Karnataka 2nd PU Exam 2023 : ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಶಿಕ್ಷಣ ಸಚಿವ ಬಿಸಿ ನಾಗೇಶ್
ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಬೆಂಗಳೂರು, ಮಾರ್ಚ್ 08: ಮಾರ್ಚ್ 9ರ ಗುರುವಾರ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ಎಕ್ಸಾಂ ನಡೆಯಲಿದ್ದು, ಶಿಕ್ಷಣ ಸಚಿವ ಬಿಸಿ ನಾಗೇಶ್ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ್ದಾರೆ.
"ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು" ಎಂದು ಸಚಿವ ಬಿಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ.

ಮಾರ್ಚ್ 9 ರಿಂದ ರಾಜ್ಯದ 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
— B.C Nagesh (@BCNagesh_bjp) March 8, 2023
ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆಯಿಂದ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಶುಭಾಶಯಗಳು. @BSBommai
ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7.27 ಲಕ್ಷ ಮಂದಿ ವಿದ್ಯಾರ್ಥಿಗಳು ಸಜ್ಜಾಗಿದ್ದಾರೆ. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,260 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 2,44,120 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಒಟ್ಟು 5,716 ಕಾಲೇಜುಗಳ ವಿದ್ಯಾರ್ಥಿಗಳಿ ಪರೀಕ್ಷೆ ಎದುರಿಸಲಿದ್ದಾರೆ. ಒಟ್ಟು 1,109 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಹೇರಲಾಗಿದೆ. 1,109 ಸಹ ಮುಖ್ಯ ಅಧೀಕ್ಷಕರು, 64 ಜಿಲ್ಲಾ ಜಾಗೃತ ದಳ, 525 ತಾಲ್ಲೂಕು ಜಾಗೃತ ದಳ, 2,373 ವಿಷೇಷ ಜಾಗೃತ ದಳ ನಿಯೊಜನೆ ಮಾಡಲಾಗುತ್ತದೆ. ನಾಳೆ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಹಿಂದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಡಸ್‌ಆರ್‌ಟಿಸಿ) ಪರೀಕ್ಷಾ ದಿನದಂದು ರಾಜ್ಯದಲ್ಲಿನ ವಿದ್ಯಾರ್ಥಿಗಳು ತಮ್ಮ ಸ್ಥಳದಿಂದ ಪರೀಕ್ಷಾ ಕ್ಷೇಂದ್ರಗಳಿಗೆ ಹಾಗೂ ಮರಳಿ ತಮ್ಮ ಮನೆಗಳಿಗೆ ತೆರಳಲು ಉಚಿತವಾಗಿ ಬಸ್ ಸೇವೆ ಪಡೆಯಬಹುದು ಎಂದು ಪ್ರಕಟಣೆ ಹೊರಡಿಸಿತ್ತು. ಇದೀಗ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೂಡ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ನೀಡುವುದಾಗಿ ತಿಳಿಸಿದೆ.
ಇನ್ನು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿಯೇ ಪರೀಕ್ಷೆ ಬರೆಯಬೇಕು. ಹಿಜಾಬ್ ಅನ್ನು ಸಮವಸ್ತ್ರವೆಂದು ಪರಿಗಣಿಸಲಾಗುವುದಿಲ್ಲ. ಪರೀಕ್ಷೆಗಾಗಿ ಹಿಜಾಬ್ ಧರಿಸಿದ ಯಾವುದೇ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಸಚಿವ ಬಿಸಿ ನಾಗೇಶ್ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications