ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಮಸೂದೆ ಮಂಡನೆ

ಬೆಳಗಾವಿ,ಡಿಸೆಂಬರ್ 21: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿನ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಸಂಬಂಧ ಸರ್ಕಾರ ಸುಗ್ರೀವಾಜ್ಞೆಯನ್ನ ಹೊರಡಿಸಿದ್ದು, ಪರಿಶಿಷ್ಟ ಜಾತಿ ತ್ತು ಪರಿಶಿಷ್ಟ ಪಂಗಡಗಳ ವಿಧೇಯಕ 2022 ಅನ್ನು ಮಂಗಳವಾರ ಸದನದಲ್ಲಿ ಮಂಡಿಸಿದೆ.

ಇನ್ನೂ ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ವಿಧೇಯಕ ಮಂಡಿಸಿದರು. ಎಸ್‌ಸಿ ವರ್ಗಕ್ಕೆ ಪ್ರಸ್ತುತ ಶೇ.15 ಮೀಸಲಾತಿ ಇದ್ದು, ಅದನ್ನು ಶೇ.17ಕ್ಕೆ ಮತ್ತು ಎಸ್‌ಟಿ ವರ್ಗದ ಮೀಸಲಾತಿ ಶೇ.3 ಇದ್ದು, ಅದನ್ನು ಶೇ.7ಕ್ಕೆ ಹೆಚ್ಚಿಸುವ ಕುರಿತು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ. ಮೀಸಲಾತಿ ಪ್ರಮಾಣ ಹೆಚ್ಚಳ ಸಂಬಂಧ ಸರ್ಕಾರವು ಸರ್ವಪಕ್ಷಗಳ ಸಭೆ ನಡೆಸಿ ತೀರ್ಮಾನ ಕೈಗೊಂಡಿತ್ತು. ಬಳಿಕ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಸುಗ್ರೀವಾಜ್ಞೆ ಹೊರಡಿಸಿತ್ತು. ಇದೀಗ ಸದನದಲ್ಲಿ ವಿಧೇಯಕ ಮಂಡಿಸುವ ಮೂಲಕ ಮೀಸಲಾತಿ ಪ್ರಮಾಣ ಹೆಚ್ಚಳ ಅನುಷ್ಠಾನಕ್ಕೆ ಮುಂದಾಗಿದೆ.

ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ;ವಿಸ್ತೃತ ಚರ್ಚೆಗೆ ಸರ್ಕಾರ ಸಿದ್ಧ: ಸಿಎಂ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಮೀಸಲಾತಿ ಪ್ರಮಾಣದ ಹೆಚ್ಚಳ ಹಾಗೂ ಅದರ ಕಾನೂನಾತ್ಮಕ ಸವಾಲುಗಳ ಪರಿಹಾರಗಳ ಕುರಿತು ಸದನದಲ್ಲಿ ವಿಸ್ತೃತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Sc St Reservation Bill Presented In Vidhanasabhe At Belagavi Winter Session

ವಿಧಾನಸಭೆಯಲ್ಲಿಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಡಿಸಿದ ನಿಲುವಳಿ ಸೂಚನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು, ಈ ವಿಷಯದಲ್ಲಿ ಸರ್ಕಾರ ಹಾಗೂ ಪ್ರತಿಪಕ್ಷಗಳು ಒಂದೇ ನಿಲುವು ಹೊಂದಿವೆ.ಜನ ಸಂಖ್ಯೆಯ ಪ್ರಮಾಣಕ್ಕೆ ಅನುಗುಣವಾಗಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ.15 ರಿಂದ ಶೇ.17 ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲು ಪ್ರಮಾಣವನ್ನು ಶೇ.3 ರಿಂದ ಶೇ.7 ಕ್ಕೆ ಹೆಚ್ಚಿಸಲು ಕ್ರಮವಹಿಸಲಾಗಿದೆ.ಈ ನಿಟ್ಟಿನಲ್ಲಿ ಎದುರಾಗಬಹುದಾದ ಕಾನೂನಾತ್ಮಕ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವುದು, ಸಂವಿಧಾನಾದ 9 ನೇ ಪರಿಚ್ಛೇದದಡಿ ಸೇರಿಸಲು ಅನುಕೂಲವಾಗುವಂತೆ ವಿಸ್ತೃತವಾಗಿ ಚರ್ಚಿಸಲು ಸರ್ಕಾರ ಸಿದ್ಧವಿದೆ. ಈ ಬಗ್ಗೆ ಆರೋಗ್ಯಕರ ಚರ್ಚೆಗೆ ಸಮಯ ನಿಗದಿಪಡಿಸಲು ಸಭಾಧ್ಯಕ್ಷರನ್ನು ಕೋರಿದರು.

ಸರ್ಕಾರಿ ನೌಕರರ ಹಳೇ ಪಿಂಚಣಿ ವ್ಯವಸ್ಥೆ ಸಾಧಕ ಭಾಧಕಗಳ ಚರ್ಚೆಗೆ ನಿರ್ಧಾರ: ಸಿಎಂ

ಸರ್ಕಾರಿ ನೌಕರರ ಹಳೇ ಪಿಂಚಣಿ ಜಾರಿಗೆ ವಿಧಾನ ಸಭೆಯಲ್ಲಿ ಸದಸ್ಯರ ಆಗ್ರಹಕ್ಕೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೊಂದು ಗಂಭೀರ ವಿಚಾರವಾಗಿದ್ದು ಸದನದಲ್ಲಿ ವಿಸ್ತೃತ ಚರ್ಚೆಯಾಗಲಿ ಎಂದರು.

Sc St Reservation Bill Presented In Vidhanasabhe At Belagavi Winter Session

ಇಡೀ ರಾಜ್ಯದ ಜನರ ಶ್ರಮದಿಂದ ಬೊಕ್ಕಸಕ್ಕೆ ಹಣ ಬರುತ್ತದೆ. ಆ ಪೈಕಿ ಯಾವ್ಯಾವ ಬಾಬತ್ತುಗಳಿಗೆ ಖರ್ಚು ಮಾಡಬೇಕೆಂದು ಆಯವ್ಯದಲ್ಲಿ ನಿರ್ಧರಿಸಲಾಗುತ್ತದೆ, ಹಾಗೂ ಎಷ್ಟು ಖರ್ಚು ಮಾಡಲಾಗುತ್ತದೆ ಎಂಬ ಬಗೆಗೆ ಚರ್ಚೆ ಆಗುತ್ತದೆ.

ಈಗಾಗಲೇ ಸರ್ಕಾರಿ ನೌಕರರಿಗೆ ಹಲವಾರು ಸೌಕರ್ಯಗಳನ್ನು ಒದಗಿಸಲಾಗಿದೆ, ಕಾಲಕಾಲಕ್ಕೆ ಅವರ ಟಿಎ, ಡಿಎ ನೀಡಲಾಗುತ್ತಿದೆ.ಈ ಹಿಂದೆ ಡಿಎ ನೀಡಲು ಬಹಳ ಸಮಯ ತೆಗೆದುಕೊಳ್ಳಲಾಗುತಿತ್ತು, ಆದರೆ ನಮ್ಮ ಸಕಾರ 24 ಗಂಟೆಯಲ್ಲಿ ನೌಕರರಿಗೆ ಟಿಎ ನೀಡಿದೆ, 7 ನೇ ವೇತನ ಆಯೋಗವನ್ನು ರಚಿಸಲಾಗಿದೆ. 2006 ರಿಂದ ಹೊಸ ಪಿಂಚಣಿ ಜಾರಿಯಾಗಿದೆ, ಹಳೇ ಪಿಂಚಣಿ ಸಂಬಂಧ ಸಾಧಕ ಭಾದಕಗಳ ಚರ್ಚೆ ಮಾಡಬೇಕಾಗಿರುವುದರಿಂದ ಸದನದಲ್ಲಿ ಸುಧೀರ್ಘವಾಗಿ ಚರ್ಚಿಸೋಣ ಎಂದರು, ಇದಕ್ಕೆ ಸದನದ ಸದಸ್ಯರು ಸಮ್ಮತಿ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+