• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ನಿಂದ ಜಾಮೀನು

|

ಬೆಂಗಳೂರು, ಜನವರಿ 21: ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟಿ ರಾಗಿಣಿ ದ್ವಿವೇದಿ ಅವರಿಗೆ ಗುರುವಾರ ಜಾಮೀನು ಮಂಜೂರು ಮಾಡಿದೆ. ಸುಮಾರು 140 ದಿನಗಳ ಜೈಲುವಾಸ ಕೊನೆಗೂ ಅಂತ್ಯಗೊಂಡಿದೆ.

ಡ್ರಗ್ ಸೇವನೆ ಹಾಗೂ ಡೀಲಿಂಗ್ ಮಾಡಿದ ಆರೋಪದ ಮೇಲೆ ನಟಿ ರಾಗಿಣಿ ದ್ವಿವೇದಿ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಗಾಂಜಾ ಮತ್ತು ಇತರೆ ಮಾದಕ ವಸ್ತು ಸಿಕ್ಕಿದ ಹಿನ್ನೆಲೆಯಲ್ಲಿ ನಟಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ನಟಿ ರಾಗಿಣಿ ಜತೆಗೆ ಸಂಜನಾ ಗಲ್ರಾಣಿ ಸೇರಿದಂತೆ ಇತರೆ ಆರೋಪಿಗಳು ಬಂಧನಕ್ಕೆ ಒಳಗಾಗಿದ್ದರು.

ಅನಾರೋಗ್ಯದ ಹಿನ್ನೆಲೆಯಲ್ಲಿ ನಟಿ ಸಂಜನಾಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ರಾಗಿಣಿ ಅವರ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಕಳೆದ ವಾರದ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಒಂದು ವಾರ ಕಾಲ ಮುಂದೂಡಿತ್ತು.

ಡ್ರಗ್ಸ್‌ ಪ್ರಕರಣದಲ್ಲಿ ನಟಿ ಸಂಜನಾಗೆ ಜಾಮೀನು ಮಂಜೂರುಡ್ರಗ್ಸ್‌ ಪ್ರಕರಣದಲ್ಲಿ ನಟಿ ಸಂಜನಾಗೆ ಜಾಮೀನು ಮಂಜೂರು

   Bangalore: Metro ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ, ಚೇತರಿಕೆ ಕಂಡ ನಮ್ಮ ಮೆಟ್ರೋ | Oneindia Kannada

   2020ರ ಸೆ. 4ರಂದು ರಾಗಿಣಿ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳ ಅಡಿ ಅವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ. ರಾಗಿಣಿ ನವೆಂಬರ್ ಅಂತ್ಯದಲ್ಲಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಡಿ. 4ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಆರ್ ಎಫ್ ನಾರಿಮನ್, ನವೀನ್ ಸಿನ್ಹಾ ಮತ್ತು ಕೆಎಂ ಜೋಸೆಫ್ ಅವರ ಪೀಠ ರಾಜ್ಯ ಸರ್ಕಾರ ಮತ್ತು ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿ ವಿಚಾರಣೆಯನ್ನು ಮುಂದೂಡಿತ್ತು.

   English summary
   SC grants bail to Kannada film actress Ragini Dwivedi in drug racket case
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X