Government Employee: OPSಗೆ ಸರ್ಕಾರಿ ನೌಕರರ ಅರ್ಜಿ, ಮಹತ್ವದ ಮಾಹಿತಿ

ಬೆಂಗಳೂರು, ಜುಲೈ 09: ನೂತನ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು ಎಂಬುದು ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ಕೆಲವು ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆ (OPS) ವ್ಯಾಪ್ತಿಗೆ ಒಳಪಡಿಸುವ ಕುರಿತು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈಗ ಈ ಕುರಿತು ಪ್ರಮುಖ ಮಾಹಿತಿಯೊಂದನ್ನು ನೀಡಲಾಗಿದೆ.

ಈ ಕುರಿತು ಅರುಳ್ ಕುಮಾರ್, ಸರ್ಕಾರದ ಉಪ ಕಾರ್ಯದರ್ಶಿ, ಆರ್ಥಿಕ ಇಲಾಖೆ (ಆಡಳಿತ ಮತ್ತು ಸಮನ್ವಯ) ಟಿಪ್ಪಣಿ ಹೊರಡಿಸಿದ್ದಾರೆ. ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ ಪ್ರಧಾನ ಕಾರ್ಯದರ್ಶಿ/ ಕಾರ್ಯದರ್ಶಿಗಳಿಗೆ ಈ ಕುರಿತು ಮಾಹಿತಿ ಕೊಡಲಾಗಿದೆ.

old-pension

ಟಿಪ್ಪಣಿ ದಿನಾಂಕ 01/04/2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೆನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದ ಆದೇಶ ದಿನಾಂಕ 01/04/2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ 01/04/2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.

ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು: ಸದರಿ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ 30/06/2024 ಆಗಿರುತ್ತದೆ. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗದಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ 31/07/2024ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ತಮ್ಮ ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಮರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

ನಂತರ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ 31/08/2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ಹೇಳಿದೆ.

ಆದರೆ, ಪ್ರಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸ್ಸು ಮಾಡದೇ, ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸದೇ ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ.

ಆದ್ದರಿಂದ, ದಿನಾಂಕ 24/01/2024ರ ಆದೇಶದನ್ವಯ ಎನ್‌ಪಿಎಸ್‌ನಿಂದ ಒಪಿಎಸ್ ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ ನೌಕರರುಗಳ ಕ್ರೋಢೀಕೃತ ಪ್ರಸ್ತಾವನೆಗಳನ್ನು ಅಗತ್ಯ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ದಿನಾಂಕ 31/08/2024ರೊಳಗೆ ಸಲ್ಲಿಸುವಂತೆ ಕೋರಲಾಗಿದೆ ಎಂದು ಟಿಪ್ಪಣಿ ಹೇಳಿದೆ.

ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಮಾಹಿತಿಯಂತೆ ರಾಜ್ಯದಲ್ಲಿ 5,09,384 ಸರ್ಕಾರಿ ನೌಕರರು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಗೆ 2,41,260 ನೌಕರರು ಒಳಪಟ್ಟಿದ್ದಾರೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ 2,68,124 ನೌಕರರು ಒಳಪಟಿದ್ದಾರೆ. ಆದರೆ ಎಲ್ಲಾ ಸರ್ಕಾರಿ ನೌಕರರನ್ನು ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂಬುದು ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+