ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇ 15ರೊಳಗೆ ಎಸ್ಎಸ್ಎಲ್ ಸಿ, ಪಿಯುಸಿ ಫಲಿತಾಂಶ

|
Google Oneindia Kannada News

Exam Results
ಬೆಂಗಳೂರು, ಏ. 29 : ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುವ ಮೊದಲು ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ. ಮೇ.15ರಂದು ಎಸ್ಎಸ್ಎಲ್ ಸಿ ಮತ್ತು ಮೇ 5ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿದುಬಂದಿದೆ.

ಎಸ್ಎಸ್ಎಸ್ ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಏ.30ರಂದು ಪೂರ್ಣಗೊಳ್ಳಲಿದ್ದು, ಮೇ 15ರಂದು ಫಲಿತಾಂಶ ಪ್ರಕಟಿಸಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಯಾರಿ ಆರಂಭಿಸಿದೆ. ವಿಜ್ಞಾನದ ವಿಷಯದ ಕೆಲ ಪ್ರಶ್ನೆಗಳಲ್ಲಿ ದೋಷವಿದ್ದ ಕಾರಣ ಆ ಪ್ರಶ್ನೆಗಳಿಗೆ ಸೀಮಿತವಾಗಿ ಕೃಪಾಂಕ ನೀಡಲು, ಮೌಲ್ಯಮಾಪಕರಿಗೆ ಸೂಚನೆ ನೀಡಲಾಗಿದೆ.

2014ನೇ ಸಾಲಿನಲ್ಲಿ 8,26,269 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದಾರೆ. ಇವರಲ್ಲಿ 4,11,007 ಬಾಲಕರು ಮತ್ತು 3,73,292 ಬಾಲಕಿಯರಿದ್ದು ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.

ಮೇ 5ರೊಳಗೆ ಪಿಯು ಫಲಿತಾಂಶ : ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ. ಮೇ 5ರ ಒಳಗೆ ಫಲಿತಾಂಶ ಪ್ರಕಟಿಸಲು ಸಿದ್ಧತೆ ನಡೆಸಲಾಗುತ್ತಿದೆ. ಮೇ 1, 2ರಂದು ಸಿಇಟಿ ಪರೀಕ್ಷೆ ನಡೆಯಲಿದ್ದು, ನಂತರ ಫಲಿತಾಂಶ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

2014ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಟ್ಟು 6,15,770 ಮಂದಿ ವಿದ್ಯಾರ್ಥಿಗಳು ಬರೆದಿದ್ದಾರೆ. ಇವರಲ್ಲಿ 4,81,885 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆ ಬರೆದಿದ್ದರೆ, 97,981 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ.

ನಾವು ಫಲಿತಾಂಶ ನೀಡುತ್ತೇವೆ : ಒನ್ ಇಂಡಿಯಾ ಕನ್ನಡ ಪ್ರತಿ ವರ್ಷದಂತೆ ಈ ವರ್ಷವೂ ಎಸ್ಎಸ್ಎಲ್ ಸಿ ಮತ್ತು ಪಿಯೂಸಿ ಪರೀಕ್ಷೆ ಫಲಿತಾಂಶಗಳನ್ನು ವಿದ್ಯಾರ್ಥಿಗಳಿಗೆ ನೀಡಲಿದೆ. ಫಲಿತಾಂಶದ ನಿರೀಕ್ಷೆಯಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಒನ್ ಇಂಡಿಯಾ ಕನ್ನಡದ ಕಡೆಯಿಂದ ಆಲ್ ದಿ ಬೆಸ್ಟ್.

English summary
Karnataka 2nd PUC and SSLC examination 2014 results will be announced in May. Before May 5 2nd PUC and May 15 SSLC result may announced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X