ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ ವಿಶ್ವನಾಥ್ ಅವರಿಗೆ ಭಾರಿ ಆಘಾತ ಕೊಟ್ಟ ಸುಪ್ರೀಂ ತೀರ್ಪು

|
Google Oneindia Kannada News

ಬೆಂಗಳೂರು, ಜನವರಿ 28: ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಸಂಪುಟ ಸೇರುವ ಆಸೆ ಇರಿಸಿಕೊಂಡಿದ್ದ ಎಚ್ ವಿಶ್ವನಾಥ್ ಅವರಿಗೆ ಮತ್ತೆ ನಿರಾಶೆಯಾಗಿದೆ. ಸುಪ್ರೀಂಕೋರ್ಟ್ ಇಂದು(ಜ.28) ನೀಡಿದ ತೀರ್ಪು ಎಚ್ ವಿಶ್ವನಾಥ್ ಅವರಿಗೆ ಭಾರಿ ಆಘಾತ ತಂದಿದೆ.

ವಿಧಾನ ಪರಿಷತ್ ಸದಸ್ಯನಾಗಿ ವಿಶ್ವನಾಥ್ ಅವರು ಸಚಿವ ಸಂಪುಟ ಸೇರುವ ಆಸೆ ಭಗ್ನಗೊಂಡಿದ್ದು ನೆನಪಿರಬಹುದು. ಈಗ ಉಪ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು ಶಾಸಕನಾಗಿ ಸಂಪುಟ ಸೇರುವ ಕನಸು ಕಾಣುತ್ತಿದ್ದರು.

ಸಚಿವರಾಗುವಂತಿಲ್ಲ: ಎಚ್ ವಿಶ್ವನಾಥ್ ಅವರಿಗೆ ಭಾರಿ ಆಘಾತ ನೀಡಿದ ಹೈಕೋರ್ಟ್ಸಚಿವರಾಗುವಂತಿಲ್ಲ: ಎಚ್ ವಿಶ್ವನಾಥ್ ಅವರಿಗೆ ಭಾರಿ ಆಘಾತ ನೀಡಿದ ಹೈಕೋರ್ಟ್

ಎಚ್ ವಿಶ್ವನಾಥ್ ಅವರು ಸಚಿವರಾಗಲು ಅನರ್ಹರೆಂದು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ.

SC Upholds Karnataka HC Order on H Vishwanath disqualified to hold minister post

ಸಂವಿಧಾನದ 164 (1ಬಿ) ಮತ್ತು 361 (b) ವಿಧಿಗಳ ಅಡಿ ಮುಂದೆ ಅವರು ವಿಧಾನಸಭೆಗೆ ಮರು ಆಯ್ಕೆಯಾಗುವವರೆಗೂ ಸಚಿವರಾಗಲು ಎಚ್ ವಿಶ್ವನಾಥ್ ಅವರಿಗೆ ಅರ್ಹತೆ ಇಲ್ಲ ಎಂದು ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಮಾನ್ಯ ಮಾಡಿದೆ.

ಎಂಟಿಬಿ ನಾಗರಾಜ್ ಮತ್ತು ಎಚ್ ವಿಶ್ವನಾಥ್ ಇಬ್ಬರೂ ಉಪ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಆದರೆ ಆರ್ ಶಂಕರ್ ಅವರು ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಬದಲಾಗಿ ಅವರನ್ನು ಬಿಜೆಪಿ ವಿಧಾನಪರಿಷತ್‌ಗೆ ಆಯ್ಕೆ ಮಾಡಾಲಾಗಿತ್ತು.

ವಿಶ್ವನಾಥ್ ಅವರು ಸಾಹಿತ್ಯ ಕ್ಷೇತ್ರದ ವಿಭಾಗದಿಂದ ವಿಧಾನಪರಿಷತ್‌ಗೆ ನಾಮನಿರ್ದೇಶನಗೊಂಡಿದ್ದಾರೆ. ಹೀಗಾಗಿ ಅವರು ಸಚಿವ ಸಂಪುಟ ಸೇರ್ಪಡೆಯಾಗಲು ಅರ್ಹರಲ್ಲ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

English summary
Supreme Court Upholds Karnataka High Court Order on H Vishwanath disqualified to hold minister post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X