ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದೇಶದಲ್ಲಿ ವ್ಯಾಸಂಗ ಮಾಡಲು 10 ಲಕ್ಷ ಸಾಲ ಸೌಲಭ್ಯ

|
Google Oneindia Kannada News

ಬೆಂಗಳೂರು, ಫೆ. 24 : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳು ವಿದೇಶಿ ವಿಶ್ವವಿದ್ಯಾಲಯದಲ್ಲಿನ ವ್ಯಾಸಂಗ ಮಾಡಲು ಗರಿಷ್ಠ 10 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲವನ್ನು ನೀಡುತ್ತಿದೆ.

ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗಕ್ಕೆ ಪ್ರವೇಶ ಹೊಂದಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಾರ್ಷಿಕ ಗರಿಷ್ಠ ರೂ 3.50 ಲಕ್ಷಗಳಂತೆ 3 ವರ್ಷದ ಅವಧಿಗೆ ಗರಿಷ್ಠ ರೂ 10 ಲಕ್ಷಗಳ ಬಡ್ಡಿ ರಹಿತ ಸಾಲವನ್ನು ಪಡೆಯಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

money

ಆಸಕ್ತ ಅಭ್ಯರ್ಥಿಗಳು ಸಾಲ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಸಾಲ ಪಡೆಯುವ ಅಭ್ಯರ್ಥಿಯ ಗರಿಷ್ಠ ವಯೋಮಿತಿ 35 ವರ್ಷಗಳು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ವರಮಾನ ರೂ 1.44 ಲಕ್ಷಗಳನ್ನು ಮೀರಿರಬಾರದು.

ಸಾಲ ಪಡೆಯಲು ಇಚ್ಛಿಸುವ ಅಭ್ಯರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಶೇ 60 ಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸಿರಬೇಕು. ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಫಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಮತ್ತು ಅರ್ಜಿ ನಮೂನೆಗಾಗಿ www.karnataka.gov.in ವೆಬ್‌ ಸೈಟ್ ನೋಡಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ : ಕರ್ನಾಟಕ ಲೋಕಸೇವಾ ಆಯೋಗವು 21-02-2015 ರಂದು ಸರ್ಕಾರದ ವಿವಿಧ ಇಲಾಖೆಗಳಲ್ಲಿ ವಿವಿಧ ಗ್ರೂಪ್ 'ಎ' 'ಬಿ' ಮತ್ತು 'ಸಿ' ತಾಂತ್ರಿಕ/ತಾಂತ್ರಿಕೇತರ/ಬ್ಯಾಕ್‍ಲಾಗ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

ದಿನಾಂಕ 21ರಿಂದ ಅಭ್ಯಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಅಧಿಸೂಚನೆಯನ್ನು ಆಯೋಗದ ಅಂತರ್ಜಾಲ ತಾಣದಲ್ಲಿ ಪ್ರಕಟಿಸಲಾಗಿದೆ.[ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ]

English summary
D.Devaraja Urs Backward Classes Development Corporation announced Rs 10 lakh Scholarship for SC/ST students if they want to get study in Abroad.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X