ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ವಯಂ ಘೋಷಿತ ಸಂವಿಧಾನ ಪಂಡಿತನಿಗೆ ಎಚ್‌ಡಿಕೆ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ಜನವರಿ 23; ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್. ಡಿ. ಕುಮಾರಸ್ವಾಮಿ ನಡುವೆ ಮಾತಿನ ಮಲ್ಲಯುದ್ಧ ಮುಂದುವರೆದಿದೆ. "ಸ್ವಯಂ ಘೋಷಿತ ಸಂವಿಧಾನ ಪಂಡಿತ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

ಭಾನುವಾರ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶನಿವಾರ ಆಡಿದ ಮಾತಿಗೆ ತಿರುಗೇಟು ನೀಡಿದ್ದಾರೆ. "ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ" ಎಂದು ತಿರುಗೇಟು ನೀಡಿದ್ದಾರೆ.

ಚಾಮುಂಡೇಶ್ವರಿಯಿಂದ ಓಡಿಸಿದ್ದಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಕುಮಾರಸ್ವಾಮಿಚಾಮುಂಡೇಶ್ವರಿಯಿಂದ ಓಡಿಸಿದ್ದಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಕುಮಾರಸ್ವಾಮಿ

"ಸ್ವಯಂ ಘೋಷಿತ ಸಂವಿಧಾನ ಪಂಡಿತ ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ" ಎಂದು ಟ್ವೀಟ್‌ ಮಾಡಿದ್ದಾರೆ ಕುಮಾರಸ್ವಾಮಿ.

ಕುಮಾರಸ್ವಾಮಿ ಮಗ್ಗಲು ಚೂರಿ ಇದ್ದಂತೆ: ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ ಆರೋಪಕುಮಾರಸ್ವಾಮಿ ಮಗ್ಗಲು ಚೂರಿ ಇದ್ದಂತೆ: ಮಾಜಿ ಶಾಸಕ ಎಚ್‌.ಸಿ. ಬಾಲಕೃಷ್ಣ ಆರೋಪ

"ಸುಖಾಸುಮ್ಮನೆ ಅವರ ಬಗ್ಗೆ ಮಾತನಾಡುವ ತೆವಲು ನಂಗಂತೂ ಇಲ್ಲ. ನಮ್ಮ ಪಕ್ಷದಿಂದ ಎಗರಿಸಿಕೊಂಡು ಹೋದ ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ನಮ್ಮ ಪಕ್ಷದ ಬಗ್ಗೆ ಏಕೆ ಮಾತನಾಡಬೇಕು? ಜೆಡಿಎಸ್ ಪಕ್ಷವನ್ನು ತುಮಕೂರಿನಿಂದ ಓಡಿಸಿ ಎಂದಿದ್ದು ಯಾವ ಸಂಸ್ಕೃತಿ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೇಕೆದಾಟು ಯೋಜನೆ; ಸರ್ಕಾರದ ಬದ್ಧತೆ ಪ್ರಶ್ನಿಸಿದ ಸಿದ್ದರಾಮಯ್ಯ! ಮೇಕೆದಾಟು ಯೋಜನೆ; ಸರ್ಕಾರದ ಬದ್ಧತೆ ಪ್ರಶ್ನಿಸಿದ ಸಿದ್ದರಾಮಯ್ಯ!

ಎಂಥ ರಾಜಕಾರಣ ಎಂದು ಪ್ರಶ್ನೆ?

ಎಂಥ ರಾಜಕಾರಣ ಎಂದು ಪ್ರಶ್ನೆ?

"ಪ್ರಜಾಪ್ರಭುತ್ವದಲ್ಲಿ ಒಂದು ಜಿಲ್ಲೆಯಿಂದಲೇ ಒಂದು ಪಕ್ಷವನ್ನು ಓಡಿಸಿ ಎನ್ನುವುದು ಎಂಥಾ ರಾಜಕಾರಣ?. ಲಂಗು ಲಗಾಮು ಇಲ್ಲದೆ ನಾಲಿಗೆ ಜಾರುವ ಇಂಥ ಜನರಿಂದ ನಾನು ಭಾಷೆ, ಸಂಸ್ಕೃತಿ ಬಗ್ಗೆ ಕಲಿಯಬೇಕಿಲ್ಲ. 'ಸುಳ್ಳಿನ ಸಿದ್ದಪುರುಷ'ನಿಂದ ಭಾಷೆ-ಸಂಸ್ಕೃತಿ ಕುರಿತು ಪಾಠವೇ?" ಎಂದು ಕುಮಾರಸ್ವಾಮಿ ಕೇಳಿದ್ದಾರೆ.

"ಕುಮಾರಸ್ವಾಮಿ ಬಗ್ಗೆ ಮಾತನಾಡಲ್ಲ ಅನ್ನುತ್ತಾರೆ. ಮಾತೆತ್ತಿದರೆ ಕುಮಾರಸ್ವಾಮಿಯದ್ದೇ ಜಪ! ಜತೆಗೆ ಜೆಡಿಎಸ್ ಬಗ್ಗೆ ವಿಷ ಕಾರುವುದು ಸುಳ್ಳಾ?. ಅವರ ಹೇಳಿಕೆಗಳನ್ನು ಇಡೀ ರಾಜ್ಯವೇ ಕೇಳಿಸಿಕೊಂಡಿದೆ." ಎಂದು ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇದು ಭ್ರಮೆಯ ಪರಮಾವಧಿ

ಇದು ಭ್ರಮೆಯ ಪರಮಾವಧಿ

"ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

"ತುಮಕೂರು ಜಿಲ್ಲೆಯಿಂದ ಓಡಿಸಿ, ಬಿಜೆಪಿಯ ಬಾಲಂಗೋಚಿ; ಇಂತಹ ನುಡಿಮುತ್ತುಗಳು 'ಸ್ವಯಂ ಘೋಷಿತ ಸಂವಿಧಾನ ಪಂಡಿತ'ನ ರಾಜಕೀಯ ಫಜೀತಿಯ ಪರಾಕಾಷ್ಠೆ. ಯಾರ ಭಯ ಯಾರಿಗಿದೆ ಎನ್ನುವುದಕ್ಕೆ ಇದೇ ಸಾಕ್ಷಿ?"ಎಂದು ಪ್ರಶ್ನೆ ಮಾಡಿದ್ದಾರೆ.

ಚುನಾವಣೆಯಲ್ಲಿ ಸೋತಿದ್ದಾರೆ

ಚುನಾವಣೆಯಲ್ಲಿ ಸೋತಿದ್ದಾರೆ

"ನಿಜ. ಚುನಾವಣೆಯಲ್ಲಿ ನಮ್ಮ ತಂದೆ ಸೋತಿದ್ದಾರೆ. ನನ್ನ ಅಣ್ಣ ಸೋತಿದ್ದಾರೆ, ನಾನೂ ಸೋತಿದ್ದೇನೆ. ಸೋತ ಮೇಲೆ ನಾವ್ಯಾರೂ ಅಧೀರರಾಗಿಲ್ಲ. ಸೋತಿದ್ದಕ್ಕೆ ನಾವು ಕಣ್ಣೀರು ಹಾಕಿಲ್ಲ. ಸಿದ್ದಹಸ್ತರ ಕಣ್ಣೀರ ಕೋಡಿಯನ್ನು ಕಂಡ ದೇವೇಗೌಡರು ಇನ್ನೂ ನಮ್ಮ ಜತೆ ಇದ್ದಾರೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸಿದ್ದಪುರುಷರ ಪಾಡೇನು?

"ಇನ್ನು ಕಮೀಷನ್ ವ್ಯವಹಾರದಲ್ಲಿ ನಾನು ನೀಟ್, ಕ್ಲೀನ್ ಎನ್ನುತ್ತಿದ್ದಾರೆ ಪ್ರತಿಪಕ್ಷ ನಾಯಕರು. ಐದು ವರ್ಷ ಸಿಎಂ ಆಗಿದ್ದರೂ ನಾನು ಕ್ಲೀನ್ ಎಂದು ಕೊಚ್ಚಿಕೊಳ್ಳುತ್ತಿದ್ದಾರೆ. ಹಾಗಾದರೆ, ಇವತ್ತಿಗೂ ಕೇಳಿಸುತ್ತಿರುವ ' ಅರ್ಕಾವತಿ ' ಆರ್ತನಾದಕ್ಕೆ ಕಾರಣರು ಯಾರು?" ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ

ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ

ಎಚ್. ಡಿ. ಕುಮಾರಸ್ವಾಮಿ ಶನಿವಾರ, "ಚಾಮುಂಡೇಶ್ವರಿಯಿಂದ ಓಡಿಸಿದ್ದಾಗಿದೆ. ಬಾದಾಮಿಯಿಂದ ಓಡಿಸುವುದು ಬಾಕಿ ಇದೆ" ಎಂದು ಸಿದ್ದರಾಮಯ್ಯ ವಿರುದ್ದ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ, "ಕುಮಾರಸ್ವಾಮಿ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ" ಎಂದು ಹೇಳಿಕೆ ನೀಡಿದ್ದರು.

"ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪು ಅಂತಿಮ. ನಾನು ರಾಜ್ಯ ಘಟಕದ ಅಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ದರು ಎಂದೇ ಗೊತ್ತಿಲ್ಲ. ನಾನೇಕೆ ಅವರ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಲಿ, ಕಣ್ಣೀರು ಹಾಕಲಿ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದರು.

English summary
Former chief minister H. D. Kumaraswamy tweet against opposition leader Siddaramaiah for his comment on JD(S) party. Kumaraswamy called Siddaramaiah as self styled law expert.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X