ಭಾರಿ ಮಳೆ ಎಚ್ಚರಿಕೆ; ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದ್ದರೂ, ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಜೋರಾಗಿದೆ. ಸೋಮವಾರ ಕೂಡ ರಾಜ್ಯದ ಹಲವು ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿದ್ದು ಮುಂಜಾಗ್ರತಾ ಕ್ರಮವಾಗಿ ಎರಡು ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯ ಮಡಿಕೇರಿ, ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕಿನ ಶಾಲೆಗಳಿಗೆ ಸೋಮವಾರ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಭಾರಿ ಮಳೆ ಮುನ್ಸೂಚನೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಭಾರಿ ಮಳೆ ಮುನ್ಸೂಚನೆ ಇದ್ದು ಸೋಮವಾರ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಮಂಗಳವಾರ ಯೆಲ್ಲೋ ಅಲರ್ಟ್ ನೀಡಿದೆ.
Schools have been declared holiday on 15th July (Monday) in Madikeri , Kushalnagara & Somwarpete taluk in Kodagu district due to ongoing heavy rains.#KodaguRains #KarnatakaRains
— ರವಿ ಕೀರ್ತಿ ಗೌಡ (@ravikeerthi22) July 14, 2024
ದಕ್ಷಿಣ ಒಳನಾಡಿನ ಜಿಲ್ಲೆಗಳಿಗೂ ಕೂಡ ಜುಲೈ 18ರವರೆಗೆ ಭಾರಿ ಮಳೆ ಮುನ್ಸೂಚನೆ ಕೊಟ್ಟಿದ್ದು ಆರೆಂಜ್ ಅಲರ್ಟ್ ಘೋಷಿಸಿದೆ.
ಎಚ್ಚರಿಕೆಯಿಂದ ಇರಲು ಸೂಚನೆ
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ರಾಜ್ಯದಲ್ಲಿ ಪ್ರವಾಹದ ಬಗ್ಗೆ ಎಚ್ಚರಿಕೆ ಕೊಟ್ಟಿದೆ. ರಾಜ್ಯದ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಕೆಲವು ಜಿಲ್ಲೆಗಳಲ್ಲಿ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಹಾರಂಗಿ ಜಲಾಶಯದಿಂದ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ್ದು, ಪ್ರವಾಹದ ಬಗ್ಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಗದಗ ಜಿಲ್ಲೆಯ ಸಿಂಗಾಟಾಲೂರು ಬ್ಯಾರೇಜ್‌ನಿಂದ ಕೂಡ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸುತ್ತಿದ್ದು ನದಿ ಪಾತ್ರದ ಜನಗಳಿಗೆ ಎಚ್ಚರಿಕೆಯಿಂದ ಇರಲು ಮನವಿ ಮಾಡಲಾಗಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
School Property: ಸರ್ಕಾರಿ ಶಾಲೆ 12 ವರ್ಷಗಳಿಂದ ಒಂದೇ ಭೂಮಿಯಲ್ಲಿದ್ದರೆ ಅದು ರಾಜ್ಯ ಸರ್ಕಾರದ ಆಸ್ತಿ: ಏನಿದು ಹೊಸ ಕಾನೂನು? -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ












Click it and Unblock the Notifications