ಇಂದು ಕಾವೇರಿ ತೀರ್ಪು: ಕರ್ನಾಟಕದಾದ್ಯಂತ ಬಿಗಿ ಬಂದೋಬಸ್ತ್
ಬೆಂಗಳೂರು, ಫೆಬ್ರವರಿ 16: ಕರ್ನಾಟಕ, ತಮಿಳುನಾಡು ಮತ್ತು ಕೇರಳದ ನಡುವೆ ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದದ ಅಂತಿಮ ತೀರ್ಪು ಸುಪ್ರೀಂ ಕೋರ್ಟ್ ನಲ್ಲಿ ಇಂದು(ಫೆ.16) ಹೊರಬೀಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕದಾದ್ಯಂತ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ.
ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಮದ್ಯಮಾರಾಟ ನಿಷೇಧಿಸಲಾಗಿದೆ. ಕೆಆರ್ ಎಸ್ ಸುತ್ತಮುತ್ತ ಸಿಆರ್ ಪಿಸಿ ಸೆಕ್ಷನ್144 ಜಾರಿಗೊಳಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ.
ಕಾವೇರಿ ನದಿ ನೀರು ಹಂಚಿಕೆಯ ಕುರಿತು 2007ರ ಕಾವೇರಿ ನ್ಯಾಯಾಧಿಕರಣದ ಐ ತೀರ್ಪಿನ ವಿರುದ್ಧ ಕರ್ನಾಟಕ, ತಮಿಳುನಾಡು, ಕೇರಳ ರಾಜ್ಯಗಳು ಮೇಲ್ಮನವಿ ಸಲ್ಲಿಸಿದ್ದವು. ಸುಪ್ರಿಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಪ್ರಕರಣದ ವಿಚಾರಣೆ ನಡೆಸಿದ್ದು, ಫೆ.16 ರಿಂದ ಫೆಬ್ರವರಿ 23ರೊಳಗೆ ತೀರ್ಪು ನೀಡಲಿದೆ.













Click it and Unblock the Notifications