ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿ ಯಾವಾಗ?: ಜಿ.ಪರಮೇಶ್ವರ ಮಹತ್ವದ ಅಪ್ಡೇಟ್
ಬೆಂಗಳೂರು, ಮಾರ್ಚ್ 24: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ವಿಚಾರ ರಾಜ್ಯದಲ್ಲಿ ಚರ್ಚೆಗೆ ಬಂದಿದೆ. ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯು ಒಂದು ವಾರದೊಳಗೆ ಒಳ ಮೀಸಲಾತಿಯ ಮಧ್ಯಂತರ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿ ಆದಷ್ಟು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು.
ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಯಿತು. ಸಭೆ ಬಳಿಕ ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಟಿಯಲ್ಲಿ ಸಚಿವರು ಮಾತನಾಡಿದರು.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿಗೊಳಿಸಲು ಕರ್ನಾಟಕ ಸರ್ಕಾರ ಬದ್ಧವಾಗಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಒಳಮೀಸಲಾತಿ ಕುರಿತು ಹೇಳಿದ್ದೇವೆ. ಎಂಪೆರಿಕಲ್ ಡೇಟಾ ನಿರ್ಧಿಷ್ಟವಾದ ಅಭಿಪ್ರಾಯ ಬರುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.
ನಾಯಕರ ಫೋನ್ ಕದ್ದಾಲಿಕೆ ದೂರು ಬಂದಿಲ್ಲ
ಇನ್ನೂ ರಾಜ್ಯ ಸಚಿವರುಗಳ ಮತ್ತು ಶಾಸಕರ ಫೋನ್ ಕದ್ದಾಲಿಕೆ ಆರೋಪದ ಬಗ್ಗೆ ಈವರೆಗೆ ಯಾವುದೇ ದೂರು ದಾಖಲಾಗಿಲ್ಲ. ದೂರು ಬಂದರೆ ಪರಿಶೀಲಿಸಿ, ಕದ್ದಾಲಿಕೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ನಾನು ಅಥವಾ ಸಿಎಂ ಆಗಲಿ ಯಾರು ಸಹ ಫೋನ್ ಕದ್ದಾಲಿಕೆಗೆ ಅನುಮತಿ ನೀಡಿಲ್ಲ ಎಂದು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ನಾನು ಗಮನಿಸಿದಿಲ್ಲ. ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಸಂವಿಧಾನಕ್ಕೆ ಬದ್ಧವಾಗಿದೆ. ಈ ಆಶಯದೊಂದಿಗೆ ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಮಾಡಿದ್ದೇವೆ. ಸಂವಿಧಾನದ ಆಶಯ ಅನುಷ್ಠನಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಒಳಮೀಸಲಾತಿ, ದತ್ತಾಂಶದ ಸುದೀರ್ಘ ಚರ್ಚೆ: ಎಚ್‌ಸಿಎಂ
ಸಮಾಜ ಕಲ್ಯಾಣ ಸಚಿವರಾದ ಡಾ. ಹೆಚ್.ಸಿ.ಮಹದೆವಪ್ಪ ಅವರು ಮಾತನಾಡಿ, ಒಳ ಮೀಸಲಾತಿ ಸಂಬಂಧ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಹಿರಿಯ ಸಚಿವರ ಜೊತೆ ಸುಧೀರ್ಘ ಸಭೆ ನಡೆಸಲಾಗಿದೆ. ಒಳಮೀಸಲಾತಿ ಜಾರಿಗಾಗಿ ಈವರೆಗೂ ಆಗಿರುವ ಪ್ರಗತಿಯ ಮಾಹಿತಿಯನ್ನು ನಾಗ ಮೋಹನ್ ದಾಸ್ ಸಮಿತಿ ನೀಡಿದೆ. ಆದಷ್ಟು ಬೇಗ ಒಳಮೀಸಲಾತಿ ಜಾರಿಗೆ ಪ್ರಸ್ತಾಪ ಇಟ್ಟಿದ್ದಾರೆ ಎಂದು ತಿಳಿಸಿದರು.
ದತ್ತಾಂಶ ಆಧಾರದ ಮೇಲೆ ಸುದೀರ್ಘ ಚರ್ಚೆ ಮಾಡಿದ್ದೇವೆ ನಾಗಮೋಹನ್ ದಾಸ್ ಅವರು ವಾರದೊಳಗೆ ಮಧ್ಯಂತರ ವರದಿ ನೀಡುತ್ತಾರೆ. ಆ ವರದಿ ಮೇಲೆ ಒಳಮೀಸಲಾತಿ ಜಾರಿ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಎಂಪೆರಿಕಲ್ ಡೇಟಾಸೇರಿದಂತೆ ಎಲ್ಲ ವಿಷಯಗಳನ್ನು ಚರ್ಚೆ ಮಾಡಿ, ಸರ್ಕಾರ ಗಮನಕ್ಕೆ ತಂದಿದ್ದಾರೆ. ನಾವು ಒಳ ಮೀಸಲಾತಿ ಜಾರಿ ಮಾಡಬೇಕು ಎಂಬುದು ನಮ್ಮ ಸರ್ಕಾರದ ಬದ್ಧತೆ. ಯಾವುದೇ ಸಮುದಾಯವೂ ಇಷ್ಟೇ ಪರ್ಸೇಂಟ್ ಮೀಸಲಾತಿ ಕೊಡುವಂತೆ ಬೇಡಿಕೆ ಇಟ್ಟಿಲ್ಲ. ಬಹುತೇಕ ಎಲ್ಲಾ ಇಲಾಖೆಗಳು ದತ್ತಾಂಶ ನೀಡಿವೆ. ಸುಪ್ರೀಂಕೋರ್ಟ್ ಮಾರ್ಗಸೂಚಿ ಪ್ರಕಾರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಒಳ ಮೀಸಲಾತಿ ಜಾರಿ ಆಗುವವರೆಗೂ ಬ್ಯಾಕ್‌ಲಾಗ್ ಹುದ್ದೆ, ಮುಂಬಡ್ತಿ, ನೇಮಕಾತಿ ಯಾವುದನ್ನೂ ಮಾಡುವುದಿಲ್ಲ ಎಂದು ಅವರು ಹೇಳಿದರು.
ಸಮಸ್ಯೆಗಳಿಗೆ ಉತ್ತರಿಸಿದೇ ಶಾಸಕರ ಅಮಾನತು: ಆರ್.ಅಶೋಕ್
ರಾಜ್ಯ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಜೆಟ್ ಪುಸ್ತಕದಲ್ಲಿ ಬಹಳ ಸುಳ್ಳುಗಳಿವೆ. ಸಿಎಂ ಕಚೇರಿಯಲ್ಲಿ ಕೆಲಸ ಮಾಡುವವರು ಗ್ಯಾರಂಟಿಯನ್ನು ಹೊಗಳಿದ್ದನ್ನು ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ. ಅಧಿವೇಶನದಲ್ಲಿ ಚರ್ಚೆ ಮಾಡಿದ ಎಲ್ಲ ವಿಷಯಗಳನ್ನ ಜನರ ಮುಂದೆ ಇಡಲಿದ್ದೇವೆ. ಜನರ ನ್ಯಾಯಾಲಯದಲ್ಲಿ ಸರ್ಕಾರದ ಬಗ್ಗೆ ಜನರೇ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.
ವ್ಹೀಲ್ ಚೇರ್‌ನಲ್ಲಿರುವ ಸಿಎಂ ಸರ್ಕಾರ ತೆವಳುತ್ತಿದೆ?
ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಾಗಿದೆ. ಸಿಎಂ ಸಿದ್ದರಾಮಯ್ಯ ವೀಲ್ ಚೇರ್‌ನಲ್ಲಿದ್ದರೆ, ಸರ್ಕಾರ ಇನ್ನೂ ತೆವಳುತ್ತಿದೆ. 18 ಶಾಸಕರನ್ನು ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿದ್ದಾರೆ. ಮಾನಗೇಡಿ ಕಾಂಗ್ರೆಸ್‌ನವರು ವಿಧಾನಪರಿಷತ್‌ನಲ್ಲಿ ಸಭಾಪತಿ ಸ್ಥಾನದಲ್ಲಿ ಕುಳಿತಿದ್ದ ಎಸ್.ಎಲ್.ಧರ್ಮೇಗೌಡ ಅವರನ್ನು ಎಳೆದು ಅಪಮಾನ ಮಾಡಿದ್ದರು. ಆದರೂ ಬಿಜೆಪಿ ಧರಣಿ ಮಾಡಿದ್ದೇ ತಪ್ಪು ಎನ್ನುತ್ತಿದ್ದಾರೆ.
ಬಾಬಾ ಸಾಹೇಬ್ ಅಂಬೇಡ್ಕರ್‌ರ ಸಂವಿಧಾನಕ್ಕೆ ವಿರೋಧವಾಗಿ ನಡೆದುಕೊಂಡಿದ್ದಕ್ಕೆ ಬಿಜೆಪಿ ಪ್ರತಿಭಟಿಸಿದೆ. ಕಾಂಗ್ರೆಸ್ ಚಿತಾವಣೆಯಿಂದ ಸ್ಪೀಕರ್ ಯು.ಟಿ.ಖಾದರ್ ಅಮಾನತು ಮಾಡಿದ್ದಾರೆ. ಹಿಂದಿನ ಯಾವುದೇ ಸ್ಪೀಕರ್ ಈ ರೀತಿ ದೀರ್ಘಾವಧಿಯ ಅಮಾನತು ಮಾಡಿಲ್ಲ ಎಂದು ತಿಳಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications