ಬಡ್ತಿಯಲ್ಲಿ ಮೀಸಲಾತಿ ಆದೇಶ: ಕರ್ನಾಟಕದ ಹಾದಿ ಸುಗಮವೇ?
ಬೆಂಗಳೂರು, ಸೆ.26: ಸರ್ಕಾರಿ ಉದ್ಯೋಗದಲ್ಲಿ ಬಡ್ತಿ ನೀಡುವಾಗ ಮೀಸಲಾತಿ ಅನುಸರಿಸಬೇಕಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದ್ದರೂ ಒಂದು ವೇಳೆ ಬಡ್ತಿಯಲ್ಲಿ ಮೀಸಲಾತಿ ನೀಡುವುದಾದರೆ ಅದು ಆಯಾ ರಾಜ್ಯಗಳಿಗೆ ಬಿಟ್ಟ ವಿಚಾರ ಎಂದು ಹೇಳಿರುವುದು ಕರ್ನಾಟಕದಲ್ಲಿ ಬಡ್ತಿ ಮೀಸಲಾತಿ ಜಾರಿಗೆ ಹಸಿರು ನಿಶಾನೆ ತೋರಿದಂತಾಗುತ್ತದೆಯೇ?
ಹೀಗೊಂದು ಚರ್ಚೆ ಸರ್ಕಾರದ ಉನ್ನತ ಮಟ್ಟದಲ್ಲಿ ನಡೆದಿದೆ. ಕಳೆದ ಎರಡೂವರೆ ದಶಕಗಳಿಂದ ಬಡ್ತಿಯಲ್ಲಿ ಮೀಸಲಾತಿ ಕುರಿತಂತೆ ಕರ್ನಾಟಕದ ಕಾನೂನು ಹೋರಾಟ ನಡೆಯುತ್ತಿದ್ದು ಇದೀಗ ಆದೇಶ ಹೊರಬಿದ್ದಿದೆ.
ಆದರೂ ಒಂದು ಅರ್ಥದಲ್ಲಿ ಹೋರಾಟಕ್ಕೆ ಹಿನ್ನಡೆಯೇ ಉಂಟಾಗಿದೆ.ಏಕೆಂದರೆ ಸುಪ್ರೀಂಕೋರ್ಟ್ ಬಡ್ತಿಯಲ್ಲಿ ಮೀಸಲಾತಿ ಅಗತ್ಯವಿಲ್ಲ ಎಂದು ಹೇಳಿಯೂ ಕೊನೆಗೆ ಕೊಡುವುದಾದರೆ ಆಯಾ ರಾಜ್ಯಗಳ ವಿವೇಚನೆಗೆ ಬಿಟ್ಟ ವಿಚಾರ ಎಂದಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಡ್ತಿ ಮೀಸಲಾತಿ ಜಾರಿಗೆ ಈಗಾಗಲೇ ಕಾಯ್ದೆಯನ್ನು ರಚಿಸಲಾಗಿದ್ದು, ರಾಷ್ಟ್ರಪತಿಗಳ ಅಂಕಿತವೂ ದೊರೆತಿದೆ. ಅಂಕಿತ ಬಳಿ ಸುಪ್ರೀಂಕೋರ್ಟ್ ನ ಆದೇಶಕ್ಕೆ ಕಾಯುತ್ತಿದ್ದ ಸರ್ಕಾರ ಇದೀಗ ಬಡ್ತಿಯಲ್ಲಿ ಮೀಸಲಾತಿಯನ್ನು ರಚಿಸುವ ಕಾಯ್ದೆಯನ್ನು ಇದೀಗ ಅನುಷ್ಠಾನಗೊಳಿಸುವ ಒತ್ತಡಕ್ಕೆ ಸಿಲುಕಿದೆ.

ಈಗಾಗಲೇ 1977ರಿಂದ ಈವರೆಗೆ ನೀಡಿರುವ ಬಡ್ತಿಯಲ್ಲಿನ ಮೀಸಲಾತಿಯನ್ನು ರದ್ದುಗೊಳಿಸಿ ಕಳೆದ ಫೆಬ್ರವರಿಯಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿತ್ತು. ಅದರಿಂದ ಸರಿಸುಮಾರು 20ಸಾವಿರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ನೌಕರರಿಗೆ ಮುಂಬಡ್ತಿ ನೀಡಬೇಕೆಂಬ ಕಾರಣಕ್ಕಾಗಿ ಬಡ್ತಿ ರಕ್ಷಣೆಗಾಗಿ ವಿಶೇಷ ಕಾಯ್ದೆಯನ್ನು ರಾಜ್ಯ ಸರ್ಕಾರ ರಚಿಸಿ ರಾಷ್ಟ್ರಪತಿಗಳಿಗೆ ರವಾನಿಸಿತ್ತು.
ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಸ್‌ಸಿ ಎಸ್‌ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಬೇಕೆನ್ನುವ ನೀತಿಯನ್ನು ಅನುಸರಿಸಿತ್ತು. ಅದರ ಕಾರಣಕ್ಕಾಗಿಯೇ ವಿಶೇಷ ಕಾಯ್ದೆಯನ್ನು ರಚಿಸಿ ರಾಷ್ಟ್ರಪತಿಗಳ ಅನುಮತಿಗೆ ಕಳಿಸಿತ್ತು.
ಅಂತಿಮವಾಗಿ ರಾಷ್ಟ್ರಪತಿಗಳು ಸಹಿ ಹಾಕಿದ್ದರೂ ಆ ವೇಳೆ ಸರ್ಕಾರದ ಅವಧಿ ಮುಗಿದಿತ್ತು, ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ವಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಇಲ್ಲಿಯವರೆಗ ಬಹಿರಂಗವಾಗಿ ಬಡ್ತಿ ಮೀಸಲಾತಿಗೆ ಬದ್ಧ ಎಂದು ಹೇಳಿದ್ದಾರೆ.
ಆದರೆ ಸರ್ಕಾರದಲ್ಲಿನ ಕೆಲಸ ಸಚಿವರ ತೀವ್ರ ಪ್ರತಿರೋಧದಿಂದಾಗಿ ಬಡ್ತಿ ಮೀಸಲಾತಿ ಸುರಕ್ಷಾ ಕಾಯ್ದೆಯನ್ನು ಅನುಷ್ಠಾನಗೊಳಿಸಿರಲಿಲ್ಲ. ಆದರೆ ಬುಧವಾರ ಸುಪ್ರೀಂಕೋರ್ಟ್ ತೀರ್ಪು ರಾಜ್ಯಸರ್ಕಾರಕ್ಕೆ ಬಿಟ್ಟಿದ್ದು ಎಂಬ ಅಂಶವನ್ನು ಒಳಗೊಂಡಿರುವುದರಿಂದ ಕರ್ನಾಟಕದಲ್ಲಿ ಬಡ್ತಿ ಮೀಸಲಾತಿ ಜಾರಿಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಆದರೆ ಸಾಮಾನ್ಯ ಹಿಂದುಳಿದ ಅಲ್ಪಸಂಖ್ಯಾತರ ಸಂಘಟನೆಯಾದ ಅಹಿಂಸಾ ಸಂಘಟನೆಯು ಬಡ್ತಿ ಮೀಸಲಾತಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದು, 22 ಸಾವಿರ ಪರಿಶಿಷ್ಟ ಜಾತಿ, ವರ್ಗ ನೌಕರರ ಹಿತರಕ್ಷಣೆಗಾಗಿ ಪ್ರತಿ ವರ್ಷ 4 ಸಾವಿರ ನೌಕರರನ್ನು ಸರ್ಕಾರ ಎದುರು ಹಾಕಿಕೊಳ್ಳಬೇಕಾಗುತ್ತಿದೆ ಎನ್ನುವ ತರ್ಕವೂ ಕೇಳಿಬರುತ್ತಿದೆ.
ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಹೊರಬಿದ್ದ ತಕ್ಷಣವೇ ಪ್ರತಿಕ್ರಿಯೆ ನೀಡಲು ಸಿಎಂ ತೀವ್ರ ಹಿಂದೇಟು ಹಾಕಿದ್ದು ಯಾವ ರೀತಿ ತೀರ್ಪನ್ನು ಪಾಲಿಸಬೇಕು ಎಂಬ ಚಿಂತನೆ ಇದೀಗ ಸರ್ಕಾರದ ಮಟ್ಟದಲ್ಲಿ ಆರಂಭವಾಗಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ











Click it and Unblock the Notifications