Rain Alert: ಮಳೆ ಅಬ್ಬರ ಜೋರು, ಕರ್ನಾಟಕದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ!
ಮಳೆ.. ಮಳೆ.. ಮಳೆ.. ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಎಲ್ಲೆಲ್ಲೂ ಮಳೆ ಕಾರಣಕ್ಕೆ ಜನ ಜೀವನ ಅಸ್ತವ್ಯಸ್ಥ ಆಗಿದೆ. ಕಳೆದ 2 ವಾರಗಳಿಂದ ನಿರಂತರವಾಗಿ ಮಳೆ ಬೀಳುತ್ತಿದ್ದು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಹಳ್ಳ & ಕೊಳ್ಳಗಳು ಕೂಡ ಭೋರ್ಗರೆಯುತ್ತಿವೆ. ಇದೇ ಸಮಯದಲ್ಲಿ ಭಾರಿ ಮಳೆ ಕಾರಣಕ್ಕೆ ಹಲವು ಜಿಲ್ಲೆಗಳಲ್ಲಿ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂಗಾರು ಮಳೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಅಬ್ಬರಿಸುತ್ತಿದ್ದು ಕನ್ನಡ ನಾಡು ಈಗ ಸಂಪೂರ್ಣ ಹಸಿರು ಹಸಿರಾಗಿ ಕಂಗೊಳಿಸುತ್ತಿದೆ. ಅದ್ರಲ್ಲೂ ಬೆಟ್ಟ, ಪರ್ವತಗಳ ನಾಡು ಎಂದು ಗುರುತಿಸಿಕೊಂಡ ಕನ್ನಡ ನಾಡಿನ ಮಲೆನಾಡು ಭಾಗ ಪಶ್ಚಿಮ ಘಟ್ಟದಲ್ಲಿ ಸ್ವರ್ಗ ಈಗ ನಿರ್ಮಾಣ ಆಗಿದೆ. ಕರಾವಳಿ ಕರ್ನಾಟಕ ಸೇರಿ ಮಲೆನಾಡು, ಉತ್ತರ ಕರ್ನಾಟಕ & ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಬೀಳುತ್ತಿದೆ. ಹಾಗಾದ್ರೆ ಇದೀಗ ರಜೆ ಘೋಷಣೆ ಮಾಡಿರುವ ಜಿಲ್ಲೆಗಳು ಯಾವುವು? ಮಾಹಿತಿ ಇಲ್ಲಿದೆ ಮುಂದೆ ಓದಿ.

ಶಾಲಾ & ಕಾಲೇಜುಗಳಿಗೆ ರಜೆ!
ಕರ್ನಾಟಕದ ಕರಾವಳಿ ಜಿಲ್ಲೆಗಳು ಇದೀಗ ಅಕ್ಷರಶಃ ಮುಂಗಾರು ಮಳೆಗೆ ಬೆಚ್ಚಿಬಿದ್ದಿವೆ. ಹೀಗೆ ಭಾರಿ ಮಳೆ ನಿರಂತರವಾಗಿ ಸುರಿಯುತ್ತಿರುವ ಕಾರಣಕ್ಕೆ ಜನಜೀವನ ಕೂಡ ಅಸ್ತವ್ಯಸ್ತವಾಗಿದೆ. ಇನ್ನೂ ಹಲವು ದಿನಗಳ ಕಾಲ ಇದೇ ರೀತಿಯಾಗಿ ಮುಂಗಾರು ಮಳೆ ಕರಾವಳಿ ಜಿಲ್ಲೆ ಹಲವು ಪ್ರದೇಶಗಳಲ್ಲಿ ಅಬ್ಬರಿಸಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಹೀಗಿದ್ದಾಗ ಉತ್ತರ ಕನ್ನಡ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯ ಹಲವು ಕಡೆ ಶಾಲೆ & ಕಾಲೇಜುಗಳಿಗೆ ಈಗ ರಜೆ ಘೋಷಣೆ ಮಾಡಲಾಗಿದೆ.
ಯಾವ ಯಾವ ತಾಲೂಕಿನಲ್ಲಿ ರಜೆ?
ಸದ್ಯದ ಮಾಹಿತಿ ಪ್ರಕಾರ ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗ ಭಾರಿ ಮಳೆ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿ ಕಾರಣ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ & ಕಾರವಾರ ತಾಲೂಕಿನ ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಈಗ ರಜೆಯನ್ನು ಘೋಷಣೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಅಧಿಕೃತ ಮಾಹಿತಿ ನೀಡಿದ್ದಾರೆ.
ಜುಲೈ 8ರ ಸೋಮವಾರ ಈ ತಾಲೂಕುಗಳಲ್ಲಿ ಇರುವ ಅಂಗನವಾಡಿ, ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು ಕೂಡ ಬಂದ್ ಆಗಲಿವೆ. ಆದರೆ ಈ ಸಮಯದಲ್ಲಿ ಮತ್ತಷ್ಟು ತಾಲೂಕು & ಜಿಲ್ಲೆಗಳಲ್ಲೂ ಶಾಲೆ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸಾಧ್ಯತೆ ದಟ್ಟವಾಗಿದೆ. ಅಲ್ಲದೆ ಭಾರಿ ಮಳೆಯಿಂದ ಉಂಟಾಗುವ ಹಾನಿ ತಪ್ಪಿಸಿ, ಸಂಕಷ್ಟಕ್ಕೆ ಸಿಲುಕಿದವರ ರಕ್ಷಣೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
ಮುಂಗಾರು ಮಳೆ ಅಂದ್ರೆ ಕರ್ನಾಟಕ & ಕನ್ನಡಿಗರ ಪಾಲಿಗೆ ಜೀವಕಳೆ ಇದ್ದಂತೆ. ಯಾಕಂದ್ರೆ ಮುಂಗಾರು ಮಳೆ ಇಲ್ಲದೆ ಬದುಕೇ ಇಲ್ಲ. ಮುಂಗಾರು ಮಳೆ ಬರದೇ ಇದ್ದರೆ ನೀರು ಖಾಲಿ ಖಾಲಿ. ಹೀಗಿದ್ದಾಗ 2024ರ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕರ್ನಾಟಕದ ಡ್ಯಾಂಗಳಲ್ಲಿ ಭಾರಿ ಪ್ರಮಾಣದ ನೀರು ಸಂಗ್ರಹ ಆಗುತ್ತಿದೆ. ಅದರಲ್ಲೂ ಕರ್ನಾಟಕದ ಕೆಆರ್‌ಎಸ್ ಸೇರಿ, ಕಬಿನಿ, ಹೇಮಾವತಿ, ತುಂಗಾ, ಭದ್ರಾ & ಹಾರಂಗಿ ಡ್ಯಾಂಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಬರುತ್ತಿದೆ. ಈ ಕುರಿತು ಸಂಪೂರ್ಣ ಮಾಹಿತಿಗೆ ಮುಂದೆ ಓದಿ.
ಕೆಆರ್‌ಎಸ್ ಜಲಾಶಯ ಫುಲ್?
ಕೆಆರ್‌ಎಸ್ ಜಲಾಶಯದಲ್ಲಿ ಒಟ್ಟು 49.45 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯ ಇದ್ದು, ಈಗ 24.42 ಅಡಿ ನೀರು ಇದೆ. ಆದ್ರೆ ಕಳೆದ ವರ್ಷ ಇದೇ ಸಮಯಕ್ಕೆ ಕೇವಲ 10.57 ಟಿಎಂಸಿ ಅಡಿ ನೀರು ಇತ್ತು. ಸದ್ಯ 11,027 ಕ್ಯುಸೆಕ್ ನೀರು ಕೆಆರ್‌ಎಸ್ ಡ್ಯಾಂಗೆ ಹರಿದು ಬರ್ತಿದೆ. ಹಾಗೇ ಮುಂದಿನ ವಾರ ಕೂಡ ಭರ್ಜರಿ ಮಳೆಯ ನಿರೀಕ್ಷೆ ಇದ್ದು, ಈ ಡ್ಯಾಂಗೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆ ಇದೆ.
ಕಬಿನಿ ಡ್ಯಾಂನಲ್ಲಿ ಎಷ್ಟಿದೆ ನೀರು?
ಕಾವೇರಿ ನದಿಗೆ ಕಟ್ಟಿರುವ ಪ್ರಮುಖ ಡ್ಯಾಂಗಳ ಪೈಕಿ ಕಬಿನಿ ಕೂಡ ಒಂದಾಗಿದೆ. ಈ ಜಲಾಶಯ ಚಿಕ್ಕದಾಗಿದ್ದರೂ ಕಾವೇರಿ ಕೊಳ್ಳದಲ್ಲಿ ದೊಡ್ಡ ಪರಿಣಾಮ ಬೀರುತ್ತದೆ. 19.52 ಟಿಎಂಸಿ ಅಡಿ ನೀರನ್ನು ಕಬಿನಿ ಜಲಾಶಯದಲ್ಲಿ ಸಂಗ್ರಹ ಮಾಡಬಹುದು. ಇದೀಗ ಕಬಿನಿ ಡ್ಯಾಂನಲ್ಲಿ 17.98 ಟಿಎಂಸಿ ಅಡಿ ನೀರು ಸಂಗ್ರಹ ಇದೆ. 5,039 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಕಬಿನಿ ಡ್ಯಾಂ ಭಾಗಶಃ ಭರ್ತಿ ಆಗಿದೆ.
ಹೇಮಾವತಿ ಡ್ಯಾಂ ನೀರಿನ ಮಟ್ಟ
ಹಾಸನ ಜಿಲ್ಲೆಯ ಹೇಮಾವತಿ ಡ್ಯಾಂ ತುಂಬಿಕೊಳ್ಳುತ್ತಿದೆ ಒಟ್ಟು 37 ಟಿಎಂಸಿ ಸಾಮರ್ಥ್ಯ ಇರುವ ಹೇಮಾವತಿ ಡ್ಯಾಂಗೆ ಬರೋಬ್ಬರಿ 8,448 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಹೀಗೆ ಹೇಮಾವತಿ ಜಲಾಶಯದಲ್ಲಿ 18.303 ಟಿಎಂಸಿ ನೀರು ಸಂಗ್ರಹ ಆಗಿದೆ 2922 ಅಡಿ ಎತ್ತರ ಇರುವ ಈ ಡ್ಯಾಂಗೆ ಇದೀಗ 2897 ಅಡಿ ನೀರು ಬಂದಿದ್ದು ಹೀಗೆ ಮಳೆ ಮುಂದುವರಿದರೆ ಜುಲೈ ಅಂತ್ಯಕ್ಕೆ ಹೇಮಾವತಿ ಜಲಾಶಯ ತುಂಬಿ ತುಳುಕುವ ಸಾಧ್ಯತೆ ದಟ್ಟವಾಗಿದೆ.












Click it and Unblock the Notifications