School Students: ರಾಜ್ಯದ 1ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

Karnataka School Students: ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಶಿಕ್ಷಣ ಇಲಾಖೆ ಹೊಸ ಹೊಸ ಆದೇಶಗಳನ್ನು ಹೊರಡಿಸುತ್ತಲೇ ಇರುತ್ತದೆ. ಹಾಗೆಯೆ ಇದೀಗ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಹಾಗಾದ್ರೆ ಅದರಲ್ಲಿ ಏನಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಸಾಮಾನ್ಯವಾಗಿ ಒಂದು ಶಾಲೆ ಇತೆಂದರೆ ಆ ಶಾಲೆಗೆ ಗ್ರಂಥಾಲಯ ಇದ್ದೇ ಇರಬೇಕಾಗುತ್ತದೆ. ಆದರೆ ಬಹುತೇಕ ಕಡೆಗಳಲ್ಲಿ ಈಗಲೂ ಶಾಲೆಗಳಲ್ಲಿ ಗ್ರಂಥಾಲಯಗಳ ವ್ಯವಸ್ಥೆಯೇ ಇಲ್ಲ. ಇದರ ನಡುವೆ ಈ ಬಗ್ಗೆ ಗಮನಹರಿಸಿರುವ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ.

School Students Important Information for 1 to 10th Class Students in State

ರಾಜ್ಯದಲ್ಲಿ 1ರಿಂದ 10ನೇ ತರಗತಿವರೆಗಿನ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳಿಗೆ ಓದುವ ಹವ್ಯಾಸ ಜ್ಞಾನದ ವಿಕಾಸ ಎಂಬ ಕಾರ್ಯಕ್ರಮದ ಅಡಿಯಲ್ಲಿ ಕಡ್ಡಾಯವಾಗಿ ವಾರಕ್ಕೊಂದು ಗ್ರಂಥಾಲಯ ಅವಧಿಯನ್ನು ಅನುಷ್ಠಾನಗೊಳಿಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ವೃದ್ಧಿಸುವ ಸಲುವಾಗಿ ಪ್ರತಿ ಶಾಲೆಯಲ್ಲಿಯೂ ಕಡ್ಡಾಯವಾಗಿ ಗ್ರಂಥಾಲಯವನ್ನ ಸ್ಥಾಪಿಸಿ ಅಭಿವೃದ್ಧಿ ಪಡಿಸಲು ಮತ್ತು ಅದನ್ನು ಮಕ್ಕಳ ಬಳಕೆಗೆ ಅರ್ಹವಾಗಿಸಿ ನಿರಂತರ ಬಳಕೆಗೆ ನೀಡಲು ಉಲ್ಲೇಖದನುಸಾರ ಶಾಲೆಗಳಲ್ಲಿ ಓದುವ ಹವ್ಯಾಸ ಜ್ಞಾನದ ವಿಕಾಸ ಎಂಬ ಕಾರ್ಯಕ್ರಮವನ್ನು ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿದೆ. ಈ ಕಾರ್ಯಕ್ರಮದ ಅಡಿಯಲ್ಲಿ ಶಾಲೆಗಳಲ್ಲಿ ವಾರಕ್ಕೆ ಒಂದು ಗ್ರಂಥಾಲಯ ಅವಧಿ ನಿಗಧಿಪಡಿಸಲು ಕ್ರಮವಹಿಸಲಾಗಿದೆ.

ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯು ಶಿಕ್ಷಣದ ಧೈಯವಾಗಿದ್ದು, ವಿದ್ಯಾರ್ಥಿಗಳ ಜ್ಞಾನ, ಬುದ್ದಿ ಮತ್ತು ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಪುಸ್ತಕಗಳ ಓದಿನ ಜೊತೆಗೆ ಇತರೆ ಪೂರಕ ಪುಸ್ತಕಗಳನ್ನು ಓದುವುದು ಅವಶ್ಯಕವಾಗಿರುತ್ತದೆ. ಪುಸ್ತಕ ಓದುವ ಹವ್ಯಾಸವನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವಲ್ಲಿ ಶಾಲಾ ಗ್ರಂಥಾಲಯಗಳು ಅತ್ಯಂತ ಮಹತ್ವದ ಪಾತ್ರವನ್ನು ವಹಿಸುತ್ತವೆ. ಗ್ರಂಥಾಲಯಗಳು ಜ್ಞಾನಭಂಡಾರ ಅಷ್ಟೇ ಅಲ್ಲ ಬದಲಿಗೆ ವಿದ್ಯಾರ್ಥಿಗಳ ಸಂಪೂರ್ಣ ಮನೋವಿಕಾಸಕ್ಕೆ ಪೂರಕವಾಗಿರುತ್ತವೆ.

ಶಾಲಾ ಗ್ರಂಥಾಲಯದ ಪ್ರಾಥಮಿಕ ಉದ್ದೇಶವೇನೆಂದರೆ, ಮಕ್ಕಳಲ್ಲಿ ಓದುವ ಅಭ್ಯಾಸವನ್ನು ಬೆಳೆಸುವುದಾಗಿದೆ. ಮಕ್ಕಳು ಆನಂದಿಂದ ಪುಸ್ತಕಗಳನ್ನು ಓದಿದಾಗ ಮಾತ್ರ ಈ ಹವ್ಯಾಸವು ಬೆಳೆಯಲು ಸಾಧ್ಯ ಆಗುತ್ತದೆ. ಮಕ್ಕಳು ಆನಂದಿಸಿ ಓದಲು ಗ್ರಂಥಾಲಯದಲ್ಲಿ ಅನೇಕ ರೀತಿಯ ಆಕರ್ಶಕ ಪುಸ್ತಕಗಳು ಇರಬೇಕು. ಈ ಪುಸ್ತಕಗಳು ಮಕ್ಕಳ ಅಭಿರುಚಿಗೆ ತಕ್ಕಂತೆ ಇರಬೇಕು.

ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದ ಭಂಡಾರ ವೃದ್ಧಿಸಿ, ನಿರರ್ಗಳತೆ, ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ್ಯ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿವೆ. ಅದಲ್ಲದೆ ಬೌದ್ಧಿಕ ಕೌಶಲ್ಯಗಳಾದ ವಿಮರ್ಶಾತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣಾತ್ಮಕ ಸಾಮರ್ಥ್ಯ, ಸಾರಾಂಶ ಮಾಡುವ ಕ್ಷಮತೆ, ಕಲ್ಪನಾ ಶಕ್ತಿ, ಸೃಜನಶೀಲತೆ, ಹಾಗೂ ಸಹಾನುಭೂತಿಯನ್ನು ಬೆಳೆಸುತ್ತದೆ.

ಈ ಉದ್ದೇಶದ ಗುರಿಯನ್ನು ಸಾಧಿಸಲು ಇಲಾಖೆಯಿಂದ ಓದುವ ಹವ್ಯಾಸ ಜ್ಞಾನದ ವಿಕಾಸ ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಸದರಿ ಕಾರ್ಯಕ್ರಮದಡಿಯಲ್ಲಿ ಈ ಕೆಳಕಂಡ ಮಾರ್ಗದರ್ಶಿಯನ್ನು ಪಾಲಿಸಬೇಲು ಎಂದು ಶಾಲೆಗಳಿಗೆ ತಿಳಿಸಲಾಗಿದೆ. ಹೀಗೆ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಹೊಸ ಹೊಸ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆ ಜಾರಿಗೊಳಿಸುತ್ತಲೇ ಇರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+