ಮಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 30ರ ತನಕ ನಿಷೇಧಾಜ್ಞೆ ಜಾರಿ
ಮಂಗಳೂರು, ಮೇ 28: ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿಪಿಕಪ್ ಚಾಲಕನ ಮೇಲೆ ಬೈಕ್‌ನಲ್ಲಿ ಆಗಮಿಸಿದ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆಗೈದು ಕೊಲೆಗೈದ ಘಟನೆ ಮಂಗಳವಾರ ಸಂಜೆ ನಡೆದಿದೆ. ಈ ಘಟನೆಯಲ್ಲಿ ಕೊಳತ್ತಮಜಲು ಬೆಳ್ಳೂರು ನಿವಾಸಿ ಅಬ್ದುಲ್ ರಹೀಂ (38) ಮೃತಪಟ್ಟ ವ್ಯಕ್ತಿ. ಪಿಕಪ್‌ನಲ್ಲಿಕಾರ್ಮಿಕನಾಗಿ ದುಡಿಯುತ್ತಿದ್ದ ಖಲಂದರ್ ಶಾಫಿ (24) ಗಂಭೀರ ಗಾಯಗೊಂಡವರು.
ಇರಾಕೋಡಿ ಎಂಬಲ್ಲಿ ಮನೆ ಹಾಗೂ ಶೌಚಾಲಯವೊಂದರ ಕೆಲಸ ನಡೆಯುತ್ತಿದ್ದು, ಆ ಮನೆಯವರು ಬೆಳಗ್ಗೆ ಅಬ್ದುಲ್ ರಹೀಂನಲ್ಲಿಮರಳು ಬೇಕೆಂದು ಕರೆ ಮಾಡಿ ಹೇಳಿದ್ದರು. ಅದರಂತೆ ರಹೀಂ ಮತ್ತು ಖಲಂದರ್ ಪಿಕಪ್‌ನಲ್ಲಿ ಮರಳು ಕೊಂಡೊಯ್ದು ಅನ್‌ಲೋಡ್ ಮಾಡುತ್ತಿದ್ದ ವೇಳೆ ಏಕಾಏಕಿ ಬೈಕ್‌ನಲ್ಲಿಆಗಮಿಸಿದ ಇಬ್ಬರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಬಂಟ್ವಾಳ ತಾಲೂಕಿನ ಕೊಳ್ತಮಜಲು ಸಮೀಪ ಅಬ್ದುಲ್ ರಹೀಮಾನ್ ರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆಗೈದ ಹಿನ್ನೆಲೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆ ನಡೆಯದಂತೆ ತಡೆಗಟ್ಟುವ ಉದ್ದೇಶಕ್ಕಾಗಿ ಮೇ 27 ಸಂಜೆ 6 ಗಂಟೆಯಿಂದ ಮೇ 30 ಸಂಜೆ 6 ಗಂಟೆ ತನಕ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಅನುಪಮ್ ಅಗ್ರವಾಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.












Click it and Unblock the Notifications