ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ ಟಿಸಿಯಲ್ಲಿ ಉಚಿತ ಪ್ರಯಾಣ ಮಾಡುವ ಅವಕಾಶ ಕಲ್ಪಿಸಲಾಗಿದೆ. ಹಾಲ್ ಟಿಕೆಟ್ ತೋರಿಸಿದರೆ ವಿದ್ಯಾರ್ಥಿ ವಾಸವಿರುವ ಸ್ಥಳದಿಂದ ಪರೀಕ್ಷಾ ಕೇಂದ್ರವರೆಗೆ ಉಚಿತ ಪ್ರಯಾಣ ಮಾಡಬಹುದು

|
Google Oneindia Kannada News

ಬೆಂಗಳೂರು, ಮಾರ್ಚ್ 10: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು, ಅವರ ಪೋಷಕರು, ಸಂಬಂಧಿಕರು ಅಥವಾ ಸ್ನೇಹಿತರು ಈ ಸುದ್ದಿಯನ್ನು ಕಡ್ಡಾಯವಾಗಿ ಓದಬೇಕು. ಕೆಎಸ್ ಆರ್ ಟಿಸಿಯಿಂದ ವಿದ್ಯಾರ್ಥಿಗಳಿಗೆ ಹೊಸ ಯೋಜನೆಯೊಂದನ್ನು ಘೋಷಿಸಲಾಗಿದೆ.

ಅದರ ಪ್ರಕಾರ, ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಉಚಿತವಾಗಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಪ್ರಯಾಣಿಸಬಹುದಾಗಿದೆ. ಹಾಗಂತ ಎಲ್ಲೆಂದರಲ್ಲೆ ಪ್ರಯಾಣಿಸಲು ಅವಕಾಶ ಇಲ್ಲ. ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿ ವಾಸವಿರುವ ಸ್ಥಳದಿಂದ ಪರೀಕ್ಷಾ ಕೇಂದ್ರ ಇರುವ ಸ್ಥಳದವರೆಗೂ ಉಚಿತವಾಗಿ ಸಂಚಾರ ಮಾಡಬಹುದು.[ಪರೀಕ್ಷೆಗೆ ತೆರಳುವ ಮುನ್ನ ಈ 15 ಅಂಶಗಳನ್ನು ಮರೆಯದಿರಿ]

KSRTC

ಈ ಬಗ್ಗೆ ಕೆಎಸ್ ಆರ್ ಟಿಸಿ ಡಿಸಿ ಉಮಾಶಂಕರ್ ಅವರು ಮಾಧ್ಯಮವೊಂದಕ್ಕೆ ಮಾಹಿತಿ ನೀಡಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಸಂಚಾರ ಮಾಡಬಹುದು. ರಾಜ್ಯದಾದ್ಯಂತ ಇರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಇದರ ಅನುಕೂಲ ಪಡೆಯಬಹುದು. ಸರಕಾರಿ ಬಸ್ ನಲ್ಲಿ ಈ ರೀತಿ ಅನುಕೂಲ ಮಾಡುತ್ತಿರುವುದು ಪ್ರಾಯಶಃ ಇದೇ ಮೊದಲು. ಇದನ್ನು ಯಾವ ಭಾಗ್ಯ ಎನ್ನೋಣ?

English summary
Second PUC students no need to buy tickets in KSRTC bus across Karnataka. From there home to examination centre students can travel in KSRTC bus at free of cost by showing examination hall ticket, said by KSRTC DC Umashankar at Bengaluru on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X