ಸರ್ಕಾರಿ ಶಾಲೆ ಮಕ್ಕಳ ಸಮವಸ್ತ್ರಕ್ಕೆ ಕೊಕ್ಕೆ ಹಾಕಿದ ಸರ್ಕಾರ

ಬೆಂಗಳೂರು, ಸೆಪ್ಟೆಂಬರ್ 27: ಸರ್ಕಾರಿ ಶಾಲಾ ಮಕ್ಕಳಿಗೆ ವರ್ಷಕ್ಕೆ ಎರಡು ಬಾರಿ ಸಮವಸ್ತ್ರ ನೀಡಲಾಗುತ್ತಿತ್ತು. ಆದರೆ ಇದನ್ನು ಒಂದು ಬಾರಿ ಮಾತ್ರ ನೀಡಲಾಗುವುದು ಎಂದು ಹೊಸ ಶಿಕ್ಷಣ ಸಚಿವರು ಆದೇಶ ಹೊರಡಿಸಿದ್ದಾರೆ.

Recommended Video

      ವಿದ್ಯಾರ್ಥಿಗಳು ಹಾಗೂ ಪಾಲಕರಲ್ಲಿ ಆತಂಕ ಮೂಡಿಸಿದ ಸಚಿವ ಸುರೇಶ ಕುಮಾರ್ | Oneindia Kannada

      ಸರ್ಕಾರಿ ಶಾಲೆಯ ಪ್ರಾಥಮಿಕ, ಪ್ರೌಢಶಾಲಾ ಮಕ್ಕಳಿಗೆ ಎರಡನೇ ಜೊತೆ ಸಮವಸ್ತ್ರವನ್ನು ನೀಡಲಾಗುವುದಿಲ್ಲ, ಕೇವಲ ಒಂದು ಜೊತೆ ಸಮವಸ್ತ್ರವನ್ನು ಮಾತ್ರವೇ ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

      ಕೇಂದ್ರ ಸರ್ಕಾರವು ಸರ್ವ ಶಿಕ್ಷಣ ಅಭಿಯಾನದ ಅಡಿಯಲ್ಲಿ ನೀಡುವ ಅನುದಾನದಲ್ಲಿ ಕಡಿತಗೊಳಿಸುವ ಕಾರಣ ಎರಡನೇ ಪ್ರತಿ ಸಮವಸ್ತ್ರವನ್ನು ನೀಡಲಾಗುತ್ತಿಲ್ಲವೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

      Second Pair Of Uniform Will Not Given To Government School Students

      ಈ ವರ್ಷ ಮಾತ್ರವೇ ಈ ನಿರ್ಣಯ ಕೈಗೊಳ್ಳಲಾಗಿದ್ದು, ಮುಂದಿನ ವರ್ಷ ಎರಡನೇ ಪ್ರತಿ ಸಮವಸ್ತ್ರ ನೀಡುತ್ತೇವೆ ಎಂದು ಸಚಿವರು ಹೇಳಿದ್ದಾರೆ. ಕಳೆದ ಮೂರು ವರ್ಷಗಳಿಂದ ವರ್ಷಕ್ಕೆ ಎರಡು ಜೊತೆ ಸಮವಸ್ತ್ರವನ್ನು ಪಡೆಯುತ್ತಿದ್ದ ಸರ್ಕಾರಿ ಶಾಲೆ ಮಕ್ಕಳು ಈ ಬಾರಿ ಒಂದೇ ಜೊತೆ ಸಮವಸ್ತ್ರ ಪಡೆಯಲಿದ್ದಾರೆ.

      ಮೈತ್ರಿ ಸರ್ಕಾರದ ಅವಧಿಯಲ್ಲಿ ರಾಜ್ಯ ಸರ್ಕಾರದ ಹಣವನ್ನೇ ಬಳಸಿ ಎರಡನೇ ಜೊತೆ ಸಮವಸ್ತ್ರ ನೀಡಲು ಸಿಎಂ ಕುಮಾರಸ್ವಾಮಿ ಆದೇಶ ನೀಡಿದ್ದರು. ಆದರೆ ಬಿಜೆಪಿ ಆಡಳಿತದಲ್ಲಿ ಈ ಆದೇಶವನ್ನು ಕಡೆಗಣಿಸಿ ಸಮವಸ್ತ್ರಕ್ಕೆ ಕೊಕ್ಕೆ ಹಾಕಲಾಗಿದೆ.

      ಮಕ್ಕಳ ಸಮವಸ್ತ್ರಕ್ಕೆ ಕೊಕ್ಕೆ ಹಾಕಿರುವ ಶಿಕ್ಷಣ ಸಚಿವರ ಕ್ರಮಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+