಷೆ ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದೆ. ನ್ಯಾಯಮೂರ್ತಿ ಎಲ್ ನಾಗೇಶ್ವರ್ ರಾವ್, ಕೃಷ್ಣ ಮುರಾರಿ ಹಾಗೂ ಎಸ್ ರವೀಂದ್ರ ಭಟ್ ಒಳಗೊಂಡಿದ್ದ ತ್ರಿಸದಸ್ಯ ಪೀಠ ಈ ಅರ್ಜಿಯನ್ನು ವಿಚಾರಣೆ ನಡೆಸಿತ್ತು.

''ಅರ್ಜಿ ವಿಚಾರಣೆಗೆ ಯೋಗವಾಗಿಲ್ಲ, ಸರ್ಕಾರದ ಆದೇಶದಲ್ಲಿ ಮಧ್ಯಪ್ರವೇಶಿಸುವುದು ಸರಿಯಿಲ್ಲ. ಈ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ'' ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ, ಶಿಕ್ಷಣ ಇಲಾಖೆ ಪ್ರಕಟ ಮಾಡಿರುವ ದಿನದಂದೇ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಯಲಿದೆ.

Supreme Court Dismisses Application On Karnataka Sslc Exam Cancellation

ಜೂನ್ 25 ರಿಂದ ಜುಲೈ 4 ರವರೆಗೆ ಎಸ್ಎಸ್ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ನಿಗದಿಯಾಗಿದ್ದು, 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದಕ್ಕೆ ಅಗತ್ಯ ಕ್ರಮಗಳನ್ನು ಸಹ ಕೈಗೊಳ್ಳಲಾಗುತ್ತಿದೆ.

ಅಂದ್ಹಾಗೆ, ಕೊರೊನಾ ವೈರಸ್ ಭೀತಿಯಿಂದ ತಮಿಳುನಾಡು ಮತ್ತು ತೆಲಂಗಾಣ ಸರ್ಕಾರಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ರದ್ದು ಮಾಡಿದೆ. ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ನಿರ್ಧಾರ ಪ್ರಕಟಿಸಿದೆ.

English summary
Supreme court dismisses the petition filed to challenge the conduct of the SSLC examination in Karnataka on tuesday, june 17th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X