ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಲವು ಕ್ಷೇತ್ರಕ್ಕೆ ಜೆಡಿಎಸ್ ಪಟ್ಟು, ಕಾಂಗ್ರೆಸ್‌ಗೆ ಸಂಕಟ!

|
Google Oneindia Kannada News

Recommended Video

Lok Sabha Elections 2019 :ಈ ಮೂರು ಕ್ಷೇತ್ರಗಳನ್ನ ಕಾಂಗ್ರೆಸ್ ಬಿಟ್ಟುಕೊಡಲೆಂದು ಜೆಡಿಎಸ್ ಪಟ್ಟು ಹಿಡಿದಿರೋದ್ಯಾಕೆ?

ಬೆಂಗಳೂರು, ಮಾರ್ಚ್ 03 : ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಮಾತುಕತೆ ಇನ್ನೂ ಅಂತಿಮ ಹಂತಕ್ಕೆ ಬಂದಿಲ್ಲ. ಕೆಲವು ಕ್ಷೇತ್ರಗಳ ಹಂಚಿಕೆಯಲ್ಲಿ ಇನ್ನೂ ಉಭಯ ಪಕ್ಷಗಳ ನಡುವೆ ಹೊಂದಾಣಿಕೆ ಮೂಡಿಲ್ಲ.

ಕಾಂಗ್ರೆಸ್ ಈ 3 ಕ್ಷೇತ್ರ ಬಿಟ್ಟು ಕೊಡಲೇಬೇಕೆಂದು ಜೆಡಿಎಸ್ ಹಠವೇಕೆ? ಕಾಂಗ್ರೆಸ್ ಈ 3 ಕ್ಷೇತ್ರ ಬಿಟ್ಟು ಕೊಡಲೇಬೇಕೆಂದು ಜೆಡಿಎಸ್ ಹಠವೇಕೆ?

ಹಾಲಿ ಕಾಂಗ್ರೆಸ್ ಸಂಸದರು ಪ್ರತಿನಿಧಿಸುತ್ತಿರುವ ಕ್ಷೇತ್ರಗಳನ್ನು ಬಿಟ್ಟುಕೊಡಲು ನಾಯಕರು ಸಿದ್ಧರಿಲ್ಲ. ಅವುಗಳನ್ನು ಬಿಟ್ಟು ಬೇರೆ ಕ್ಷೇತ್ರಗಳನ್ನು ಹಂಚಿಕೊಳ್ಳೋಣ ಎಂಬ ಪಕ್ಷದ ನಾಯಕರ ಅಭಿಪ್ರಾಯಕ್ಕೆ ಎರಡೂ ಪಕ್ಷಗಳಲ್ಲಿ ಒಪ್ಪಿಗೆ ಸಿಕ್ಕಿಲ್ಲ.

ಜೆಡಿಎಸ್‌ಗೆ 7 ಸೀಟು ಕೊಡಲು ಕಾಂಗ್ರೆಸ್ ತಂತ್ರ? ಸಿದ್ದು-ಗೌಡರ ಸಭೆಜೆಡಿಎಸ್‌ಗೆ 7 ಸೀಟು ಕೊಡಲು ಕಾಂಗ್ರೆಸ್ ತಂತ್ರ? ಸಿದ್ದು-ಗೌಡರ ಸಭೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸೀಟು ಹಂಚಿಕೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಹಂಚಿಕೆ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ.

ಸಂಪುಟ ವಿಸ್ತರಣೆ : ಮಾರ್ಚ್ ಮೊದಲ ವಾರದಲ್ಲೇ ಜೆಡಿಎಸ್ ನ 2 ಸ್ಥಾನ ಭರ್ತಿಸಂಪುಟ ವಿಸ್ತರಣೆ : ಮಾರ್ಚ್ ಮೊದಲ ವಾರದಲ್ಲೇ ಜೆಡಿಎಸ್ ನ 2 ಸ್ಥಾನ ಭರ್ತಿ

ಮಂಡ್ಯ ಕ್ಷೇತ್ರ ಬಿಟ್ಟುಕೊಡಲು ಕಾಂಗ್ರೆಸ್ ಸಿದ್ಧವಿದೆ. ಆದರೆ, ಮೈಸೂರು-ಕೊಡಗು ಬಿಟ್ಟುಕೊಡಲು ಸಿದ್ದರಾಮಯ್ಯ ಒಪ್ಪಿಗೆ ನೀಡುತ್ತಿಲ್ಲ. ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ.

ಯಾವ-ಯಾವ ಕ್ಷೇತ್ರಗಳು

ಯಾವ-ಯಾವ ಕ್ಷೇತ್ರಗಳು

ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಬೆಂಗಳೂರು ಉತ್ತರ, ಮೈಸೂರು-ಕೊಡಗು, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಇದರಿಂದಾಗಿ ಸೀಟು ಹಂಚಿಕೆ ಪ್ರಕ್ರಿಯೆ ಕಗ್ಗಂಟಾಗಿದೆ.

ಕಾಂಗ್ರೆಸ್ ಯಾವ ಕ್ಷೇತ್ರ ಕೊಡಲಿದೆ

ಕಾಂಗ್ರೆಸ್ ಯಾವ ಕ್ಷೇತ್ರ ಕೊಡಲಿದೆ

ಜೆಡಿಎಸ್ ಪ್ರತಿನಿಧಿಸುತ್ತಿರುವ ಮಂಡ್ಯ, ಹಾಸನ ಬಿಟ್ಟು ಕೊಡುತ್ತೇವೆ. ಶಿವಮೊಗ್ಗ ಮತ್ತು ವಿಜಯಪುರ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ ಎಂದು ಕಾಂಗ್ರೆಸ್ ಹೇಳಿದೆ. ಆದರೆ, ಮೈಸೂರು-ಕೊಡಗು, ಚಿಕ್ಕಬಳ್ಳಾಪುರ, ತುಮಕೂರು ಬಿಟ್ಟುಕೊಡಲು ಕಾಂಗ್ರೆಸ್ ಒಪ್ಪುತ್ತಿಲ್ಲ.

ಎಚ್.ವಿಶ್ವನಾಥ್ ಹೇಳುವುದೇನು?

ಎಚ್.ವಿಶ್ವನಾಥ್ ಹೇಳುವುದೇನು?

'ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸಬೇಕು ಎಂಬುದು ಪಕ್ಷದ ಕಾರ್ಯಕರ್ತರ ತೀವ್ರ ಒತ್ತಡವಾಗಿದೆ. ಮಂಡ್ಯ ಅಥವ ಬೇರೆ ಯಾವುದಾದದರೂ ಕ್ಷೇತ್ರದಿಂದ ಅವರು ಕಣಕ್ಕಿಳಿಯುವುದು ಖಚಿತ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

ದಿನೇಶ್ ಗುಂಡೂರಾವ್

ದಿನೇಶ್ ಗುಂಡೂರಾವ್

'ಮೈಸೂರು ಕ್ಷೇತ್ರ ಜೆಡಿಎಸ್‌ಗೆ ಎನ್ನುವುದು ಇನ್ನೂ ನಿಗದಿಯಾಗಿಲ್ಲ. ಸ್ಥಳೀಯ ಮುಖಂಡರು ಏನು ಬೇಕಾದರೂ ಹೇಳಿಕೊಳ್ಳಬಹುದು. ವರಿಷ್ಠರು ತೀರ್ಮಾನಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

English summary
Congress and JD(S) yet to final seat sharing for 2019 Lok Sabha Elections. JD(S) demanding for 12 seat. Congress not approved for sharing of the seat where party candidates won in 2014 elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X