School Holidays June 25: ಧಾರಾಕಾರ ಮಳೆ: ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ!
School Holidays: ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು ಇಂದು (ಬುಧವಾರ ಜೂನ್ 25) ಪ್ರಮುಖ ಜಿಲ್ಲೆಗಳಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಪಡೆದುಕೊಂಡಿದೆ. ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ ನಾಲ್ಕೈದು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಈ ನಡುವೆ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದೆ. ಯಾವ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ರಾಜ್ಯಕ್ಕೆ ಈ ಬಾರಿ ಮುಂಗಾರು ಮಳೆ ಭರ್ಜರಿ ಆಗಮನವಾಗಿದೆ. ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿರುವುದರಿಂದ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿದೆ. ಭಾರೀ ಮಳೆಯ ಕಾರಣಕ್ಕೆ ರಾಜ್ಯದ ಉತ್ತರ ಕನ್ನಡ, ಬೆಳಗಾವಿ ಹಾಗೂ ಹಾಸನ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.

ಕರ್ನಾಟಕದಲ್ಲಿ ಜೂನ್ ಅಂತ್ಯದ ವರೆಗೆ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಇಂದು ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ - ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಹಾಸನ ಡಿಸಿ ಕೆ ಎಸ್ ಲತಾಕುಮಾರಿ ಅವರು, ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಿದ್ದಾರೆ. ಇನ್ನು ಕರಾವಳಿಯಲ್ಲೂ ಕಳೆದ ಒಂದು ವಾರದಿಂದ ಮಳೆಯ ಆರ್ಭಟ ಜೋರಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರವೂ ಜೋರು ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲ್ಲೂಕಿನ ಶಾಲಾ & ಕಾಲೇಜುಗಳಿಗೆ ರಜೆ ನೀಡಬೇಕು ಎಂದು ತಹಶೀಲ್ದಾರ್ ಶೈಲೇಶ್ ಪರಮಾನಂದ ಆದೇಶ ಮಾಡಿದ್ದಾರೆ.
ಇನ್ನು ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲೂ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ ತಾಲ್ಲೂಕಿನ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಮಾಡಿದ್ದಾರೆ. ಇನ್ನುಳಿದ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಅಷ್ಟಾಗಿ ಇರುವುದಿಲ್ಲ ಎಂದು ಹೇಳಲಾಗಿದೆ.












Click it and Unblock the Notifications