ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಂಬಳ ಆಚರಣೆಗೆ ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

By Mahesh
|
Google Oneindia Kannada News

ನವದೆಹಲಿ, ನವೆಂಬರ್ 06 : ಕರ್ನಾಟಕದ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳಕ್ಕೆ ತಡೆ ನೀಡಬೇಕೆಂದು ಪ್ರಾಣಿದಯಾಸಂಘಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಿರಸ್ಕರಿಸಿದೆ.

2017-18ನೇ ಸಾಲಿನ ಕಂಬಳ ನಡೆಯುವ ವೇಳಾಪಟ್ಟಿ 2017-18ನೇ ಸಾಲಿನ ಕಂಬಳ ನಡೆಯುವ ವೇಳಾಪಟ್ಟಿ

People for the Ethical Treatment of Animals (ಪೆಟಾ) ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಈ ಮಹತ್ವದ ತೀರ್ಪು ನೀಡಿದೆ. ಕರ್ನಾಟಕದ ಅವಿಭಜಿತ ಕನ್ನಡ ಜಿಲ್ಲೆಗಳಲ್ಲಿ ನವೆಂಬರ್ ತಿಂಗಳಿನಿಂದ ಮಾರ್ಚ್ ಅವಧಿಯಲ್ಲಿ ಸಾಂಪ್ರದಾಯಿಕ ಕ್ರೀಡೆ ಕಂಬಳ ಆಯೋಜಿಸಲಾಗುತ್ತದೆ.

SC refuses to saty a plea to ban Kambala
ಸುಪ್ರೀಂಕೋರ್ಟಿನ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಕಂಬಳಕ್ಕೆ ತಡೆಯಾಜ್ಞೆ ನೀಡಲು ಸರಿಯಾದ ಕಾರಣಗಳಿಲ್ಲ ಎಂದು ಹೇಳಿದರು. ಮುಂದಿನ ವಿಚಾರಣೆಯನ್ನು ನವೆಂಬರ್ 13ಕ್ಕೆ ಮುಂದೂಡಲಾಗಿದೆ. ಅಲ್ಲದೆ, ಈ ಕುರಿತಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಕಂಬಳ ಎಂದರೇನು? ಕಂಬಳ ನಮಗೇಕೆ ಬೇಕು?ಕಂಬಳ ಎಂದರೇನು? ಕಂಬಳ ನಮಗೇಕೆ ಬೇಕು?

ಕಂಬಳದ ವೇಳೆ ಓಡುವ ಕೋಣಗಳು 140 ರಿಂದ 160 ಮೀಟರ್ ದೂರವನ್ನು 12 ರಿಂದ 13 ಸೆಕೆಂಡುಗಳಲ್ಲಿ ಕ್ರಮಿಸಲಿವೆ. 2014ರಲ್ಲಿ ನಿಷೇಧಕ್ಕೊಳಗಾಗಿದ್ದ ಕಂಬಳಕ್ಕೆ ಮತ್ತೆ ರಾಜ್ಯ ಸರ್ಕಾರದ ಮಸೂದೆಯ ಬೆಂಬಲ ಸಿಕ್ಕಿದ್ದರಿಂದ ಈ ವರ್ಷ ಕಂಬಳ ಮತ್ತೆ ಆರಂಭವಾಗಿದೆ.

English summary
The Supreme Court has refused to stay a plea filed by animal rights activists challenging the annual buffalo race known as Kambala.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X