ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ 16 ಜಿಲ್ಲೆಗಳಲ್ಲಿ ಕೈಕೊಡಲಿದೆ ಹಿಂಗಾರು, ಬೆಳೆಗೆ ಭೀತಿ!

By Nayana
|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 10: ರಾಜ್ಯದ 13 ಜಿಲ್ಲೆಗಳಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಆಗದೆ ಬರವನ್ನು ಎದುರಿಸುತ್ತಿವೆ, ಇದೀಗ ಅಕ್ಟೋಬರ್ ನಲ್ಲಿ ಹಿಂಗಾರು ಮಳೆಯೂ ಕೈಕೊಡುವ ಸಾಧ್ಯತೆ ಇದ್ದು ಹಿಂಗಾರು ಬೆಳೆಯನ್ನೂ ಕಳೆದುಕೊಳ್ಳುವ ಭೀತಿಯನ್ನು ರೈತರು ಅನುಭವಿಸುತ್ತಿದ್ದಾರೆ.

ಕೇರಳ ಪ್ರವಾಹ: ಎಂಟು ದಿನ ಜತೆಗಿದ್ದರೂ ಇವರ ಗುರುತು ಯಾರಿಗೂ ಸಿಗಲಿಲ್ಲ! ಕೇರಳ ಪ್ರವಾಹ: ಎಂಟು ದಿನ ಜತೆಗಿದ್ದರೂ ಇವರ ಗುರುತು ಯಾರಿಗೂ ಸಿಗಲಿಲ್ಲ!

ಮಲೆನಾಡು ಜಿಲ್ಲೆಗಳು, ಕರಾವಳಿಯ ಜಿಲ್ಲೆಗಳು ಹೊರತುಪಡಿಸಿ ಉತ್ತರ ಹಾಗೂ ದಕ್ಷಿಣ ಒಳನಾಡಿನ 16 ಜಿಲ್ಲೆಗಳು ಮುಂಗಾರು ಕೊರತೆಯನ್ನು ಎದುರಿಸುತ್ತಿವೆ.ಅಕ್ಟೋಬರ್ ನಿಂದ ಆರಂಭವಾಗುವ ಹಿಂಗಾರು ಮಳೆಯಲ್ಲೂ ಕೊರತೆ ಎದುರಾದರೆ ಎನ್ನುವ ಪ್ರಶ್ನೆ ರೈತರನ್ನು ಕಾಡುತ್ತಿದೆ.

ಮಳೆಯಿಂದ ವಿವಿಧ ರಾಜ್ಯಗಳಲ್ಲಿ ಆಗಿರುವ ಹಾನಿಯ ಲೆಕ್ಕ ಕೊಟ್ಟ ಕೇಂದ್ರ ಗೃಹ ಇಲಾಖೆ ಮಳೆಯಿಂದ ವಿವಿಧ ರಾಜ್ಯಗಳಲ್ಲಿ ಆಗಿರುವ ಹಾನಿಯ ಲೆಕ್ಕ ಕೊಟ್ಟ ಕೇಂದ್ರ ಗೃಹ ಇಲಾಖೆ

ಹವಾಮಾನ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಾತ್ರ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆಯಾಗಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಮಳೆಯೇ ಆಗಿಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕದ ಬಯಲುಸೀಮೆ ಜಿಲ್ಲೆಗಳಾದ ಮಂಡ್ಯ, ಚಿಕ್ಕಬಳ್ಳಾಪುರ, ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಹಾವೇರಿ, ಗದಗ, ವಿಜಯಪುರದಲ್ಲಿ ಬರ ಪರಿಸ್ಥಿತಿ ಇದೆ.

Scarcity threat to Rabi crop in 16 district

ರಾಜ್ಯದಲ್ಲಿ ಉಂಗಾರು ಶೇ.70ರಿಂದ 80ರಷ್ಟು ವಾಡಿಕೆ ಮಳೆಯಾಗಿದೆ. ಶೇ.20ರಷ್ಟು ಮಾತ್ರ ಹಿಂಗಾರು ಅವಧಿಯಲ್ಲಿ ಆಗಲಿದೆ. ಸೆಪ್ಟೆಂಬರ್ ಆರಂಭದಿಂದ ಈವರೆಗೆ ರಾಜ್ಯದಲ್ಲಿ 34ಮಿ.ಮೀ ಮಾತ್ರ ಮಳೆಯಾಗಿದೆ. ಶೇ.77ರಷ್ಟು ಮಳೆ ಕೊರತೆ ಉಂಟಾಗಿದೆ. ಇನ್ನು ಸೆಪ್ಟೆಂಬರ್ 15ರರವರೆಗೂ ಮಳೆಯಾಗುವ ಲಕ್ಷಣಗಳಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Except Kodagu and coastal districts this monsoon rain was failure in many districts of the state. It was expected that there will be major water scarcity threat in 16 districts for rabi crop this year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X