School Holiday: ರಾಜ್ಯದಲ್ಲಿ ರಣಭೀಕರ ಮಳೆ: ಈ ಜಿಲ್ಲೆಯಲ್ಲಿ ಜೂನ್ 12ಕ್ಕೆ ಶಾಲೆಗಳಿಗೆ ರಜೆ!
School Holidays: ರಾಜ್ಯದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇನ್ನೊಂದು ವಾರಗಳ ಕಾಲ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿ ವಿವಿಧ ಭಾಗದಲ್ಲಿ ಮಳೆ ಆರ್ಭಟ ಇರಲಿದೆ. ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡಿನ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಹೀಗಾಗಿ ವಿವಿಧ ಭಾಗದಲ್ಲಿ ಶಾಲಾ - ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಅದರ ವಿವರ ಇಲ್ಲಿದೆ.
ಕರ್ನಾಟಕದ ವಿವಿಧ ಭಾಗದಲ್ಲಿ ಮುಂಗಾರು ಮಳೆ ಚುರುಕುಪಡೆದುಕೊಂಡಿದೆ. ಈ ಬಾರಿ ಮುಂಗಾರು ಮಳೆ ಅವಧಿಯು ಅವಧಿ ಪೂರ್ವವೇ ಬಂದಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗದಲ್ಲಿ ರಣಭೀರಕ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಜಿಲ್ಲೆಯ ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜೂನ್ 12ಕ್ಕೆ ಗುರುವಾರ ಧಾರಾಕಾರ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು. ಈ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಈ ಭಾಗದಲ್ಲಿ ಧಾರಾಕಾರ ಮಳೆ: ಇನ್ನು ಮುಂದಿನ ಒಂದು ವಾರದ ಅವಧಿಗೆ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉಡುಪಿಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕೊಡಗು ಜಿಲ್ಲೆಯಲ್ಲೂ ಧಾರಾಕಾರ ಮಳೆ ಬರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲೂ ಧಾರಾಕಾರ ಮಳೆ ಬರುವ ನಿರೀಕ್ಷೆ ಇದ್ದು. ಜೂನ್ 13 ಹಾಗೂ 14ಕ್ಕೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಧಾರವಾಡದಲ್ಲಿ ಧಾರಾಕಾರ ಮಳೆ: ಇನ್ನು ಧಾರವಾಡದಲ್ಲೂ ಧಾರಾಕಾರ ಮಳೆ ಮುಂದುವರಿದಿದೆ. ಧಾರವಾಡದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಇರಲಿದೆ. ಜೂನ್ 12ಕ್ಕೆ ಧಾರವಾಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸುವಂತೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯು ಮುನ್ಸೂಚನೆ ನೀಡಿದೆ.
ಈ ಭಾಗದಲ್ಲಿ ಶಾಲೆಗಳಿಗೆ ರಜೆ!
ಇನ್ನು ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿಯ ಉಡುಪಿ ಹಾಗೂ ಮಲೆನಾಡಿನ ಕೊಡಗು ಜಿಲ್ಲೆಗಳಲ್ಲಿನ ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ ನೀಡಲಾಗಿದೆ. ಈ ಜಿಲ್ಲೆಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಮಾಡಿದ್ದಾರೆ. ಭಾರೀ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.












Click it and Unblock the Notifications