ಎನ್‌ಇಪಿ ಜಾರಿಗೊಳಿಸದ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು, ಜುಲೈ. 12: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತಿರುವ ರಾಜ್ಯ ಸರ್ಕಾರದ ಕ್ರಮ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.

ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬೆಂಗಳೂರಿನ ಗಿರೀಶ್ ಭಾರಧ್ವಾಜ್ ಹಾಗೂ ಆರ್. ಆನಂದ ಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ. ವಿ ಅರವಿಂದ್ ಅವರ ವಿಭಾಗೀಯ ಪೀಠ ಸಲ್ಲಿಸಲಾದ ಅರ್ಜಿ ಸಂಬಂಧ ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 1ಕ್ಕೆ ಮುಂದೂಡಲಾಗಿದೆ.

Scrapping of NEP in the state HC ordered notice to state government

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲು ನಿರ್ಧರಿಸಿ ಇದೀಗ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲು ತೀರ್ಮಾನಿಸಿದೆ. ಈ ಮೂಲಕ ಯು -ಟರ್ನ್ ತೆಗೆದುಕೊಂಡಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.

ಅಲ್ಲದೆ, ಒಂದು ರಾಷ್ಟ್ರ ಒಂದು ಶಿಕ್ಷಣ ನೀತಿ ಎನ್ನುವ ಧ್ಯೇಯದೊಂದಿಗೆ ಕೇಂದ್ರ ಸರ್ಕಾರ ಈ ಯೋಜನೆ ಜಾರಿಗೆ ತಂದಿದೆ. ಈಗ ರಾಜ್ಯದಲ್ಲಿ ಸರ್ಕಾರ ಬದಲಾಗಿದೆ ಹೀಗಾಗಿ ಈ ರೀತಿಯಲ್ಲಿ ನಿರ್ಧಾರಕ್ಕೆ ಮುಂದಾಗಿದೆ. ಈ ವಿಚಾರವಾಗಿ ಕೇಂದ್ರದ ಆದೇಶ ಪೂರ್ಣ ರಾಷ್ಟ್ರಕ್ಕೆ ಅನ್ವಯವಾಗುತ್ತದೆ. ಪ್ರತಿ ರಾಜ್ಯವೂ ಹಂತ ಹಂತವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದು ವಿವರಿಸಿದರು. ಜತೆಗೆ ಸರ್ಕಾರ ರಾಜ್ಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಷ್ಟ್ರ ಶಿಕ್ಷಣ ನೀತಿಯನ್ನು ಕಾರ್ಯರೂಪಕ್ಕೆ ತರುವಂತೆ ನಿರ್ದೇಶಿಸುವಂತೆ ಮನವಿ ಮಾಡಿದರು.

ಅರ್ಜಿಯ ವಿವರಗಳೇನು...?

ಭಾರತ ಜನಾಂಗೀಯವಾಗಿ ವೈವಿಧ್ಯಮಯ ರಾಷ್ಟ್ರಗಳಲ್ಲಿ ಒಂದಾಗಿದೆ. ಇಲ್ಲಿನ ಶಿಕ್ಷಣವೂ ವಿವಿಧ ಹಂತಗಳನ್ನು ಹಾಗೂ ಪ್ರಕಾರಗಳನ್ನು ಒಳಗೊಂಡಿದೆ. ಉದಾಹರಣೆಗೆ ಬಾಲ್ಯ ಶಿಕ್ಷಣ, ಪ್ರಾಥಮಿಕ ಶಿಕ್ಷಣ, ಮಾಧ್ಯಮಿಕ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ವೃತ್ತಿಪರ ಶಿಕ್ಷಣ ಇತ್ಯಾದಿ. ವಿದ್ಯಾರ್ಥಿಗಳಿಗೆ ಸಮನಾಗಿ ಶಿಕ್ಷಣ ಒದಗಿಸಲು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿದೆ.

Scrapping of NEP in the state HC ordered notice to state government

ಶಿಕ್ಷಣ ಸಂಸ್ಥೆಗಳಿಗೆ ಒಂದೇ ತರನಾದ ಚೌಕಟ್ಟು ಮತ್ತು ಮಾರ್ಗಸೂಚಿ ಒದಗಿಸುವುದು ಇದರ ಮುಖ್ಯ ಉದ್ದೇಶ. ಕೇಂದ್ರ ಸರ್ಕಾರದ ಆದೇಶದ ಮೇರೆಗೆ 2020 ರಲ್ಲಿ ಹೊಸ ಮತ್ತು ಪರಿಷ್ಕೃತ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಬಂದಿತ್ತು. ಸರ್ಕಾರದ ಆದೇಶ ಅನ್ವಯ 2021 ರ ಆ. 7 ರಂದು ರಾಜ್ಯ ವ್ಯಾಪ್ತಿ ಜಾರಿಗೆ ಬಂತು. ರಾಜಕೀಯ ಪಕ್ಷಗಳು ಬದಲಾವಣೆಯಿಂದಾಗಿ ನಮ್ಮಲ್ಲಿ ರಾಷ್ಟ್ರೀಯ ಅನುಷ್ಠಾನವನ್ನು ಹಿಂಪಡೆಯಲು ನಿರ್ಧರಿಸಿದರು ಜತೆಗೆ ರಾಜ್ಯವೂ ತನ್ನದೇ ಆದ ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ನಿರ್ಧರಿಸಿದ್ದು ಈ ಹಿನ್ನೆಲೆ ಶಿಕ್ಷಣ ನೀತಿಯನ್ನು ರೂಪಿಸಲು ಸಮಿತಿ ರಚಿಸಿರುವುದಾಗಿ 2023 ರ ಅ.11 ರಂದು ಹೊರಡಿಸಿರುವ ಆದೇಶದಲ್ಲಿ ಸ್ಪಷ್ಟಪಡಿಸಿದೆ.

2020 ರಲ್ಲಿ ರಾಜ್ಯವೂ ಅನುಷ್ಠಾನ ಮಾಡಿದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸೂಕ್ತ ಕಾರಣವಿಲ್ಲದೇ ಹಿಂಪಡೆಯಲು ನಿರ್ಧರಿಸಿದ್ದರು. ಸರ್ಕಾರದ ಈ ನಿರ್ಧಾರದಿಂದ ವಿಶ್ವವಿದ್ಯಾನಿಲಯಗಳಿಗೆ, ಶಿಕ್ಷಣ ಸಂಸ್ಥೆಗಳಿಗೆ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಗೊಂದಲ ಉಂಟುಮಾಡಿದೆ ಜತಗೆ ಇದರಿಂದ ಕ್ರೀಯಾತ್ಮಕ ಮತ್ತು ಸಮಗ್ರ ನೀತಿಯಂದ ವಂಚಿತರಾಗಬುದು ಈ ಹಿನ್ನೆಲೆ ಸರ್ಕಾರ ರಾಜ್ಯ ಶಿಕ್ಷಣ ನೀತಿಯನ್ನು ಕೈಬಿಟ್ಟು ರಾಷ್ಟ್ರ ಶಿಕ್ಷಣ ನೀತಿಯನ್ನು ಅನುಸರಿಸುವಂತೆ ನಿರ್ದೇಶಿಸಬೇಕು ಜತೆಗೆ 2023 ರ ಅ. 11 ಸರ್ಕಾರ ಈ ಬಗ್ಗೆ ಹೊರಡಿಸಿದ ಆದೇಶ ರದ್ದುಗೊಳಿಸಬೇಕೆಂದು ಮನವಿ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+