ಕೋವಿಡ್ 2ನೇ ಅಲೆ; ಕರ್ನಾಟಕ ಸರ್ಕಾರದ ಮಾರ್ಗಸೂಚಿ
ಬೆಂಗಳೂರು, ಏಪ್ರಿಲ್ 02; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ಹಡುವಿಕೆ ತಡೆಗಟ್ಟಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರ ಈ ಕುರಿತ ಮಾರ್ಗಸೂಚಿಯನ್ನು ಪ್ರಕಟಿಸಿದೆ.
ಶುಕ್ರವಾರ ಸಂಜೆ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 20ರ ತನಕ ಈ ಮಾರ್ಗಸೂಚಿ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ.
ಕೊರೊನಾ 2ನೇ ಅಲೆ, ರಾಜ್ಯದಲ್ಲಿ ಲಾಕ್ಡೌನ್, ನೈಟ್ ಕರ್ಫ್ಯೂ ಇಲ್ಲ: ರವಿಕುಮಾರ್
ಕೋವಿಡ್ ಪ್ರಕರಣಗಳು ಹೆಚ್ಚಿರುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೀದರ್, ಮೈಸೂರು, ಉಡುಪಿ ಮುಂತಾದ ಜಿಲ್ಲೆಗಳಿಗೆ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿದೆ.
ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳು ಹೆಚ್ಚುತ್ತಿವೆ, ಆದರೆ 2ನೇ ಅಲೆ ಎನ್ನಲಾಗದು: ರವಿಕುಮಾರ್
ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ತರಗತಿಗಳಲ್ಲಿ ಮಂಡಳಿಯ/ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.
ಕೋವಿಡ್ 2ನೇ ಅಲೆ; ರಾಮನಗರ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ

ಮಾರ್ಗಸೂಚಿಯ ಅಂಶಗಳು
* 6 ರಿಂದ 9ನೇ ತರಗತಿ, ವಿದ್ಯಾಗಮ ಸ್ಥಗಿತ. 10, 11 ಮತ್ತು 12ನೇ ತರಗತಿ ಮುಂದುವರಿಕೆ. ತರಗತಿಯಲ್ಲಿ ಖುದ್ದು ಹಾಜರಾತಿ ಕಡ್ಡಾಯವಲ್ಲ.
* ವಸತಿ ಶಾಲೆಗಳು ಹಾಗೂ ಬೋರ್ಡಿಂಗ್ ಇರುವ ಶಾಲೆಗಳಲ್ಲಿ 10, 11 ಹಾಗೂ 12ನೇ ತರಗತಿ ಬೋರ್ಡ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳ ವಿಶ್ವವಿದ್ಯಾಲಯಗಳ ಪರೀಕ್ಷೆ ಬರೆಯುವವರು ಮತ್ತು ವೈದ್ಯಕೀಯ ಶಿಕ್ಷಣದ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.
* ಜಿಮ್, ಸ್ವಿಮ್ಮಿಂಗ್ ಪೂಲ್ ಮುಚ್ಚಲು ಆದೇಶ. ಯಾವುದೇ ಕಾರಣಕ್ಕೂ ಪ್ರತಿಭಟನೆ, ಜಾಥಗಳಿಗೆ ಅವಕಾಶವಿಲ್ಲ. ದೇವಾಲಯ, ಪ್ರಾರ್ಥನಾ ಮಂದಿರಕ್ಕೆ ಜನರು ಭೇಟಿ ನೀಡಲು ಅವಕಾಶ. ಆದರೆ, ಗುಂಪು ಸೇರುವ ಕಾರ್ಯಕ್ರಮ ಮಾಡುವಂತಿಲ್ಲ.

ಚಿತ್ರಮಂದಿರಗಳಿಗೆ ನಿಯಮ
* ಅಪಾರ್ಟ್‌ಮೆಂಟ್‌ಗಳಲ್ಲಿ ಜಿಮ್, ಪಾರ್ಟಿ ಹಾಲ್, ಕ್ಲಬ್, ಸ್ವಿಮ್ಮಿಂಗ್ ಫುಲ್ ಮುಚ್ಚಲು ಆದೇಶ
* ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆಯು ನಿಗದಿಪಡಿಸಿದ ಆಸನದ ಸಂಖ್ಯೆಗಳನ್ನು ಮೀರುವಂತಿಲ್ಲ.
* ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿಯಲ್ಲಿ ಚಿತ್ರಮಂದಿರದಲ್ಲಿ ಶೇ 50ರಷ್ಟು ಸೀಟು ಭರ್ತಿ. ಒಂದ್ ಬಿಟ್ಟು ಒಂದು (ಪರ್ಯಾಯ ಆಸನದಲ್ಲಿ ಕೂರಬೇಕು) ಮೈಸೂರು, ಕಲಬುರಗಿ ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಧಾರವಾಡಕ್ಕೂ ಇದು ಅನ್ವಯ

ಪಬ್, ಬಾರ್, ಕ್ಲಬ್‌ಗಳು
* ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಿಬಿಎಂಪಿ ವ್ಯಾಪ್ತಿ, ಮೈಸೂರು, ಕಲಬುರಗಿ, ದಕ್ಷಿಣ ಕನ್ನಡ, ಉಡುಪಿ, ಬೀದರ್ ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಪಬ್, ಬಾರ್, ಕ್ಲಬ್, ರೆಸ್ಟೋರೆಂಟ್‌ನಲ್ಲಿ ಶೇ 50ರಷ್ಟು ಜನರು ಸೇರಲು ಅವಕಾಶ
* ಬಾರ್, ಪಬ್, ಕ್ಲಬ್, ರೆಸ್ಟೋರೆಂಟ್‌ಗಳಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ನಿಯಮ ಉಲ್ಲಂಘನೆಯಾದರೆ ಕೋವಿಡ್ ಪರಿಸ್ಥಿತಿ ಮುಗಿಯುವ ತನಕ ಬಂದ್ ಮಾಡುವ ಎಚ್ಚರಿಕೆ

ಮಾಸ್ಕ್ ಧರಿಸುವುದು ಕಡ್ಡಾಯ
* ಶಾಪಿಂಗ್ ಮಾಲ್, ಡಿಪಾರ್ಟ್‌ಮೆಂಟ್ ಸ್ಟೋರ್ ಸೇರಿದಂತೆ ಇತರ ಕಡೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯ. ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯ. ನಿಯಮ ಉಲ್ಲಂಘನೆಯಾದರೆ ಕೋವಿಡ್ ಪರಿಸ್ಥಿತಿ ಮುಗಿಯುವ ತನಕ ಬಂದ್
* ಜಾತ್ರೆ/ ಧಾರ್ಮಿಕ ಕಾರ್ಯಕ್ರಮ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳಿಗೆ ಜನಸಂದಣಿ ಸೇರುವಂತಿಲ್ಲ. ಸಾರ್ವಜನಿಕ ಪ್ರದೇಶದಲ್ಲಿ, ವಾಹನ ಚಾಲನೆ ಮಾಡುವಾಗ ಮಾಸ್ಕ್ ಧರಿಸುವುದು ಕಡ್ಡಾಯ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದನ್ನು ಪೊಲೀಸ್, ಸ್ಥಳೀಯ ಸಂಸ್ಥೆಗಳು ಗಮನಿಸಬೇಕು