Holiday: ರಾಜ್ಯದ ಎರಡು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ: ಆದೇಶ
School-Colleges Holiday: ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕಾರಣಾಂತರಗಳಿಂದ ಸಾಲು ರಜೆಗಳನ್ನೇ ನೀಡಲಾಗಿದೆ. ಇದೀಗ ಮತ್ತೆ ಎರಡು ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 5 ಶನಿವಾರ ರಜೆ ಘೋಷಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕಳದ ಕೆಲವು ದಿನಗಳಿಂದ ತಗ್ಗಿದ್ದ ಮುಂಗಾರು ಮಳೆ ಇದೀಗ ರಾಜ್ಯದಲ್ಲಿ ಮತ್ತೆ ಆರ್ಭಟ ಶುರು ಮಾಡಿದೆ. ಪರಿಣಾಮ ಹಲವೆಡೆ ದೊಡ್ಡ ದೊಡ್ಡ ಅವಾಂತರಗಳೇ ಸಂಭವಿಸಿವೆ. ಕೆಲವೆಡೆ ಕೆರೆ-ಕಟ್ಟೆಗಳು ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಇನ್ನು ಇಂದು (ಜುಲೈ 5) ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಭಾರೀ ಮಳೆ ಮುಂದುವರೆದಿದೆ. ಆದ್ದರಿಂದ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಈ ಭಾಗಗಳ ಕೆಲವು ತಾಲ್ಲೂಕುಗಳ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಎಲ್ಲೆಲ್ಲಿ ರಜೆ ಘೋಷಣೆ?: ಜುಲೈ 4ರ ಶುಕ್ರವಾರ ರಾತ್ರಿಯಿಂದಲೂ ಬಿಟ್ಟುಬಿಡದೇ ನಿರಂತರವಾಗಿ ಭಾರೀ ಮಳೆ ಮುಂದುವರೆದ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲೂಕುಗಳಲ್ಲಿ ಅಂಗನವಾಡಿಗಳು, ಪ್ರಾಥಮಿಕ ಶಾಲೆ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜುಲೈ 5) ರಜೆ ಘೋಷಣೆ ಮಾಡಿ ಆಯಾ ತಾಲೂಕು ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.
ಮತ್ತೊಂದೆಡೆ ಕಾಫಿನಾಡು ಅಂತಲೇ ಕರೆಸಿಕೊಳ್ಳುವ ಚಿಕ್ಕಮಗಳೂರು ಜಿಲ್ಲೆಯಲ್ಲೈ ಸಹ ರಣಮಳೆ ಮುಂದುವರೆದ ಕಾರಣ ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕುಗಳಲ್ಲಿ ಶನಿವಾರ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯದ ಹಲವೆಡೆ ಕಳೆದ ಒಂದು ವಾರದಿಂದಲೂ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಕೆರೆ-ಕಟ್ಟೆಗಳು, ನದಿಗಳು ಅಪಾಯದ ಮಟ್ಟ ಮೀರಿ ತುಂಬಿ ಹರಿಯುತ್ತಿವೆ. ಇನ್ನೂ ಜುಲೈ 10ರ ವರೆಗೂ ಭಾರಿ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಯೆಲ್ಲೋ ಅಲರ್ಟ್ ಘೋಷಣೆ: ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಜ್ಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಕೆಲವೆಡೆ ಇಂದು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈಗಾಗಲೇ ಭಾರೀ ಮಳೆ ಹಿನ್ನೆಲೆ ಹಲವು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆದರೆ, ಕೆಲವೆಡೆ ಈ ರಜೆಗಳನ್ನು ಸರಿದೂಗಿಸಲು ಹಾಗೂ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ ಶನಿವಾರ ಅರ್ಧ ದಿನದ ಬದಲಾಗಿ ಪೂರ್ತಿ ದಿನ ತರಗತಿಗಳನ್ನು ನಡೆಸಲು ನಿರ್ಧಾರ ಮಾಡಿದ್ದಾರೆ ಎನ್ನುವ ಮಾಹಿತಿ ಇದೆ. ಈ ನಿರ್ಧಾರ ಉತ್ತಮವಾಗಿದ್ದು, ವಿದ್ಯಾರ್ಥಿಗಳ ವಿದ್ಯಾಭ್ಯಾಸ ಹಿಂದೆ ಉಳಿಯದಂತೆ ನೋಡಿಕೊಳ್ಳಬಹುದಾಗಿದೆ. ಇದರಿಂದ ಪೋಷಕರ ಮನಸಿಗೂ ನೆಮ್ಮದಿ ಸಿಕ್ಕಂತಾಗಲಿದೆ.












Click it and Unblock the Notifications