• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಮಮಂದಿರ ಭೂಮಿ ಪೂಜೆ; ದಾವಣಗೆರೆ, ಕಲಬುರಗಿಯಲ್ಲಿ ನಿಷೇಧಾಜ್ಞೆ ಜಾರಿ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಆಗಸ್ಟ್‌ 04; ಅಯೋಧ್ಯೆಯಲ್ಲಿ ನಾಳೆ ಶ್ರೀ ರಾಮ ಮಂದಿರದ ಭೂಮಿ ಪೂಜೆ ನಡೆಯುತ್ತಿರುವುದರಿಂದ ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ನಾಳೆ ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆ ಸೂಕ್ಷ್ಮ ಪ್ರದೇಶವಾದ್ದರಿಂದ ಯಾವುದೇ ಅವಘಡಗಳು ಜರುಗದಂತೆ ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವುದು, ದೇವರ ಫೋಟೋ, ಭಾವಚಿತ್ರಗಳನ್ನಿಟ್ಟು ಮೆರವಣಿಗೆ, ಬೈಕ್ ರ್ಯಾಲಿ, ಪಟಾಕಿ ಸಿಡಿಸುವುದು, ಸಾರ್ವಜನಿಕ ಸ್ಥಳಗಳಲ್ಲಿ ಎಲ್ ಇಡಿ ಅಳವಡಿಸುವುದನ್ನು ನಾಳೆ ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಅಯೋಧ್ಯೆ ರಾಮ ಮಂದಿರ ಭೂಮಿಪೂಜೆ: ಸೆಕ್ಷನ್ 144, ಕರ್ಫ್ಯೂ ಜಾರಿ

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವತಿಯಿಂದ ಅನುಮತಿ ಇಲ್ಲದೇ ಸಾರ್ವಜನಿಕ ಸ್ಥಳಗಳಲ್ಲಿ ಭಾವಚಿತ್ರ, ಬ್ಯಾನರ್, ಬಂಟಿಂಗ್ಸ್ ಹಾಕದಂತೆ ಮತ್ತು ಅನುಮತಿ ಇಲ್ಲದವನ್ನು ಕೂಡಲೇ ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಇಂದು ಮತ್ತು ನಾಳೆ ಜಿಲ್ಲೆಯಾದ್ಯಂತ ಎಲ್ಲಾ ಪಟಾಕಿ ಅಂಗಡಿಗಳು, ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಲಾಗಿದೆ ಎಂದು ಆದೇಶಿಸಿದ್ದಾರೆ.

ಕಲಬುರಗಿಯಲ್ಲೂ ನಿಷೇಧಾಜ್ಞೆ: ಕಲಬುರಗಿ ಜಿಲ್ಲೆಯಲ್ಲೂ ಸೆಕ್ಷನ್ 144 ಜಾರಿಗೊಳಿಸಿ ನಿಷೇಧಾಜ್ಞೆ ವಿಧಿಸಲಾಗಿದೆ. ಇಂದು ಮಧ್ಯಾಹ್ನ 3 ಗಂಟೆಯಿಂದ ಆಗಸ್ಟ್‌ 06ರ ಬೆಳಿಗ್ಗೆ 6 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.

English summary
144 section imposed in davanagere and kalaburagi district as ayodhya ram mandir bhoomi pooja tomorrow,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X