ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Karnataka 2nd PUC Supplementary result : ಪೂರಕ ಪರೀಕ್ಷೆ ಫಲಿತಾಂಶ ಸೆ.12ರಂದು ಪ್ರಕಟ

|
Google Oneindia Kannada News

ಬೆಂಗಳೂರು ಸೆಪ್ಟಂಬರ್ 08: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು ಅಂದು ಬೆಳಗ್ಗೆ 11ಗಂಟೆ ನಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಗುರುವಾರ ಟ್ವೀಟ್ ಮೂಲಕ ಅವರು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವು ಸೆಪ್ಟೆಂಬರ್ 12ರಂದು ಪ್ರಕಟಿಸಲಾಗುವುದು ಎಂದು ಖಚಿತಪಡಿಸಿದ್ದಾರೆ. ವಿದ್ಯಾರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ತಮ್ಮ ಫಲಿತಾಂಶ ನೋಡಬಹುದು ಎಂದರು.

ಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ ಆರಂಭ: ಸಂಪೂರ್ಣ ವೇಳಾಪಟ್ಟಿಇಂದಿನಿಂದ ಪಿಯುಸಿ ಪೂರಕ ಪರೀಕ್ಷೆ ಆರಂಭ: ಸಂಪೂರ್ಣ ವೇಳಾಪಟ್ಟಿ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಕಳೆದ ತಿಂಗಳು ಆಗಸ್ಟ್ 12ರಿಂದ 25 ರವರೆಗೆ ಎರಡು ಅವಧಿಗಳಲ್ಲಿ ನಡೆಸಲಾಗಿತ್ತು. ಬೆಳಗಿನ 10.15ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ಮೊದಲ ಅವಧಿ ಹಾಗೂ ನಂತರ ಮಧ್ಯಾಹ್ನ 2.15 ರಿಂದ ಸಂಜೆ 5:30 ಗಂಟೆವರೆಗೆ ವರೆಗೆ ಎರಡನೇ ಅವಧಿಯಲ್ಲಿ ಪರೀಕ್ಷೆಗಳು ಜರುಗಿದ್ದವು.

Second PUC Supplementary Exam Result 2021-22 on 12th September

ಸೆಪ್ಟಂಬರ್ 12ರಂದು ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ (karresults.nic.in) ಗೆ ವೆಬ್‌ಸೈಟ್‌ಗೆ ಭೇಟಿ ನೀಡಿ. ಅಲ್ಲಿ ರಿಜಿಸ್ಟ್ರರ್ ನಂಬರ್ ಹಾಕಿ ವಿಷಯ ಆಯ್ಕೆ ಮಾಡಿಕೊಂಡು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡು ಮೂಲಕ ನಿಮ್ಮ ಫಲಿತಾಂಶ ನೋಡುಬಹುದು. ಡೌನ್‌ಲೋನ್‌ ಮಾಡಿಕೊಳ್ಳಲು ಸಹ ಅವಕಾಶ ಕಲ್ಪಿಸಲಾಗಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 6,83,563 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಎಂದು ತಿಳಿದು ಬಂದಿದೆ.

English summary
2021-22 Academic year Second PUC Supplementary Exam Result will be declared on 12th September, Education minister BC Nagesh said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X