Heavy Rain: ಮುಂದಿನ 24 ಗಂಟೆ ಭರ್ಜರಿ ಮಳೆ, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ!

ಮಳೆಯ ಅಬ್ಬರ ಜೋರಾಗಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದೆ. ಈಗಾಗಲೇ ಮುಂಗಾರು ಮಾರುತಗಳು ಕರ್ನಾಟಕಕ್ಕೆ ಎಂಟ್ರಿ ಕೊಟ್ಟು 1 ತಿಂಗಳು ತುಂಬುತ್ತಿದೆ. ಹೀಗಿದ್ದರೂ, ಕರ್ನಾಟಕದ ಡ್ಯಾಂಗಳು ಸರಿಯಾಗಿ ತುಂಬುತ್ತಿಲ್ಲ ಎನ್ನುವ ಆತಂಕ ಕಾಡುತ್ತಿತ್ತು. ಆದರೆ ಈಗ ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ ಬೀಳುವ ಎಚ್ಚರಿಕೆ ನೀಡಿದ್ದು, ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮುಂಗಾರು ಮಳೆ ನಂಬಿಕೊಂಡು ಕರ್ನಾಟಕದ ರೈತರು ಬಿತ್ತನೆ ಮಾಡಿದ್ದಾರೆ. ಹೀಗಾಗಿ ಉತ್ತಮವಾಗಿ ಮಳೆ ಬಂದರೆ ಕರ್ನಾಟಕದ ಜಲಾಶಯಗಳು ತುಂಬಲಿವೆ. ಆದರೆ ಕಳೆದ ಕೆಲವು ವಾರದಿಂದ ಮಳೆ ಸರಿಯಾಗಿ ಬರುತ್ತಿಲ್ಲ ಎಂಬ ಬೇಸರ ಕಾಡುತ್ತಿತ್ತು. ಆದ್ರೆ ಈ ಬೇಸರದ ಸಮಯದಲ್ಲೇ ಭರ್ಜರಿ ಸುದ್ದಿ ಸಿಕ್ಕಂತಾಗಿದೆ. ಕರ್ನಾಟಕದಲ್ಲಿ ಮತ್ತೆ ಮುಂಗಾರು ಮಳೆ ಜೋರಾಗಿದ್ದು, ಕರಾವಳಿ ಕರ್ನಾಟಕ, ಮಲೆನಾಡು ಭಾಗ ಸೇರಿದಂತೆ ಭಾಗಶಃ ಇಡೀ ಕರ್ನಾಟಕ ಮಳೆಯಲ್ಲಿ ಮಿಂದು ಹೋಗುವುದು ಪಕ್ಕಾ ಆಗಿದೆ. ಹಾಗಾದ್ರೆ ಇದೀಗ ಮಳೆ ಕಾರಣಕ್ಕೆ ಶಾಲಾ & ಕಾಲೇಜಿಗೆ ರಜೆ ಕೊಟ್ಟಿದ್ದು ಯಾವ ಜಿಲ್ಲೆಗಳಿಗೆ? ಮುಂದೆ ಓದಿ.

Schools Will Be Shutdown After The Heavy Rain Alert To These Places Of Karnataka State

ಈ ಜಿಲ್ಲೆಗಳಲ್ಲಿ ರಜೆ ಘೋಷಣೆ!

ಅಂದಹಾಗೆ ಕರಾವಳಿ ಕರ್ನಾಟಕ ಭಾಗದಲ್ಲಿ ಮುಂದಿನ 24 ಗಂಟೆ ಕಾಲ ಭರ್ಜರಿ ಮಳೆ ಬೀಳಲಿದೆ ಎಂಬ ಮುನ್ಸೂಚನೆ ಸಿಕ್ಕಿದೆ. ಗುಡುಗು & ಸಿಡಿಲು ಸಹಿತ ಮಳೆ ಬೀಳಲಿದ್ದು ಭಾರಿ ಮುನ್ನೆಚ್ಚರಿಕೆ ವಹಿಸಲಾಗಿದೆ. ನಿರಂತರ ಮಳೆ ಸುರಿಯುವ ಸೂಚನೆ ಕಾರಣ ಈಗ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂನ್ 27ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶವನ್ನು ಹೊರಡಿಸಿದ್ದಾರೆ. ಅಂಗನವಾಡಿಗಳಿಗೆ ಕೂಡ ರಜೆ ಘೋಷಣೆ ಮಾಡಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯಬಾರದು

ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಹಾಗೇ ದಕ್ಷಿಣ ಕನ್ನಡ ಜಿಲ್ಲೆಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ಕಾವೇರಿ ಉಗಮವಾಗುವ ಕೊಡಗು ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಾಗಲಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 28 ರವರೆಗೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಲ್ಲೂ ಭರ್ಜರಿ ಮಳೆ!

ಹೀಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ನಿರಂತರ ಮಳೆ ಬೀಳುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಕರ್ನಾಟಕದ ಡ್ಯಾಂಗಳ ನೀರಿನ ಮಟ್ಟ ಕೂಡ ಹೆಚ್ಚಾಗುವ ನಿರೀಕ್ಷೆ ಇದೆ. ಮತ್ತೊಂದು ಕಡೆ ಸೂಕ್ಷ್ಮ ಪ್ರದೇಶದ ಜನರಿಗೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ. ಬೆಂಗಳೂರಲ್ಲಿ ಕೂಡ ಮಳೆಯ ಅಬ್ಬರ ಬಲು ಜೋರಾಗಿ ಇರುವ ಬಗ್ಗೆ ಎಚ್ಚರಿಸಲಾಗಿದೆ. ಹೀಗಾಗಿ ಬೆಂಗಳೂರಿನ ಜನ ನಾಳೆ ಹೊರಗೆ ಹೋಗುವುದು ಇದ್ದರೆ ಕೊಡೆ ಮರೆಯಬೇಡಿ, ಹಾಗೆಯೇ ಗಾಡಿ ಮೇಲೆ ಹೊರಟರೆ ರೈನ್ ಕೋಟ್ ಜೊತೆಗೆ ಎಚ್ಚರಿಕೆಯಿಂದ ಗಾಡಿ ಓಡಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+