School Holiday: ಭಾರೀ ಮಳೆ! ಜುಲೈ 23ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Rains updates: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ಶುರುವಾಗಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಗುರುವಾರ (ಜುಲೈ 23) ರಂದು ದಕ್ಷಿಣ ಜಿಲ್ಲೆಯ ಎಲ್ಲ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕರಾವಳಿ ಮೂರು ಜಿಲ್ಲೆಗಳಲ್ಲಿ ಕೆಲವು ದಿನಗಳಲ್ಲಿ ಭಾರೀ ಮಳೆ ಆಗುತ್ತಿದೆ. ನಾಳೆ ಜುಲೈ 23ರಂದು ಗುರುವಾರ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಕನಿಷ್ಠ 115 ರಿಂದ 200 ಮಿಲಿ ಮೀಟರ್ ವರೆಗೆ ಅತ್ಯಧಿಕ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

School and Colleges Holiday

ಜಿಲ್ಲಾಧಿಕಾರಿಗಳ ಆದೇಶದಲ್ಲಿ ಏನೇನಿದೆ?

ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ನೀಡುವ ಜೊತೆಗೆ ಆದೇಶದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಿದ್ದಾರೆ. ಅದೇನೆಂದರೆ 'ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚಿಸಿದ್ದು, ಉಲ್ಲಂಘಿಸಬಾರದು.

ಜಿಲ್ಲಾ ಮಟ್ಟದ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಇನ್ನೂ ಈ ಭಾಗಕ್ಕೆ ಬರುವ ಪ್ರವಾಸಿಗರು/ಸಾರ್ವಜನಿಕರು ನದಿ ತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ನಿರ್ದೇಶನವಿರುತ್ತದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ದ ಸ್ಥಿತಿಯಲ್ಲಿರಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.

ಭಾರೀ ಮಳೆ: ಆರೆಂಜ್ & ಯೆಲ್ಲೋ ಅಲರ್ಟ್‌

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ಪ್ರಕಾರ, ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆ, ಕೆಲವೆಡ ಅತ್ಯಧಿಕ ಧಾರಕಾರ ಮಳೆ ಆಗಲಿದೆ. ಈ ಪೈಕಿ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಗೆ 'ಆರೆಂಜ್ ಅಲರ್ಟ್' ನೀಡಲಾಗಿದೆ. ಉಳಿದಂತೆ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ವ್ಯಾಪಕ ಮಳೆ ಹಿನ್ನೆಲೆಯಲ್ಲಿ 'ಯೆಲ್ಲೋ ಅಲರ್ಟ್' ಕೊಡಲಾಗಿದೆ ಎಂದು ಐಎಂಡಿ ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಕರಾವಳಿ ಒಳಗೊಂಡಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ, ಮುಂದಿನ 24 ಗಂಟೆ ವಿಜಯಪುರ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಸಾಧಾರಣದಿಂದ ಭಾರೀ ಮಳೆ ಸಂಭವ ಹಿನ್ನೆಲೆಯಲ್ಲಿ 'ಯೆಲ್ಲೋ ಅಲರ್ಟ್' ನೀಡಲಾಗಿದೆ ಎಂದು ಐಎಂಡಿ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+