Get Updates
Get notified of breaking news, exclusive insights, and must-see stories!

ಎರಡನೇ ಪತ್ನಿಗೆ ಪಿಂಚಣಿ ಅಧಿಕಾರವಿಲ್ಲ; ಹೈಕೋರ್ಟ್ ಆದೇಶ

ಬೆಂಗಳೂರು, ನವೆಂಬರ್ 26: ಮೊದಲ ಪತ್ನಿ ಬದುಕಿದ್ದಾಗಲೇ ಎರಡನೇ ಪತ್ನಿಗೆ ಪಿಂಚಣಿ ಪಡೆಯುವ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 2ನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯನ್ಯಾಯಮೂರ್ತಿ ಪಿ. ಬಿ. ವರಲೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಮೊದಲನೇ ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹಾಗಾಗಿ ಎರಡನೇ ಪತ್ನಿಗೆ ಪಿಂಚಣಿಯ ಹಕ್ಕಿಲ್ಲ ಎಂದು ಹೈಕೋರ್ಟ್‌ ಆದೇಶದಲ್ಲಿ ತಿಳಿಸಿದೆ.

pension-to-second-wife

ಪ್ರಕರಣದ ಹಿನ್ನೆಲೆ ಏನು?: ನಂಜುಂಡಪ್ಪ ಎಂಬುವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಅವರ ಮೊದಲನೇ ಪತ್ನಿಗೆ ನಿಯಮದಂತೆ ಕೌಟುಂಬಿಕ ಪಿಂಚಣಿ ನೀಡಲಾಗುತ್ತಿತ್ತು. ಆದರೆ ಎರಡನೇ ಪತ್ನಿ ಅರ್ಜಿ ಸಲ್ಲಿಸಿ ತಾವು ಎರಡನೇ ಪತ್ನಿಯಾಗಿದ್ದರೂ ಕೌಟುಂಬಿಕ ಪಿಂಚಣಿ ಅರ್ಹರಾಗಿದ್ದು, ತಮಗೆ ಪಿಂಚಣಿ ನೀಡಬೇಕೆಂದು ಮನವಿ ಸಲ್ಲಿಸಿದ್ದರು.

ಆದರೆ ಇಲಾಖೆ ಅವರ ಮನವಿಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ ಏಕಸದಸ್ಯಪೀಠದ ಮೊರೆ ಹೋಗಿದ್ದರು. ಏಕಸದಸ್ಯಪೀಠವೂ ಸಹ ಆರ್‌ಡಿಪಿಆರ್‌ ಕ್ರಮವನ್ನು ಎತ್ತಿಹಿಡಿದು, ಪಿಂಚಣಿ ನೀಡಲು ಸಾಧ್ಯವಿಲ್ಲವೆಂದು ಆದೇಶಿಸಿತ್ತು. ಹಾಗಾಗಿ ಅರ್ಜಿದಾರರು ವಿಭಾಗೀಯಪೀಠದಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ದ್ವಿಪತ್ನಿತ್ವ ಅಪರಾಧ: ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, "ಕೌಟುಂಬಿಕ ಪಿಂಚಣಿಯನ್ನು ನಿಯಮದ ಪ್ರಕಾರ 'ಪತ್ನಿ'ಗೆ ನೀಡಲಾಗುವುದು. ಆದರೆ ಎರಡನೇ ಪತ್ನಿಯ ಮದುವೆ ಕಾನೂನಿನ ಕಣ್ಣಲ್ಲಿ ಮದುವೆಯೇ ಆಲ್ಲ. ಹಾಗಾಗಿ ಹಿಂದೂ ವಿವಾಹ ಕಾಯಿದೆ 1955ರ ಪ್ರಕಾರ ದ್ವಿಪತ್ನಿತ್ವ ಅಪರಾಧವಾಗುತ್ತದೆ" ಎಂದು ಆದೇಶಿಸಿದೆ. ಅರ್ಜಿದಾರರು ಕಾನೂನು ಬದ್ಧವಾಗಿ ಮದುವೆಯಾದ ಪತ್ನಿಯಲ್ಲ ಹಾಗಾಗಿ ಪಿಂಚಣಿ ನೀಡಲಾಗದು ಎಂದು ಆದೇಶ ನೀಡಿದೆ.

ಅಲ್ಲದೆ, "ಹಿಂದೂ ಧರ್ಮದಲ್ಲಿಏಕಪತ್ನಿತ್ವ ಚಾಲ್ತಿಯಲ್ಲಿದೆ, ಮೊದಲನೇ ಪತ್ನಿ ಜೀವಂತವಾಗಿರಬೇಕಾದರೆ ಎರಡನೇ ಮದುವೆಗೆ ಅವಕಾಶವೇ ಇಲ್ಲ. ಹಾಗಾಗಿ ಅರ್ಜಿದಾರರು ಏನೇ ವಾದ ಮಾಡಿದರೂ ಅದಕ್ಕೆ ಯಾವುದೇ ಕಾಯಿದೆಯ ಬೆಂಬಲ ಇರುವುದಿಲ್ಲ, ಅವರಿಗೆ ಪಿಂಚಣಿಯ ಅರ್ಹತೆ ಇರುವುದಿಲ್ಲ. ಹಾಗಾಗಿ ಮೃತ ಸರಕಾರಿ ನೌಕರರ ಜತೆಗೆ ಅರ್ಜಿದಾರರ ನಡುವೆ ಏರ್ಪಟ್ಟಿರುವ ಎರಡನೇ ಮದುವೆಗೆ ಕಾನೂನು ಬಾಹಿರವಾಗಿದ್ದು, ಅದಕ್ಕೆ ಯಾವುದೇ ಸಿಂಧುತ್ವವಿಲ್ಲ" ಎಂದು ಏಕಸದಸ್ಯ ಪೀಠದ ಆದೇಶದಲ್ಲಿ ಮಧ್ಯಪ್ರವೇಶ ಮಾಡಲು ನಿರಾಕರಿಸಿರುವ ವಿಭಾಗೀಯಪೀಠ ಹಿಂದೂ ವಿವಾಹ ಕಾಯಿದೆ ಸೆಕ್ಷನ್‌ 17ರ ಪ್ರಕಾರ ದ್ವಿಪತ್ನಿತ್ವ ಅಪರಾಧವಾಗಿದೆ ಎಂದು ಹೇಳಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮದ ಪ್ರಕಾರ ಸರಕಾರಿ ನೌಕರ ಕುಟುಂಬ ಅಂದರೆ ಕಾನೂನು ಬದ್ಧವಾಗಿ ವಿವಾಹವಾಗಿರುವ ಪತ್ನಿಗೆ ಕುಟುಂಬ ಪಿಂಚಣಿ ನೀಡಲಾಗುವುದು. ಕಾನೂನಿನಲ್ಲಿಎರಡನೇ ಮದುವೆಗೆ ಮಾನ್ಯತೆ ಇಲ್ಲದಿರುವ ಕಾರಣ ಪಿಂಚಣಿಗೂ ಅರ್ಹರಲ್ಲಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+