ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇನ್ಮುಂದೆ ಬಸ್ ಚಾಲಕರಿಗೂ ಸೀಟ್‌ಬೆಲ್ಟ್ ಕಡ್ಡಾಯ, ಇಲ್ದಿದ್ರೆ ಬೀಳುತ್ತೆ ದಂಡ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18: ಇನ್ಮುಂದೆ ಬಸ್‌ ಚಾಲಕರಿಗೂ ಸೀಟ್‌ಬೆಲ್ಟ್ ಕಡ್ಡಾಯವಾಗಿದ್ದು, ನಿಯಮ ಪಾಲಿಸದಿದ್ದರೆ 1 ಸಾವಿರ ರೂ ದಂಡ ಬೀಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಷ್ಟು ದಿನ ಸೀಟ್‌ಬೆಲ್ಟ್ ಕೇವಲ ಕಾರು ಚಾಲಕರಿಗೆ ಮಾತ್ರ ಎಂದುಕೊಂಡಿದ್ದರೆ ಅದು ತಪ್ಪು, ಇನ್ನುಮುಂದೆ ಬಸ್ ಚಾಲಕರೂ ಕೂಡ ಸೀಟ್ ಬೆಲ್ಟ್ ಕಡ್ಡಾಯವಾಗಿ ಧರಿಸಲೇ ಬೇಕಿದೆ.

8 ದಿನದಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಗ್ರಹಿಸಿದ ದಂಡವೆಷ್ಟು?8 ದಿನದಲ್ಲಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸಂಗ್ರಹಿಸಿದ ದಂಡವೆಷ್ಟು?

ಬಿಎಂಟಿಸಿ, ಕೆಎಸ್​ಆರ್​ಟಿಸಿ ಸೇರಿ ಸಾರಿಗೆ ನಿಗಮಗಳ ಚಾಲಕರು ಇನ್ನುಮುಂದೆ ಸೀಟ್ ಬೆಲ್ಟ್ ಹಾಕದೆ ಬಸ್ಸನ್ನು ಚಲಾಯಿಸುವಂತಿಲ್ಲ. ಹಾಗೇನಾದರೂ ಮಾಡಿದರೆ 1 ಸಾವಿರ ದಂಡ ಕಟ್ಟಬೇಕಾಗುತ್ತದೆ. ಇಂಥದ್ದೊಂದು ನಿಯಮವನ್ನು ಕಡ್ಡಾಯಗೊಳಿಸಲಿಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ.

Seatbelt Is Also Mandatory For Bus Drivers

ಈ ಕುರಿತು ಮೋಟಾರು ವಾಹನ ತಿದ್ದುಪಡಿ ಕಾಯ್ದೆಯಲ್ಲೇ ಉಲ್ಲೇಖಿಸಲಾಗಿದೆ. ಇದನ್ನು ಅನುಷ್ಠಾನಗೊಳಿಸಲು ಸಾರಿಗೆ ಇಲಾಖೆ ಮುಂದಾಗಿದೆ. ಇದರ ಬೆನ್ನಲ್ಲೇ ವಾಹನ ಸವಾರರು ನಿರೀಕ್ಷಿಸುತ್ತಿರುವ ದಂಡ ಪ್ರಹಾರದಲ್ಲಿನ ಕಡಿತಕ್ಕೂ ಕ್ಷಣಗಣನೆ ಆರಂಭವಾಗಿದೆ.

ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವ ಉದ್ದೇಶದಲ್ಲಿ ಮೋಟಾರು ವಾಹನ‌ಕಾಯ್ದೆಯಲ್ಲಿ ಸೀಟ್ ಬೆಲ್ಟ್ ಕಡ್ಡಾಯಗೊಳಿಸಲಾಗಿದೆ. ಸಾರಿಗೆ ಇಲಾಖೆ ಕಡ್ಡಾಯಗೊಳಿಸುವ ತೀರ್ಮಾನವನ್ನು ಬಸ್​ ಚಾಲಕರು ಸ್ವಾಗತಿಸಿದ್ದಾರೆ.

ದುಬಾರಿ ದಂಡ: ವಾಹನ ಸವಾರರಿಗೆ ಕೊಂಚ ಸಮಾಧಾನ ನೀಡಿದ ಕೇಂದ್ರ ಸರ್ಕಾರದುಬಾರಿ ದಂಡ: ವಾಹನ ಸವಾರರಿಗೆ ಕೊಂಚ ಸಮಾಧಾನ ನೀಡಿದ ಕೇಂದ್ರ ಸರ್ಕಾರ

ದುಬಾರಿ ದಂಡ ಪ್ರಯೋಗಕ್ಕೆ ಬ್ರೇಕ್ ಹಾಕುವ ಸರ್ಕಾರದ ಆದೇಶದ ಹಿನ್ನಲೆಯಲ್ಲಿ ಸಾರಿಗೆ ಇಲಾಖೆ ಪರಿಷ್ಕ್ರತ ದರದ ವರದಿಯನ್ನು ಸರ್ಕಾರಕ್ಕೆ ರವಾನಿಸಿದೆ.

English summary
There is information that a seatbelt is mandatory for bus drivers as well as a fine of Rs.1 Thousand.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X