ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 31ರವರೆಗೂ ಶಾಲೆಗಳನ್ನು ತೆರೆಯುವುದಿಲ್ಲ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ನವೆಂಬರ್ 23: ಡಿಸೆಂಬರ್ 31ರವರೆಗೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

Recommended Video

ಡಿಸೆಂಬರ್ ಅಂತ್ಯದವರೆಗೂ ಕರ್ನಾಟಕದಲ್ಲಿ ಶಾಲೆ ಆರಂಭ ಇಲ್ಲ | Oneindia Kannada
Karnataka Schools To Remain Closed Till December 31: Yediyurappa

ಡಿಸೆಂಬರ್ ಅಂತ್ಯದಲ್ಲಿ ಸಭೆಯನ್ನು ನಡೆಸಿ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಸಭೆ ಪ್ರಾರಂಭದಲ್ಲಿ ಡಿಗ್ರಿ ಕಾಲೇಜುಗಳ ಬಗ್ಗೆ ಚರ್ಚೆ ನಡೆಯಿತು. ಎಷ್ಟು ವಿದ್ಯಾರ್ಥಿಗಳು ಕಾಲೇಜಿಗೆ ಬರುತ್ತಿದ್ದಾರೆ.

ಪರೀಕ್ಷೆ ಮಾಡಿಸಿದಾಗ ಎಷ್ಟು ವಿದ್ಯಾರ್ಥಿಗಳಿಗೆ ಸೋಂಕು ಬಂದಿದೆ ಎನ್ನುವುದರ ಕುರಿತು ಚರ್ಚಿಸಲಾಯಿತು. ಇದೇ ವೇಳೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ವರದಿಯನ್ನು ಸಚಿವ ಸುರೇಶ್ ಕುಮಾರ್ ಸಿಎಂಗೆ ಸಲ್ಲಿಕೆ ಮಾಡಿದರು. ಶಾಲೆ ಪ್ರಾರಂಭ ಕುರಿತು ವರದಿಯನ್ನು ಆಯುಕ್ತ ಅನ್ಬುಕುಮಾರ್ ಸಿದ್ಧಪಡಿಸಿದ್ದರು.. ಸಭೆಯಲ್ಲಿ ಈ ವರದಿ ಬಗ್ಗೆ ಚರ್ಚೆ ನಡೆಯಿತು.

ಶಾಲೆಗಳಿಗೆ ಬರುವ ಶಿಕ್ಷಕರಿಗೂ ಕೂಡ ತೊಂದರೆಯುಂಟಾಗುತ್ತಿದೆ, ಹಾಗೂ ಮಕ್ಕಳನ್ನು ಕಳುಹಿಸಲು ಪೋಷಕರು ಕೂಡ ಹಿಂಜರಿಯುತ್ತಿದ್ದು, ಶಾಲೆಗಳ ಆರಂಭವನ್ನು ಮುಂದೂಡುವಂತೆ ಹಲವು ಮನವಿಗಳು ಬರುತ್ತಿದ್ದವು.

ಸಭೆಯಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್, ಸಿಎಸ್ ವಿಜಯ್ ಭಾಸ್ಕರ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಆರೋಗ್ಯ ಇಲಾಖೆ, ಸಾರಿಗೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಹೈದ್ರಾಬಾದ್ ನಲ್ಲಿರುವ ಆರೋಗ್ಯ ಸಚಿವ ಡಾ.ಸುಧಾಕರ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆಯಲ್ಲಿ ಹಾಜರಿದ್ದರು.

ಡಿಸೆಂಬರ್ ಅಂತ್ಯದವರೆಗೂ ಶಾಲೆ ಬೇಡ ಎಂದು ಸಚಿವ ಡಾ.ಸುಧಾಕರ್ ಸಚಿವ ಸುಧಾಕರ್ ಸಭೆಗೆ ತಮ್ಮ ಅಭಿಪ್ರಾಯ ತಿಳಿಸಿದರು. ಡಿಸೆಂಬರ್ ತಿಂಗಳಲ್ಲಿ ಕೊರೊನಾ ಎರಡನೇ ಅಲೆ ಶುರುವಾಗುವ ಸಾಧ್ಯತೆ ಇದೆ. ಇದು ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗ್ತಿದೆ. ನಮ್ಮ ರಾಜ್ಯದ ಹವಾಮಾನದಲ್ಲಿ ಬದಲಾವಣೆ ಆಗುತ್ತಿದೆ.

ಈಗಾಗಲೇ ಚಳಿಗಾಲ ಶುರುವಾಗ್ತಿದೆ. ತಜ್ಞರು ಕೂಡ ಡಿಸೆಂಬರ್ ವರೆಗೆ ಶಾಲೆ ಬೇಡ ಅಂದಿದ್ದಾರೆ. ಹೀಗಾಗಿ ಡಿಸೆಂಬರ್ ಕೊನೆಯವರೆಗೂ ಶಾಲಾ ಕಾಲೇಜು ಆರಂಭ ಮಾಡುವುದು ಸೂಕ್ತವಲ್ಲ ಎಂದು ಸುಧಾಕರ್ ತಿಳಿಸಿದರು.

English summary
Karnataka Chief Minister BS Yediyurappa Stated that Schools To Remain Closed Till December 31 Due To Covid 19 reason.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X