Scholarship 2023: ಫೆ.28 ರೊಳಗೆ ಅರ್ಜಿ ಸಲ್ಲಿಸಿ 35,000ರೂ. ವಿದ್ಯಾರ್ಥಿ ವೇತನ ಪಡೆಯಿರಿ
ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ನೀಡುವ 2023-24ನೇ ಸಾಲಿನ 35,000 ವಿದ್ಯಾರ್ಥಿ ವೇತನಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕೂಡಲೇ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ವಿಧಾನ, ಇನ್ನಿತರ ಸಂಪೂರ್ಣ ಮಾಹಿತಿ ತಿಳಿಯಿರಿ.
ಬೆಂಗಳೂರು, ಫೆಬ್ರವರಿ 14: ಕರ್ನಾಟಕ ಸರ್ಕಾರ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಾ ಬಂದಿದೆ. ಅದೇ ರೀತಿ ಪ್ರಸಕ್ತ 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ ನಿಡುವ ವಿದ್ಯಾರ್ಥಿ ವೇತನಕ್ಕೆ ಅರ್ಹರು ಅರ್ಜಿ ಸಲ್ಲಿಸಬಹುದು.
ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಇಲಾಖೆ ನೀಡುವ ವಿದ್ಯಾರ್ಥಿ ವೇತನ (Scholarship) ಈ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಈ ಸಂಬಂಧ ಅರ್ಹರು ಹೆಚ್ಚಿನ ಮಾಹಿತಿಗೆ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಈ ವೆಬ್‌ಸೈಟ್‌ಗೆ sw.kar.nic.in ಭೇಟಿ ನೀಡಿ.
ರಾಜ್ಯ ಸರ್ಕಾರ ದ್ವೀತಿಯ ಪಿಯುಸಿಯಿಂದ ಹಿಡಿದು ಸ್ನಾತಕೋತ್ತರ ಹಾಗೂ ವೃತ್ತಿಪರ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ.

ಮಾಡುತ್ತಿರುವವರಿಗೆ 35,000 ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡಲಿದೆ. ಈ ಹನ ಪಡೆಯಲು ಇಚ್ಛಿಸುವವರು ಅರ್ಜಿಯನ್ನು ಹೇಗೆ ಸಲ್ಲಿಸಬೇಕು?, ಯಾರು ಅರ್ಹರು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಿಧಾನ ಇಲ್ಲಿ ತಿಳಿಯಿರಿ.
ವಿದ್ಯಾರ್ಥಿ ವೇತನಕ್ಕೆ ಅರ್ಹರು ಯಾರು?
ರಾಜ್ಯ ಸಮಾಜ ಕಲ್ಯಾಣ ಇಲಾಖೆಯು ಕಳೆದ 2021ನೇ ಸಾಲಿನಲ್ಲಿ ಮೊದಲ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅವರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
2022-23ನೇ ಸಾಲಿನಲ್ಲಿ ವಿವಿಧ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಎಸ್‌ಸಿ ಮತ್ತು ಎಸ್‌ಟಿ (SC, ST)ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅರ್ಹರ ಎಂದು ಇಲಾಖೆ ತಿಳಿಸಿದೆ.
ಅರ್ಜಿ ಸಲ್ಲಿಕೆಯ ಕೊನೆ ದಿನಾಂಕ?
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ sw.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಫೆಬ್ರವರಿ 28ರೊಳಗೆ ಸೂಕ್ತ ದಾಖಲೆಗಳ ಸಹಿತಿ ಅರ್ಜಿ ಸಲ್ಲಿಸಬೇಕು. ಇಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಹಾಯಧನ ದೊರೆಯಲಿದೆ. ಆನ್‌ಲೈನ್ ನಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಇಲಾಖೆ ಅಧಿಸೂಚನೆ ತಿಳಿಸಿದೆ.
ಅರ್ಜಿ ಸಲ್ಲಿಕೆ ವಿಧಾನ ತಿಳಿಯಿರಿ
ಮೊದಲು ಅಧಿಕೃತ ವೆಬ್‌ಸೈಟ್ sw.kar.nic.in ಗೆ ಭೇಟಿ ನೀಡಬೇಕು. ನಂತರ ಮುಖಪುಟದಲ್ಲಿ ಮೆಟ್ರಿಕ್ ನಂತರದ ಪದವಿ/ ಸ್ನಾತಕೋತ್ತರ ಪದವಿ ಪ್ರೋತ್ಸಾಹಧನ ಆಯ್ಕೆ ಮಾಡಿಕೊಳ್ಳಬೇಕು. ಬಳಿಕ ತೆರೆದುಕೊಳ್ಳುವ ಪುಟದಲ್ಲಿ ಆನ್‌ಲೈನ್ ಅರ್ಜಿ ಲಿಂಕ್ ಒತ್ತಬೇಕು. ಅಲ್ಲಿ ಅಗತ್ಯ ದಾಖಲೆ/ವಿವರ ನಮೂದಿ ಸಲ್ಲಿಸಬೇಕು. ಕೊನೆಗೆ ಅಲ್ಲಿ ಕೇಳುವ ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು ಎಂದು ಇಲಾಖೆ ಮಾಹಿತಿ ನೀಡಿದೆ.

ಏನೇನು ದಾಖಲೆಗಳು ಬೇಕು?
ವಿದ್ಯಾರ್ಥಿಗಳು 'ಅಂಕಪಟ್ಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಪ್ರತಿ, ಭಾವಚಿತ್ರ' ಇಷ್ಟನ್ನೂ ಅರ್ಜಿ ಜೊತೆಗೆ ಸಬ್ಮಿಟ್ ಮಾಡಬೇಕು.
ಯಾರಿಗೆ ಎಷ್ಟು ವಿದ್ಯಾರ್ಥಿ ವೇತನ?
* 2nd ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೊಮ ವಿದ್ಯಾರ್ಥಿಗಳಿಗೆ 20,000 ರೂಪಾಯಿ.
* ಪದವಿ ವಿದ್ಯಾರ್ಥಿಗಳಿಗೆ 25,000 ರೂಪಾಯಿ.
* ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 30,000 ರೂಪಾಯಿ.
* ಕೃಷಿ, ಇಂಜಿನಿಯರ್, ವೆಟರನರಿ, ಮೆಡಿಷನ್ ಕೋರ್ಸ್ ವಿದ್ಯಾರ್ಥಿಗಳಿಗೆ 35,000ರೂಪಾಯಿ ಸಿಗಲಿದೆ.












Click it and Unblock the Notifications