Get Updates
Get notified of breaking news, exclusive insights, and must-see stories!

ಎಂ.ಎಂ.ಕಲಬುರ್ಗಿ ಹತ್ಯೆ, ತನಿಖಾ ವರದಿ ಕೇಳಿದ ಸುಪ್ರೀಂಕೋರ್ಟ್

ಬೆಂಗಳೂರು, ನವೆಂಬರ್ 26 : ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ಬಗ್ಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 2015ರಲ್ಲಿ ಎಂ.ಎಂ.ಕಲಬುರ್ಗಿ ಅವರನ್ನು ಹತ್ಯೆ ಮಾಡಲಾಗಿತ್ತು.

ಸೋಮವಾರ ಸುಪ್ರೀಂಕೋರ್ಟ್ ಎಂ.ಎಂ.ಕಲಬುರ್ಗಿ ಅವರ ಕುಟುಂಬದವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತು. ತನಿಖೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಕೋರ್ಟ್, ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.

ಎರಡು ವಾರದಲ್ಲಿ ಎಂ.ಎಂ.ಕಲಬುರಗಿ ಅವರ ಹತ್ಯೆ ಪ್ರಕರಣದ ತನಿಖೆ ಬಗ್ಗೆ ತನಿಖಾ ವರದಿಯನ್ನು ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

SC seeks status report of investigation in MM Kalburgi murder case

2015ರ ಆಗಸ್ಟ್ 30ರಂದು ಬೆಳಗ್ಗೆ ಧಾರವಾಡದ ಕಲ್ಯಾಣ ನಗರದಲ್ಲಿರುವ ಎಂ.ಎಂ.ಕಲಬುರ್ಗಿ ಅವರ ಮನೆಗೆ ಬಂದಿದ್ದ ಅಪರಿಚಿತರು, ಬೆಲ್ ಮಾಡಿದ್ದರು. ಕಲಬುರ್ಗಿ ಅವರು ಬಾಗಿಲು ತೆರೆದಾಗ ಎರಡು ಸುತ್ತು ಗುಂಡು ಹಾರಿಸಿ ಅವರನ್ನು ಹತ್ಯೆ ಮಾಡಿದ್ದರು.

ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಹತ್ಯೆ ನಡೆದು ಮೂರು ವರ್ಷಗಳು ಕಳೆದರೂ ಯಾವೊಬ್ಬ ಆರೋಪಿಯನ್ನು ಬಂಧಿಸಲು ಸಾಧ್ಯವಾಗಲಿಲ್ಲ.

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ, ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾದ ಆರೋಪಿಗಳೇ ಕಲಬುರ್ಗಿ ಅವರ ಹತ್ಯೆಯಲ್ಲಿಯೂ ಭಾಗಿಯಾಗಿದ್ದಾರೆ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಈತ ತನಿಖೆ ಸಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+