ಹಿಜಾಬ್ ವಿವಾದ ನಡುವೆ ಶಾಲಾ ಕಾಲೇಜು ಅರಂಭ: ಬಿಗಿ ಪೊಲೀಸ್ ಬಂದೋಬಸ್ತ್!

ಬೆಂಗಳೂರು, ಫೆ. 15: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಫೆ. 16 ರಂದು ಕಾಲೇಜು ಪ್ರಾರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇದರ ಬೆನ್ನಲ್ಲೇ ಕಾಲೇಜುಗಳಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮ ವಹಿಸಲಾಗಿದೆ.

ರಾಜ್ಯದಲ್ಲಿ ಶಾಲಾ ಕಾಲೇಜು ಪ್ರಾರಂಭ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಬರದಂತೆ ಮುಂಜಾಗ್ರತಾ ಸುರಕ್ಷತಾ ಕ್ರಮ ಜರುಗಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ.

ಹಿಜಾಬ್ ವಿವಾದ ನಡುವೆ ಶಾಲಾ ಕಾಲೇಜು ಆರಂಭದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದರು.

School and Colleges Reopened amid Hijab Row with full Security: Araga Jnanendra

ವಿಧ್ಯಾರ್ಥಿಗಳು, ಯಾವುದೇ ಆತಂಕ ಅಥವಾ ಅಭದ್ರತೆಯ ಭಯವಿಲ್ಲದೆ ಪಠ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೇವಲ ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ಶಾಲೆಗೆ ಬರುತ್ತೇವೆ ಎಂದಿದ್ದಾರೆ. ಅದು ಅವರ ಸ್ವಾಭಾವಿಕವಾದ ಅಭಿಪ್ರಾಯ ಅಲ್ಲ ಎಂದು ನನ್ನ ಅನಿಸಿಕೆ. ನಾವೆಲ್ಲರೂ ಉಚ್ಚ ನ್ಯಾಯಾಲಯ ನೀಡಿರುವ ಮಧ್ಯಂತರ ಆದೇಶಕ್ಕೆ ಗೌರವ ನೀಡಬೇಕು. ಅದರಂತೆ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಕೆಲವು ಮತೀಯ ಸಂಘಟನೆಗಳು ಮುಗ್ಧ ವಿದ್ಯಾರ್ಥಿಗಳನ್ನು ಮುಂದಿಟ್ಟುಕೊಂಡು ಸಮಾಜ ಹಾಗೂ ಮನಸುಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಗುರುತಿಸಿ ತಕ್ಕ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ಉಳ್ಳಾಲ ಪಟ್ಟಣಕ್ಕೆ ಅಗ್ನಿ ಶಾಮಕ ಠಾಣೆ: ಮಂಗಳೂರು ನಗರಕ್ಕೆ ಹೊಂದಿಕೊಡಂತೆ ಇರುವ ಉಳ್ಳಾಲ ಪಟ್ಟಣಕ್ಕೆ ಆದ್ಯತೆಯ ಮೇರೆಗೆ ಅಗ್ನಿ ಶಾಮಕ ಸಿಬ್ಬಂದಿಗಳನ್ನು ನೇಮಕ ಮಾಡಿ ಅಗ್ನಿ ಶಾಮಕ ಠಾಣೆಯನ್ನು ಪ್ರಾರಂಭ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ, ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, K-SAFE 2 ಯೋಜನೆ ಅಡಿಯಲ್ಲಿ ಈಗಾಗಲೇ ಅಗ್ನಿಶಾಮಕ ಠಾಣೆ ಕಟ್ಟಡದ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಮುಗಿಯುವವರೆಗೂ ಕಾಯದೆ ತಕ್ಷಣ ಸಿಬ್ಬಂದಿಗಳ ನೇಮಕಗೊಳಿಸಿ ಠಾಣೆಯನ್ನು ಕಾರ್ಯಾಚರಣೆಗೊಳಿಸಲಾಗುವುದು ಎಂದರು.

ಇದಕ್ಕೂ ಮೊದಲು ವಿಷಯ ಪ್ರಸ್ತಾಪಿಸಿದ ಶಾಸಕರು, ಉಳ್ಳಾಲ ಪಟ್ಟಣದಲ್ಲಿ ಮೂರು ಮೆಡಿಕಲ್ ಕಾಲೇಜುಗಳು, ಐದು ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ಎರಡು ಕೈಗಾರಿಕಾ ಎಸ್ಟೇಟ್‌ಗಳಿವೆ, ಅಗ್ನಿ ಅವಘಡ ಸಂಭವಿಸಿದಲ್ಲಿ ಅಪಾರ ಹಾನಿ ತಪ್ಪಿಸಲು ಠಾಣೆ ಸ್ಥಾಪಿಸುವ ಅಗತ್ಯವಿದೆ ಎಂದು ಹೇಳಿ ಗಮನ ಸೆಳೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+