School holiday: ಶಾಲಾ ದಸರಾ ಹಾಗೂ ಬೇಸಿಗೆ ರಜೆ ಕುರಿತು ಸಂಪೂರ್ಣ ವಿವರ ಇಲ್ಲಿದೆ
ಕರ್ನಾಟಕ, ಏಪ್ರಿಲ್, 4: ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಪರೀಕ್ಷೆಳು ಮುಕ್ತಯವಾಗಿದೆ. ಮತ್ತೊಂದು ಇಂದಿಗೆ ಅಂದರೆ ಏಪ್ರಿಲ್ 4ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮುಗಿದಿವೆ. ಈ ಬೆನ್ನಲ್ಲೇ ಇದೀಗ ರಾಜ್ಯ ಶಿಕ್ಷಣ ಇಲಾಖೆಯು 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. ಹಾಗಾದ್ರೆ ದಸರಾ ರಜೆ, ಬೇಸಿಗೆ ರಜೆ ಆರಂಭ ಮತ್ತು ಮುಕ್ತಾಯದ ಕುರಿತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು 2025-26ರ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಟಕ ಮಾಡಿದೆ. ಇದರಲ್ಲಿ ಶಾಲಾ ಕರ್ತವ್ಯದ ದಿನಗಳು ಮತ್ತು ರಜಾ ದಿನಗಳ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಇದು ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅನ್ವಯವಾಗಲಿದೆ.

ಶೀಘ್ರವೇ 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯ ಆಗಲಿವೆ. ಈ ಹಿನ್ನೆಲೆ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ 2025 ಮೇ 29ರಿಂದ ಶಾಲೆ ಪ್ರಾರಂಭಿಸಲು ಸೂಚನೆ ನೀಡಿದೆ. ಅದರಂತೆಯೇ ವಾರ್ಷಿಕ ಶೈಕ್ಷಣಿಕ ಕ್ರಿಯಾ ಯೋಜನೆಯ ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿದೆ.
ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯ ಆಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಲಾಗಿದೆ. ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಿ ಮತ್ತು ಅನುಪಾಲನೆ ಮಾಡಲು ಸೂಚಿಸಲಾಗಿದೆ. ಇಲ್ಲಿದ ನೋಡಿ ಮಾಹಿತಿ.
2025-26ನೇ ಸಾಲಿನ ಶಾಲಾ ಕರ್ತವ್ಯದ ದಿನಗಳು: ಮೊದಲನೇ ಅವಧಿಯು 2025 ಮೇ 29ರಿಂದ ಸೆಪ್ಟೆಂಬರ್ 19ರ ವರೆಗೆ. ಎರಡನೇ ಅವಧಿಯು 2025 ಅಕ್ಟೋಬರ್ 8ರಿಂದ 2026 ಏಪ್ರಿಲ್ 10 ರವರೆಗೆ.
ರಜಾ ದಿನಗಳು: ದಸರಾ ರಜೆಯು 2025 ಸೆಪ್ಟೆಂಬರ್ 20ರಿಂದ ಅಕ್ಟೋಬರ್ 7ರ ವರೆಗೆ. ಬೇಸಿಗೆ ರಜೆಯು 2026 ಏಪ್ರಿಲ್ 11 ರಿಂದ 2026 ಮೇ 5ರ ವರೆಗೆ ಇರಲಿದೆ.
2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಒಟ್ಟು 123 ರಜೆ ದಿನಗಳು ಇವೆ. ಉಳಿದಂತೆ 242 ದಿನ ಶಾಲೆಗಳು ತೆರೆಯಲಿವೆ. ಪರೀಕ್ಷೆ ಮತ್ತು ಮೌಲ್ಯಾಂಕನ ಕಾರ್ಯಕ್ಕಾಗಿ 26 ದಿನ, ಪಠ್ಯೇತರ ಚಟುವಟಿಕೆ, ಪಠ್ಯ ಚಟುವಟಿಕೆ, ಸ್ಪರ್ಧೆಗಳ ನಿರ್ವಹಣಾ ಕಾರ್ಯಕ್ಕಾಗಿ 22 ದಿನ, ಮೌಲ್ಯಮಾಪನ ಮತ್ತು ಫಲಿತಾಂಶ ವಿಶ್ಲೇಷಣೆ ಕಾರ್ಯಕ್ಕಾಗಿ 10 ದಿನ, ಶಾಲಾ ಸ್ಥಳೀಯ ರಜೆಗಳಿಗೆ 4 ದಿನ ಮತ್ತು ಬೋಧನಾ ಕಲಿಕಾ ಪ್ರಕ್ರಿಯೆಗೆ ಉಳಿಯುವ ಕರ್ತವ್ಯಕ್ಕೆ 178 ದಿನಗಳನ್ನು ಮೀಸಲಿಡಲಾಗಿದೆ.
ಮತ್ತೊಂದೆಡೆ ರಾಜ್ಯದಲ್ಲಿ ಈಗಾಗಲೇ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಪರೀಕ್ಷೆಗಳು ಮುಗಿದಿವೆ. ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಸಹ ಮುಕ್ತಯವಾಗಿದ್ದು. ಇನ್ನು ಈಗಾಗಲೇ ಪರೀಕ್ಷೆಗಳನ್ನು ಮುಗಿಸಿಕೊಂಡ ವಿದ್ಯಾರ್ಥಿಗಳು ಯಾವಾಗ ಬೇಸಿಗೆ ರಜೆ ಘೋಷಣೆ ಮಾಡುತ್ತಾರೆ ಎಂದು ಕಾಯುತ್ತಿದ್ದರು. ಇದೀಗ ಏಪ್ರಿಲ್ 11ರಿಂದ ಬೇಸಿಗೆ ರಜೆ ನೀಡಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಇದರಿಂದ ವಿದ್ಯಾರ್ಥಿಗಳು ಸಂತಸದಲ್ಲಿ ತೇಲಾಡುತ್ತಿದ್ದಾರೆ.












Click it and Unblock the Notifications