ಕಾಂಗ್ರೆಸ್ ನಾಯಕರ ಒತ್ತಾಯದ ಮೇರೆಗೆ ನಾಮಪತ್ರ ಹಿಂಪಡೆಯಲಾಗಿತ್ತು: ಎಸ್‌ಡಿಪಿಐ ಮುಖಂಡ
2018ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್‌ಡಿಪಿಐ 25 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿತ್ತು.
ಬಂಟ್ವಾಳ, ಮಾರ್ಚ್ 17: 2018 ರ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಆಂತರಿಕ ಮೈತ್ರಿ ಮಾಡಿಕೊಳ್ಳುವ ಉದ್ದೇಶದಿಂದ ಹಿರಿಯ ಕಾಂಗ್ರೆಸ್ ನಾಯಕರು ತಮ್ಮನ್ನು ಸಂಪರ್ಕಿಸಿದ್ದರಿಂದ ಎಸ್‌ಡಿಪಿಐ ಕೆಲವು ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಹಿಂತೆಗೆದುಕೊಂಡಿದೆ ಎಂದು ಎಸ್‌ಡಿಪಿಐ ಮುಖಂಡ ಮತ್ತು ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ತುಂಬೆ ಹೇಳಿದ್ದಾರೆ.
ಈ ಬಾರಿ ಯಾವುದೇ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು ಎಸ್‌ಡಿಪಿಐ ಈಗಾಗಲೇ ಘೋಷಿಸಿರುವ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಹಿಂದಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಎಸ್‌ಡಿಪಿಐ 25 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿತ್ತು. ಕೊನೆ ಗಳಿಗೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ನಮ್ಮನ್ನು ಸಂಪರ್ಕಿಸಿ ಬಿಜೆಪಿಯನ್ನು ಸೋಲಿಸಲು ನಮ್ಮೊಂದಿಗೆ ಒಪ್ಪಂದ ಮಾಡಿಕೊಳ್ಳುವಂತೆ ಕೇಳಿಕೊಂಡರು. ಮೂರು ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರು ಮತ್ತು ಅಲ್ಲಿ ತಮ್ಮ (ಕಾಂಗ್ರೆಸ್) ದುರ್ಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ನಮ್ಮನ್ನು ಬೆಂಬಲಿಸುವ ಭರವಸೆ ನೀಡಿದರು ಎಂದು ಅವರು ಹೇಳಿದರು.

ದಕ್ಷಿಣ ಕನ್ನಡದ ಎಲ್ಲಾ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಎಸ್‌ಡಿಪಿಐ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗುವ ಬಂಟ್ವಾಳ, ಬೆಳ್ತಂಗಡಿ ಮತ್ತು ಮಂಗಳೂರು ಕ್ಷೇತ್ರಗಳಲ್ಲಿ ಎಸ್‌ಡಿಪಿಐ ಗೆಲ್ಲುವ ವಿಶ್ವಾಸವಿದೆ ಎಂದರು.
ಈ ಬಗ್ಗೆ ದಕ್ಷಿಣ ಕನ್ನಡ ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರಲಿಲ್ಲ. ಮತಗಳನ್ನು ವಿಭಜಿಸಲು ಬಿಜೆಪಿಯಿಂದ ಎಸ್‌ಡಿಪಿಐ ಚುನಾವಣೆ ಎದುರಿಸಲು ಬೆಂಬಲ ಪಡೆಯುತ್ತಿದೆ. ಎಸ್‌ಡಿಪಿಐ ಮತ್ತು ಬಿಜೆಪಿ ಎರಡೂ ಕೋಮುವಾದಿ ಮತ್ತು ಸಮಾನ ಮನಸ್ಕವಾಗಿವೆ. 2023 ರ ಚುನಾವಣೆಯಲ್ಲಿಯೂ ಸಹ, ಎಸ್‌ಡಿಪಿಐ ಒಂದು ರಾಜಕೀಯ ಪಕ್ಷವಾಗಿ ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಅವರು ಹೇಳಿದರು.
ಕಾಂಗ್ರೆಸ್ ಎಸ್‌ಡಿಪಿಐ ಜೊತೆ ಒಪ್ಪಂದ ಮಾಡಿಕೊಂಡಿರುವುದನ್ನು ಟೀಕಿಸಿರುವ ಬಿಜೆಪಿಯು ಕಾಂಗ್ರೆಸ್ ಬಾಹ್ಯವಾಗಿ ಉಗ್ರರನ್ನು ಬೆಂಬಲಿಸಿದರೆ ಅಂತರಿಕವಾಗಿ ಎಸ್ಡಿಪಿಐ ಜೊತೆ ಮೈತ್ರಿ ಮಾಡಿಕೊಂಡಿರುವುದು ಬಹಿರಂಗವಾಗಿದೆ ಎಂದು ಆರೋಪಿಸಿ #CommunalCongress ಹ್ಯಾಶ್‍ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಎಸ್‌ಡಿಪಿಐ ಮೈತ್ರಿ ಬಗ್ಗೆ ಪಿಎಫ್‍ಐ, ಕೆಎಫ್‌ಡಿ ಮತ್ತು ಎಸ್‍ಡಿಪಿಐ ಕಾಂಗ್ರೆಸ್ಸಿನ ಇನ್ನೊಂದು ಮುಖ. ಪಿಎಫ್‌ಐ ಕಾರ್ಯಕರ್ತರು ಎಸ್‍ಡಿಪಿಐ ಮೂಲಕ ತಮ್ಮ ಚಟುವಟಿಕೆ ಮುಂದುವರಿಸಿದ್ದಾರೆ. ಕಾಂಗ್ರೆಸ್ ಮತ್ತು ಎಸ್‍ಡಿಪಿಐ ನಡುವಿನ ಸಂಬಂಧ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಟೀಕೆ ಮಾಡಿದ್ದಾರೆ.
ಕರ್ನಾಟಕ ಬಿಜೆಪಿಯು ಕಾಂಗ್ರೆಸ್ ಬಾಹ್ಯವಾಗಿ ಉಗ್ರರನ್ನು ಬೆಂಬಲಿಸಿದರೆ, ಅಂತರಿಕವಾಗಿ ಎಸ್ಡಿಪಿಐ ಜೊತೆ ಮೈತ್ರಿ ಮಾಡಿಕೊಂಡಿದ್ದು ಬಹಿರಂಗವಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಮಾಡಿಕೊಂಡಿದ್ದ ಒಳ ಒಪ್ಪಂದ ಇದೀಗ ಬಹಿರಂಗವಾಗಿದೆ. ಈಗ ಎದುರುಬದರು ನಿಂತಿರುವುದೂ ಅಂಥದ್ದೇ ನಾಟಕ. ಅವು ಸಮಾಜವಿರೋಧಿ ಶಕ್ತಿಗಳೇ ಆಗಿರಲಿ, ಅಧಿಕಾರಕ್ಕಾಗಿ ಯಾರೊಂದಿಗೂ ಕೈಜೋಡಿಸಲು ಕಾಂಗ್ರೆಸ್ ಹೇಸುವುದಿಲ್ಲ. ಎದುರೆದುರು ಬೈದಾಡಿಕೊಂಡರೂ ಒಳಗೊಳಗೆ ಷಡ್ಯಂತ್ರ ಮಾಡಿ, ದೇಶದ ಅಡಿಪಾಯ-ಅಸ್ಮಿತೆಗಳನ್ನು ಅಲುಗಾಡಿಸುವ ಪ್ರಯತ್ನವನ್ನು ಕೇವಲ ಚುನಾವಣೆಗೋಸ್ಕರ ಮಾಡುತ್ತಿರುವುದು ಖೇದಕರ.
ವಿದೇಶೀ ಕೈಗೊಂಬೆಯಾಗಿ ಭಾರತವನ್ನು ಹೊರಗಿಂದ ಹಣಿಯಲು ರಾಹುಲ್ ಗಾಂಧಿ ನಿಂತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಪಿಎಫ್ಐ-ಎಸ್‌ಡಿಪಿಐ ಗೂಂಡಾಗಳನ್ನು ಬಿಡುಗಡೆ ಮಾಡಿ ಕರ್ನಾಟಕದಲ್ಲಿ ಒಳ ಒಪ್ಪಂದ ಮಾಡಿಕೊಂಡಿದ್ದರು. ಈಗಲೂ ಕಾಂಗ್ರೆಸ್ ಅವರೊಂದಿಗೆ ಅದೇ ಸಂಬಂಧವನ್ನು ಮುಂದುವರಿಸಿದೆ ಎಂದು ಟ್ವೀಟ್ ಮಾಡಿದೆ.












Click it and Unblock the Notifications