Get Updates
Get notified of breaking news, exclusive insights, and must-see stories!

ಎಸ್‌ಡಿಪಿಐ ಪ್ರಕರಣ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಏಪ್ರಿಲ್ 18; ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾಗೆ (ಎಸ್‌ಡಿಪಿಐ) ಸೇರಿದ ಕಚೇರಿಗಳ ಮೇಲೆ ದಾಳಿ ನಡೆಸಿ, ವಸ್ತುಗಳನ್ನು ಜಪ್ತಿ ಮಾಡಿ ಕಚೇರಿಗಳಿಗೆ ಬೀಗ ಹಾಕಿರುವ ಪ್ರಕರಣದ ಕುರಿತ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ ತೀರ್ಪು ಕಾಯ್ದಿರಿಸಿದೆ.

ಎಸ್‌ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾಪ್ರಧಾನ ಕಾರ್ಯದರ್ಶಿ ಅನ್ವರ್‌ಸಾದತ್‌ ಸಲ್ಲಿಸಿರುವ ಅರ್ಜಿ ಕುರಿತು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಸೋಮವಾರ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿತು, ನಂತರ ತೀರ್ಪು ಕಾಯ್ದಿರಿಸಿರುವುದಾಗಿ ಪ್ರಕಟಿಸಿತು.

SDPI Office Seized Karnataka High Court Reserved Order

ರಾಜ್ಯ ಸರ್ಕಾರಿ ವಕೀಲರು, ಎಸ್‌ಡಿಪಿಐ ಕಚೇರಿಗಳನ್ನು ನಿಷೇಧಿತ ಪಿಎಫ್‌ಐ ಮತ್ತು ಸಿಎಫ್‌ಐ ಸಂಘಟನೆಗಳ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಆಧರಿಸಿ ಜಿಲ್ಲಾಧಿಕಾರಿಗಳು ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವುದನ್ನು ದೃಢಪಡಿಸಿಕೊಂಡ ನಂತರವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.

ಕೇಂದ್ರ ರಾಜ್ಯಗಳಿಗೆ ನಿಯೋಜಿಸಿರುವ ಅಧಿಕಾರವನ್ನು ಆಧರಿಸಿ ಜಿಲ್ಲಾಡಳಿತ ಸಮಗ್ರ ಮಾಹಿತಿ ಕಲೆಹಾಕಿ, ತನಿಖೆ ನಡೆಸಿ, ಶಾಂತಿ ಭಂಗ ಹಾಗೂ ಸಾರ್ವಜನಿಕ ಸುವ್ಯವಸ್ಥೆ ಹಾಳು ಮಾಡುವ ಉದ್ದೇಶದ ಕೃತ್ಯಗಳನ್ನು ನಡೆಸುತ್ತಿದೆ ಎಂಬುದನ್ನು ತಿಳಿದು ಎಸ್‌ಡಿಪಿಐ ಕಚೇರಿಗಳ ಮೇಲೆ ದಾಳಿ ನಡೆಸಿ ನಂತರ ಅವುಗಳನ್ನು ಸೀಲ್‌ ಮಾಡಲಾಗಿದೆ ಎಂದು ಹೇಳಿದರು. ಕೇಂದ್ರ ಸರ್ಕಾರಿ ವಕೀಲರೂ ಸಹ ರಾಜ್ಯ ಸರ್ಕಾರದ ವಾದವನ್ನು ಬೆಂಬಲಿಸಿದರು.

SDPI Office Seized Karnataka High Court Reserved Order

ಅರ್ಜಿದಾರರ ಪರ ವಕೀಲರು, ಯಾವುದೇ ಮಾಹಿತಿ ನೀಡದೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆ ಇರುವ ಎಸ್‌ಡಿಪಿಐ ಕಚೇರಿಗಳು, ಚುನಾಯಿತ ಕಾರ್ಪೊರೇಟರ್‌ಗಳ ಕಚೇರಿಗಳಿಗೆ ಬೀಗ ಹಾಕಲಾಗಿದೆ. ದೇಶದ ವಿವಿಧ ರಾಜ್ಯಗಳಲ್ಲಿಎಸ್‌ಡಿಪಿಐ ಪಕ್ಷ ದ ಹಲವು ಮಂದಿ ಚುನಾಯಿತರಾಗಿದ್ದಾರೆ. ದಕ್ಷಿಣ ಕನ್ನಡದಲಿ 200ಕ್ಕೂ ಅಧಿಕ ಚುನಾಯಿತ ಪ್ರತಿನಿಧಿಗಳಿದ್ದು, ರಾಜಕೀಯ ಚಟುವಟಿಕೆ ನಡೆಸಲು ಅವರಿಗೆ ಕಚೇರಿಯ ಅಗತ್ಯವಿದೆ. ಆದ್ದರಿಂದ, ಜಪ್ತಿ ಮಾಡಿರುವ ಕಚೇರಿಗಳಿಗೆ ಹಾಕಲಾಗಿರುವ ಮೊಹರು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗೆ ನಿರ್ದೇಶಿಸಬೇಕು ಎಂದು ಕೋರಿದರು.

ಅಲ್ಲದೆ, ಪ್ರಜಾಪ್ರತಿನಿಧಿ ಕಾಯ್ದೆ-1951ರ ಅಡಿ ನೋಂದಾಯಿತ ರಾಜಕೀಯ ಪಕ್ಷವಾಗಿರುವ ಎಸ್‌ಡಿಪಿಐ, ತುಳಿತಕ್ಕೊಳಗಾದ ಸಮುದಾಯಗಳ ಪರವಾಗಿ ಕೆಲಸ ಮಾಡುತ್ತಿದೆ. ಇದೇ ಕಾರಣಕ್ಕೆ ಕೆಲ ವಿಭಜನಕಾರಿ ಶಕ್ತಿಗಳ ಕೆಂಗಣ್ಣಿಗೆ ಪಕ್ಷ ಗುರಿಯಾಗಿದ್ದು, ಅದರ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸಲು ಸರ್ಕಾರಿ ಸಂಸ್ಥೆಗಳ ಮೇಲೆ ಒತ್ತಡ ಹಾಕಲಾಗುತ್ತಿದೆ. ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಜತೆ ಎಸ್‌ಡಿಪಿಐ ಯಾವುದೇ ಸಂಪರ್ಕ ಹೊಂದಿಲ್ಲಎಂದು ಅರ್ಜಿಯಲ್ಲಿ ಹೇಳಿತ್ತು.

ಪಿಎಫ್‌ಐ ನಿಷೇಧದ; ಕೇಂದ್ರ ಗೃಹ ಸಚಿವಾಲಯ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ, 1967ರ ನಿಬಂಧನೆಗಳ ಅಡಿಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಕಾನೂನುಬಾಹಿರ ಸಂಘಟನೆ ಎಂದು 2022ರಲ್ಲಿ ಘೋಷಣೆ ಮಾಡಿತ್ತು. ಪಿಎಫ್ಐ ಮತ್ತು ಅದರ ಸಹವರ್ತಿಗಳು ಅಥವಾ ಅಂಗ ಸಂಸ್ಥೆಗಳು ಅಥವಾ ವೇದಿಕೆಗಳು ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದು, ಉದ್ದೇಶಿತ ಭಯಾನಕ ಹತ್ಯೆಗಳಲ್ಲಿ ತೊಡಗಿಕೊಂಡಿರುವುದು, ದೇಶದ ಸಾಂವಿಧಾನಿಕ ವ್ಯವಸ್ಥೆಯನ್ನು ಕಡೆಗಣಿಸುವುದು, ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವುದು ಸೇರಿದಂತೆ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಇದು ದೇಶದ ಏಕತೆ, ಸುರಕ್ಷತೆ ಮತ್ತು ಸಾರ್ವಭೌಮತ್ವಕ್ಕೆ ಧಕ್ಕೆ ಉಂಟುಮಾಡುವಂತಹುದಾಗಿದೆ ಎಂದು ನಿಷೇಧದ ಆದೇಶದಲ್ಲಿ ಗೃಹ ಸಚಿವಾಲಯ ಹೇಳಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+