ಪರಿಶಿಷ್ಟ ಜಾತಿ ಮತ್ತು ಪಂಗಡ ಮೀಸಲಾತಿ ಪರಮರ್ಶೆಗೆ ಕ್ಯಾಬಿನೆಟ್ ಉಪ ಸಮಿತಿ ರಚನೆ
ಬೆಂಗಳೂರು, ನವೆಂಬರ್ 25: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಸಮುದಾಯಕ್ಕೆ ನೀಡಿರುವ ಮೀಸಲಾತಿ ಪ್ರಮಾಣ ಪರಮಾರ್ಶಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡ ಸಚಿವ ಸಂಪುಟ ಉಪ ಸಮಿತಿ ರಚಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
ಬಿ. ಶ್ರೀರಾಮುಲು ಅಧ್ಯಕ್ಷರಾಗಿದ್ದು, ಸದಸ್ಯರಾಗಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ, ಜೆ. ಮಾಧುಸ್ವಾಮಿ ಅವರನ್ನು ನೇಮಿಸಲಾಗಿದೆ. ಸದ್ಯ ಪರಿಶಿಷ್ಠ ಜಾತಿಗೆ ಶೇ. 15 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ. 3 ಮೀಸಲಾತಿ ಇದೆ. ಕೇಂದ್ದ ಸರ್ಕಾರ ಪರಿಶಿಷ್ಠ ಜಾತಿ ಮತ್ತು ಪಂಗಡದ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿಗೆ ಶೇ. 17, ಪರಿಶಿಷ್ಟ ಪಂಗಡಕ್ಕೆ ಶೇ. 7.5 ಷ್ಟು ನೀಡಿತ್ತು.
ಬಿಗ್ ಬ್ರೇಕಿಂಗ್; ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿ ರದ್ದು
ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಸಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕೂಗು ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಸಚಿವ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಕ್ಕೆ ಇರುವ ಮೀಸಲಾತಿ ಪ್ರಮಾಣ ಪರಮಾರ್ಶಿಸಲು ಸಚಿವ ಸಂಪುಟ ಉಪ ಸಮಿತಿ ಸಭೆ ರಚಿಸಲು ಅನುಮೋದನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚನೆಯಾಗಿದ್ದು, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಈಗ ಇರುವ ಮೀಸಲಾತಿ ಪ್ರಮಾಣ, ಹೆಚ್ಚಿಸುವ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಿ ವರದಿಯನ್ನು ಸಲ್ಲಿಸಲಿದೆ. ರಾಜ್ಯದಲ್ಲಿ ಈಗಾಗಲೇ ಕುರುಬ ಸಮುದಾಯ ತಮ್ಮನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಬೇಡಿಕೆ ಇಟ್ಟಿದೆ. ಅದೇ ರೀತಿ ಪಂಚಮಸಾಲಿ (ಲಿಂಗಾಯತರು) ಹಿಂದುಳಿದ ವರ್ಗ 3A ಕೆಟಗಿರಿ ಬದಲಿಗೆ 2A ಗೆ ಸೇರ್ಪಡೆ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಇಂತಹ ಬೆಳವಣಿಗೆ ನಡುವೆ ಸಚಿವ ಸಂಪುಟ ಸಮಿತಿ ರಚನೆಯಾಗಿದೆ..