ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 24 ಕೊನೆ ದಿನ

Posted By:
Subscribe to Oneindia Kannada

ಬೆಂಗಳೂರು, ಮೇ 11: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 24, 2017 ಕೊನೆ ದಿನವಾಗಿದೆ. ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವವರು ಪ್ರತಿ ವಿಷಯಕ್ಕೆ 1,260 ರುಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಅಂಕಗಳ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಮೇ 24 ಕೊನೆ ದಿನ.

ಆದರೆ, ಮರು ಎಣಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಮರು ಎಣಿಕೆಯ ಫಲಿತಾಂಶವನ್ನು ಆಯಾ ದಿನವೇ ಇಂಟರ್ ನೆಟ್ ನಲ್ಲಿ ಪ್ರಕಟಿಸಲಾಗುವುದು. ಅನುತ್ತೀರ್ಣರಾದ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಜೂನ್ 23 ಕೊನೆ ದಿನ. ಪೂರಕ ಪರೀಕ್ಷೆಯು 2017ರ ಜೂನ್-ಜುಲೈನಲ್ಲಿ ನಡೆಸಲಾಗುತ್ತದೆ.

Second PUC result 2017: May 24th last date to apply for Revaluation

ಅನುತ್ತೀರ್ಣರಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಕಟ್ಟಲು ಪಾವತಿಸಬೇಕಾದ ಮೊತ್ತದ ವಿವರ ಇಂತಿದೆ. ಈ ಶುಲ್ಕ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ಒಂದು ವಿಷಯಕ್ಕೆ 101 ರುಪಾಯಿ, ಎರಡು ವಿಷಯಕ್ಕೆ 201, ಮೂರು ಮತ್ತು ಅದಕ್ಕಿಂತ ಹೆಚ್ಚಿನ ವಿಷಯಗಳಿಗೆ 302 ರುಪಾಯಿ ಪರೀಕ್ಷಾ ಶುಲ್ಕ ಪಾವತಿಸಬೇಕು.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಅರ್ಜಿ ಸಲ್ಲಿಸುವುದಕ್ಕೆ ಮೇ 19 ಕೊನೆ ದಿನ. ಪ್ರತಿ ವಿಷಯದ ಉತ್ತರ ಪತ್ರಿಕೆಗೆ 400 ರುಪಾಯಿ ಪಾವತಿಸಬೇಕಾಗುತ್ತದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
May 24th is last date to apply for Revaluation of 2nd PUC 2017 and other details are here.
Please Wait while comments are loading...