ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲಾ-ಕಾಲೇಜು ಆರಂಭ: ಹಾಜರಾತಿ ಹೇಗಿದೆ? ಇಲ್ಲಿದೆ ಮಾಹಿತಿ!

|
Google Oneindia Kannada News

ಬೆಂಗಳೂರು, ಜ. 04: ಕೊರೊನಾ ವೈರಸ್ ಅತ್ಯಂತ ಏರುಗತಿಯಲ್ಲಿದ್ದ ಸಂದರ್ಭದಲ್ಲಿ ರಿಸ್ಕ್ ತೆಗೆದುಕೊಂಡಿದ್ದ ರಾಜ್ಯ ಶಿಕ್ಷಣ ಇಲಾಖೆ, ಇದೀಗ ಮತ್ತೊಂದು ಅತಿದೊಡ್ಡ ರಿಸ್ಕ್ ತೆಗೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಆ ಸಂದರ್ಭದಲ್ಲಿ ಅತಿಹೆಚ್ಚು ವಿರೋಧ ವ್ಯಕ್ತವಾಗಿತ್ತು. ಅಷ್ಟೇ ಅಲ್ಲ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳೂ ಪರೀಕ್ಷೆ ನಡೆಸಲು ಸಂಪೂರ್ಣ ಒಪ್ಪಿಗೆ ಕೊಟ್ಟಿರಲಿಲ್ಲ. ಆದರೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ಒತ್ತಾಸೆಯಿಂದ ಒಲ್ಲದ ಮನಸ್ಸಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸಂಬಂಧಿಸಿದ ಇಲಾಖೆಗಳು ಕೈಜೋಡಿಸಿದ್ದವು. ಕೋವಿಡ್ ಸೋಂಕಿತ ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದು ಸೈ ಎನಿಸಿಕೊಂಡಿದ್ದರು. ಆ ಮೂಲಕ ರಾಜ್ಯದ ಜನತೆಯಲ್ಲಿಯೂ ಮಕ್ಕಳು ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದ್ದರು.

ಆದರೆ ಅದಾದ ಬಳಿಕ ಸರ್ಕಾರಿ ಶಾಲಾ ಮಕ್ಕಳನ್ನು ಗಮನದಲ್ಲಿಟ್ಟುಕೊಂಡು ಶುರು ಮಾಡಿದ್ದ ವಿದ್ಯಾಗಮ ಕಾರ್ಯಕ್ರಮವನ್ನು, ಯಶಸ್ವಿಗೊಳಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರನ್ನು ಬಿಟ್ಟಿರಲಿಲ್ಲ. ಆದರೆ ತಾತ್ಕಲಿಕವಾಗಿ ಸ್ಥಗಿತವಾಗಿದ್ದ ವಿದ್ಯಾಗಮ ಕಾರ್ಯಕ್ರಮ ಇದೀಗ ಜನವರಿ 1 ರಿಂದ ಇಡೀ ರಾಜ್ಯಾದ್ಯಂತ ಪುನರಾರಂಭವಾಗಿದೆ. ಅದೊಂದಿಗೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯು ಎರಡನೇ ವರ್ಷದ ತರಗತಿಗಳು ಆರಂಭವಾಗಿವೆ.

ಜನವರಿ 1 ರಿಂದ ತರಗತಿಗಳು ಆರಂಭವಾಗಿದ್ದು, ಇವತ್ತು ಮೂರನೇ ದಿನ ತರಗತಿಗಳು ನಡೆದಿವೆ. ಮಕ್ಕಳ ಹಾಜರಾತಿ ಹೇಗಿತ್ತು ಅಂತಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಮಾಹಿತಿ ಕೊಟ್ಟಿದ್ದಾರೆ. ನಿರೀಕ್ಷಿತ ಮಟ್ಟದಲ್ಲಿ ಮಕ್ಕಳ ಹಾಜರಾತಿ ಇತ್ತಾ? ಇಲ್ಲಿದೆ ಮಾಹಿತಿ.

ಮಕ್ಕಳ ಹಾಜರಾತಿ

ಮಕ್ಕಳ ಹಾಜರಾತಿ

ರಾಜ್ಯದಲ್ಲಿರುವ 5,492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 3,62,704 ವಿದ್ಯಾರ್ಥಿಗಳ ಪೈಕಿ ಸೋಮವಾರ 1,99,553 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 55.018 ಹಾಜರಿ) ಅಂತೆಯೇ 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,81,728 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ. 51.95 ಹಾಜರಾತಿ) ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿದ್ಯಾಗಮ ಕಾರ್ಯಕ್ರಮ

ವಿದ್ಯಾಗಮ ಕಾರ್ಯಕ್ರಮ

6ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಸೋಮವಾರ 4,71,823 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಪ್ರಸ್ತುತ ವರ್ಷದ ಶಾಲಾರಂಭದ ನಾಲ್ಕನೇ ದಿನವಾದ ಸೋಮವಾರ ವಿದ್ಯಾರ್ಥಿಗಳ ಹಾಜರಾತಿ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವುದು ಶಾಲಾಕಾಲೇಜುಗಳನ್ನು ಆರಂಭಿಸಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದಂತಾಗಿದೆ ಎಂದು ಸುರೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇವಲ ಎರಡು ಶಾಲೆಗಳಲ್ಲಿ

ಕೇವಲ ಎರಡು ಶಾಲೆಗಳಲ್ಲಿ

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಿಕ್ಕ ಕುರುವತ್ತಿ ಸರ್ಕಾರಿ ಪ್ರೌಢಶಾಲೆ ಮತ್ತು ಒಂದು ಖಾಸಗಿ ಶಾಲೆಯ ಒಬ್ಬೊಬ್ಬ ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯ ಒಬ್ಬ ಶಿಕ್ಷಕರು ಮತ್ತು ಕಳಸಾ ತಾಲೂಕಿನ ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಈ ಶಾಲೆಗಳನ್ನು ಮುಂದಿನ ಸೋಮವಾರ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಉತ್ತಮ ಪ್ರತಿಕ್ರಿಯೆ

ಉತ್ತಮ ಪ್ರತಿಕ್ರಿಯೆ

ವಿದ್ಯಾಗಮ ತರಗತಿಗಳೂ ಸಹ ಸುರಕ್ಷಿತ ವಾತಾವರಣದಲ್ಲಿ ನಡೆಯುತ್ತಿದ್ದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಹೆಚ್ಚಿನ ಮಕ್ಕಳು ಹಾಜರಾಗುತ್ತಿದ್ದಾರೆ. ಪೋಷಕರು ಮತ್ತು ಮಕ್ಕಳು ಶಾಲಾರಂಭದ ಕುರಿತು ಸಂತಸ ವ್ಯಕ್ತಪಡಿಸಿದ್ದಾರಲ್ಲದೇ, ಸುರಕ್ಷತೆ ಮತ್ತು ಎಸ್‍ಒಪಿ ಪಾಲನೆ ಕುರಿತು ವಿಶ್ವಾಸ ಹೊಂದಿದ್ದಾರೆ. ಬಹುದಿನಗಳ ಕಾಲ ಶಾಲೆಗಳು ಆರಂಭವಾಗದೇ ಮಕ್ಕಳ ಭವಿಷ್ಯದ ಕುರಿತು ಆತಂಕದಲ್ಲಿದ್ದ ಪೋಷಕರು ಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದೆಲ್ಲೆಡೆ ಶಾಲಾರಂಭಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಸಚಿವರು ಶಾಲಾ ಭೇಟಿ ನಂತರ ತಿಳಿಸಿದ್ದಾರೆ.

English summary
Minister for Education Suresh Kumar given information that Increase in child attendance by more than 50 per cent over three days. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X