ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲ ತರಗತಿಗಳನ್ನು ಆರಂಭಿಸುವ ಕುರಿತು ಸುರೇಶ್ ಕುಮಾರ್ ಮಹತ್ವದ ಪ್ರಕಟಣೆ!

|
Google Oneindia Kannada News

ಬೆಂಗಳೂರು, ಜ. 28: ಕೊರೊನಾ ವೈರಸ್‌ನಿಂದಾಗ ಕಳೆದ ಒಂದು ವರ್ಷದಿಂದ ಮಕ್ಕಳ ಶೈಕ್ಷಣಿಕ ಚಟುವಟಿಕೆ ಕುಂಠಿತವಾಗಿದೆ. ಕೋವಿಡ್ ಆತಂಕದ ಮಧ್ಯೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲಾಗಿದ್ದು, ಉಳಿದ ವಿದ್ಯಾರ್ಥಿಗಳ ತರಗತಿ ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳ ವಿದ್ಯಾರ್ಥಿಗಳು ಈಗಾಗಲೇ ಕೊರೊನಾ ವೈರಸ್ ಮುಂಜಾಗ್ರತೆ ಕಾಯ್ದುಕೊಂಡು ತರಗತಿಗಳಿಗೆ ಹಾಜರಾಗುತ್ತಿದ್ದಾರೆ. ಹೀಗಾಗಿ ಕೋವಿಡ್ ಆತಂಕ ವಿದ್ಯಾರ್ಥಿಗಳನ್ನು ಕಾಡುತ್ತಿಲ್ಲ. ಇದೀಗ ಉಳಿದ ತರಗತಿಗಳನ್ನು ಆರಂಭಿಸುವ ಕುರಿತು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಪಡೆದುಕೊಂಡು ಉಳಿದ ತರಗತಿಗಳನ್ನು ಆರಂಭಿಸಲು ತೀರ್ಮಾನ ಕೈಗೊಂಡಿದ್ದಾರೆ.

ವಿದ್ಯಾರ್ಥಿಗಳು ಹಾಗೂ ಪೋಷಕರ ಅಭಿಪ್ರಾಯ ಸೇರಿದಂತೆ ಚರ್ಚೆಯ ಬಳಿಕ ಈ ನೀರ್ಧಾರಕ್ಕೆ ಶಿಕ್ಷಣ ಇಲಾಖೆ ಬಂದಿದ್ದು, ಯಾವ ತರಗತಿಗಳನ್ನು ಆರಂಭಿಸಲಾಗುತ್ತದೆ? ಯಾವಾಗಿನಿಂದ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೊಟ್ಟಿದ್ದಾರೆ. ಮುಂದಿದೆ ಎಲ್ಲ ಮಾಹಿತಿ.

ಉಳಿದ ವಿದ್ಯಾರ್ಥಿಗಳ ತರಗತಿ ಆರಂಭ

ಉಳಿದ ವಿದ್ಯಾರ್ಥಿಗಳ ತರಗತಿ ಆರಂಭ

ಪ್ರಸ್ತುತ ಶೈಕ್ಷಣಿಕ ವರ್ಷದ 9 ಮತ್ತು 11ನೇ ತರಗತಿಗಳನ್ನು ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

ಎಲ್ಲ ತರಗತಿಗಳನ್ನು ಆರಂಭಿಸಬೇಕೆಂಬ ವಿದ್ಯಾರ್ಥಿ ಮತ್ತು ಪೋಷಕ ವಲಯದ ಬೇಡಿಕೆಯ ಹಿನ್ನೆಲೆಯಲ್ಲಿ ಗುರುವಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸುದೀರ್ಘ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರೊಂದಿಗೆ ಈಗಾಗಲೇ ಆರಂಭವಾಗಿರುವ 10 ಮತ್ತು 12ನೇ ತರಗತಿಗಳೂ ಸಹ ಮೊದಲಿನಂತೆ ಪ್ರತಿದಿನ ಪೂರ್ಣ ಆವಧಿಯಲ್ಲಿ ನಡೆಯಲಿವೆ ಎಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಒಂದರಿಂದ ಎಂಟನೇ ತರಗತಿ

ಒಂದರಿಂದ ಎಂಟನೇ ತರಗತಿ

ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರಿತಂತೆ ಫೆಬ್ರವರಿ ಎರಡನೇ ವಾರದಲ್ಲಿ ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಪ್ರಸ್ತುತ 9ರಿಂದ 12ವರೆಗಿನ ತರಗತಿಗಳು ಪೂರ್ಣ ಅವಧಿಯಲ್ಲಿ ಸಮಿತಿಯ ಮಾರ್ಗದರ್ಶನದಂತೆ ಕೋವಿಡ್ ನಿಯಮಗಳನ್ನು ಅನುಸರಿಸಿ ನಡೆಯಲಿವೆ. ಹಾಗೆಯೇ 6ರಿಂದ 8ನೇ ತರಗತಿಗಳಿಗೆ ಪರಿಷ್ಕೃತ ವಿದ್ಯಾಗಮ ತರಗತಿಗಳು ಈಗ ನಡೆಯುತ್ತಿರುವಂತೆ ಮುಂದುವರೆಯಲಿವೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಉತ್ಸಾಹ

ವಿದ್ಯಾರ್ಥಿಗಳ ಉತ್ಸಾಹ

ಈಗಾಗಲೇ ಆರಂಭವಾಗಿರುವ 12ನೇ ತರಗತಿಯ ಸರಾಸರಿ ಶೇ. 75, 10ನೇ ತರಗತಿಯ ಶೇ.70, 6ರಿಂದ 9ನೇ ತರಗತಿಯ ವಿದ್ಯಾಗಮ ತರಗತಿಯ ಹಾಜರಾತಿ ಶೇ. 45ರಷ್ಟು ಹಾಜರಾತಿ ಇರುವ ಅಂಶವನ್ನು ಅಂಶವನ್ನು ತಾಂತ್ರಿಕ ಸಲಹಾ ಸಮಿತಿ ಅವಲೋಕಿಸಿ 9 ಮತ್ತು 11ನೇ ತರಗತಿಗಳ ಆರಂಭಕ್ಕೆ ಅನುಮತಿ ನೀಡಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ತಾವು ಈ ಅವಧಿಯಲ್ಲಿ ಹತ್ತಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೋಷಕರು ಮತ್ತು ಶಾಲಾಡಳಿತ ಮಂಡಳಿಗಳು ಎಲ್ಲ ತರಗತಿಗಳನ್ನು ಆರಂಭಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ನಾವು ಈ ಹಿಂದೆ ತಾಂತ್ರಿಕ ಸಲಹಾ ಸಮಿತಿಯ ನಿರ್ದೇಶನಗಳನ್ನು ಚಾಚೂ ತಪ್ಪದೇ ಪಾಲಿಸಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡ ಹಿನ್ನೆಲೆಯಲ್ಲಿ ಇಲ್ಲಿಯವರೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧೀನದಲ್ಲಿ ಬರುವ ಯಾವುದೇ ಶಾಲೆಯಿಂದ ಕೋವಿಡ್ ಸೋಂಕು ಹರಡುವಿಕೆ ವರದಿಯಾಗಿಲ್ಲ ಎಂದು ಸಚಿವರು ತಿಳಿಸಿದರು. ಮಕ್ಕಳು ಭೌತಿಕವಾಗಿ ಶಾಲೆಗಳಲ್ಲಿ ಹಾಜರಾಗುತ್ತಿರುವ ಕಾರಣ ಕಲಿಕಾ ಆಸಕ್ತಿ ಹೆಚ್ಚಿದೆ. ಬೋಧನೆ ಪರಿಣಾಮಕಾರಿಯಾಗುತ್ತಿದೆ. ಶಾಲೆ ಆರಂಭವಾದ ಮೇಲೆ ಮಕ್ಕಳಿಗಾಗಲೀ ಇಲ್ಲವೇ ಶಿಕ್ಷಕರಿಗಾಗಲಿ ಯಾವುದೇ ಸೋಂಕು ಹರಡಿಲ್ಲ ಎಂದು ಅಧಿಕೃತ ಮಾಹಿತಿ ನೀಡಿದ್ದಾರೆ.

ಶಾಸಕರ ಒತ್ತಾಯ

ಶಾಸಕರ ಒತ್ತಾಯ

ಇತ್ತೀಚಿಗೆ ಶಿಕ್ಷಕ-ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಎಲ್ಲ ತರಗತಿಗಳು ನಿರಂತರವಾಗಿ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಸರ್ಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರ ಸಂಘಟನೆಗಳು, ಪದವಿ ಪೂರ್ವ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘಗಳು ಮಕ್ಕಳ ಹಿತದೃಷ್ಟಿಯಿಂದ ಎಲ್ಲ ತರಗತಿಗಳನ್ನೂ ಆರಂಭಿಸಬೇಕೆಂದು ಪದೇ ಪದೇ ಒತ್ತಾಯಿಸಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.


ಬಾಲ ಕಾರ್ಮಿಕ ಪದ್ಧತಿ ಮತ್ತು ಬಾಲ ವಿವಾಹಗಳಂತಹ ಸಾಮಾಜಿಕ ಪಿಡುಗುಗಳ ಕುರಿತೂ ನಾವು ಎಚ್ಚರ ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎಲ್ಲ ತರಗತಿಗಳನ್ನು ಆರಂಭಿಸಬೇಕೆಂಬುದು ಸಾರ್ವಜನಿಕ ವಲಯದ ಒತ್ತಾಯವಾಗಿದೆ ಎಂದು ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಒಟ್ಟಾರೆಯಾಗಿ ಕೊರೊನಾ ವೈರಸ್‌ನಿಂದ ಕಳೆದೊಂದು ವರ್ಷದಿಂದ ಕುಂಠಿತಗೊಂಡಿದ್ದ ಶೈಕ್ಷಣಿಕ ಚಟುವಟಿಕೆಗಳನ್ನು ಸಂಪೂರ್ಣವಾಗಿ ಆರಂಭಿಸಲು ಶಿಕ್ಷಣ ಸಚಿವರು ನಿರ್ಧಾರ ಮಾಡಿದ್ದಾರೆ.

English summary
After ten months School reopens for classes 9th and 11th from Feb 1st in Karnataka, Know more about school reopen here.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X