ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ನಿಧನ

|
Google Oneindia Kannada News

ಬೆಂಗಳೂರು, ಮೇ 19: ಹಿರಿಯ ಲೇಖಕ, ಸಮಾಜವಾದಿ ಚಿಂತಕ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಿ.ಎಸ್. ನಾಗಭೂಷಣ ಅವರು ಗುರುವಾರ ನಿಧನರಾಗಿದ್ದಾರೆ.

ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದ ನಾಗಭೂಷಣ ಅವರಿಗೆ 70 ವರ್ಷ ವಯಸ್ಸಾಗಿತ್ತು. ಮೃತರ ಅಂತ್ಯಕ್ರಿಯ ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ರೋಟರಿ ಚಿತಾಗಾರದಲ್ಲಿ ನಡೆಯಲಿದೆ. ಅವರಿಗೆ ಪತ್ನಿ, ಕವಯತ್ರಿ ಸವಿತಾ ನಾಗಭೂಷಣ್ ಇದ್ದಾರೆ.

Senior author ds nagabhushana passes away

ನೇರ ನಡೆ, ನುಡಿ, ನಿಷ್ಠುರ ವ್ಯಕ್ತಿ ತತ್ವದ ಡಿಎಸ್ ನಾಗಭೂಷಣ್ ಸಾರ್ವಜನಿಕ ಬದುಕಿನಲ್ಲಿ ತೋರಬೇಕಾದ ಬದ್ದತೆ, ಪ್ರಾಮಾಣಿಕತೆಗೆ ಮಾದರಿಯಾಗಿದ್ದರು. ಸಾಹಿತ್ಯ, ಸಂಸ್ಕೃತಿ, ಕಲೆ, ರಾಜಕೀಯದ ಕುರಿತು ಅಪಾರವಾದ ತಿಳವಳಿಕೆ, ಪಾಂಡಿತ್ಯ ಹೊಂದಿದ್ದ ನಾಗಭೂಷಣ್ ಸಮಕಾಲೀನ ವಿದ್ಯಮಾನಗಳಿಗೆ ಪ್ರತಿಕ್ರಿಯಿಸುತ್ತಿದ್ದ ರೀತಿ ವಿಶಿಷ್ಟವಾಗಿತ್ತು.

ಲೋಹಿಯಾರ ವಿಚಾರಧಾರೆಗಳಿಂದ ಪ್ರಭಾವಿತರಾಗಿದ್ದ ಅವರು ಈಚೀನ ವರ್ಷಗಳಲ್ಲಿ ಗಾಂಧೀವಾದದ ಕಡೆ ಹೆಚ್ಚು ಒಲವು ತೋರಿದ್ದರು.ಜಾಗತೀಕರಣ ತಂದಿರುವ ವಿಸ್ಮೃತಿಗಳನ್ನು ಎದುರಿಸಲು ಗಾಂಧೀ ಪ್ರತಿಪಾದಿಸಿದ ಸರಳ, ಸಭ್ಯ, ಕಡಿಮೆ ಅವಶ್ಯಕತೆಗಳ ಬದುಕು ನಮ್ಮದಾಗಬೇಕು ಎಂದು ಬಯಸಿದ್ದರು. ಪ್ರತಿವರ್ಷ ಅಕ್ಟೋಬರ್ ನಲ್ಲಿ ಲೋಹಿಯಾ ಪ್ರತಿಷ್ಠಾನದ ಮೂಲಕ ಕುಪ್ಪಳ್ಳಿಯಲ್ಲಿ ಅವರು ಆಯೋಜಿಸುತ್ತಿದ್ದ ಸಮಾಜವಾದಿ ಅಧ್ಯಯನ ಶಿಬಿರದ ಮೂಲಕ ಯುವಜನರಲ್ಲಿ ಗಾಂಧಿ, ಲೋಹಿಯಾ. ಅಂಬೇಡ್ಕರ್, ಜೆ.ಪಿ.ಚಿಂತನೆಯನ್ನು ತಲುಪಿಸಲು ಉತ್ಸುಕರಾಗಿದ್ದರು. ನಾಗಭೂಷಣ ಅವರ ಸಂಪಾದಕತ್ವದಲ್ಲಿ ಸಮಾಜವಾದಿ ಮಾಸಿಕ 'ಹೊಸ ಮನುಷ್ಯ'

ಪ್ರಕಟಗೊಳ್ಳುತ್ತಿತ್ತು.ಸಿದ್ದರಾಮಯ್ಯ ಸಂತಾಪ:
ನಮ್ಮ ನಡುವಿನ ಹಿರಿಯ ಲೇಖಕ, ಚಿಂತಕ, ಹೋರಾಟಗಾರ ಡಿ.ಎಸ್.ನಾಗಭೂಷಣ್ ಅವರ ನಿಧನಕ್ಕೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಶೋಕ ವ್ಯಕ್ತಪಡಿಸಿದ್ದಾರೆ.

ಅನ್ಯಾಯ,‌ ಅಸಮಾನತೆ ಮತ್ತು ಆತ್ಮವಂಚಕ ನಡವಳಿಕೆಗಳ ವಿರುದ್ಧದ ಹೋರಾಟಕ್ಕೆ, ಸಮಾಜವಾದಿ ಚಿಂತನೆಗಳನ್ನು ಅಸ್ತ್ರವಾಗಿ ಬಳಸುತ್ತಾ ಬಂದಿದ್ದ ಆತ್ಮೀಯರಾಗಿದ್ದ ಡಿ.ಎಸ್.ನಾಗಭೂಷಣ್ ಅವರ ಅಗಲಿಕೆಯಿಂದ ಆಘಾತಕ್ಕೀಡಾಗಿದ್ದೇನೆ. ಅವರ ಪತ್ನಿ‌ ಮತ್ತು ಗೆಳೆಯರೆಲ್ಲರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.

ಡಿ.ಎಸ್.ನಾಗಭೂಷಣ್ ಅವರ 'ಗಾಂಧಿ ಕಥನ' ವನ್ನು‌ ಪ್ರೀತಿಯಿಂದ ಕಳಿಸಿಕೊಟ್ಟಿದ್ದರು. ಅದನ್ನು ಓದುತ್ತಿದ್ದೇನೆ ಎಂದಾಗ ಖುಷಿಪಟ್ಟಿದ್ದರು.ಲೋಹಿಯಾ ಚಿಂತನೆಯ‌‌ ಪುಸ್ತಕಗಳೂ ಸೇರಿದಂತೆ ಅವರ ಎಲ್ಲ ಕೃತಿಗಳ ಮೂಲಕ ನಾಗಭೂಷಣ್ ನಮ್ಮ ನೆನಪಲ್ಲಿ‌ ಸದಾ ಹಸಿರಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Recommended Video

Heavy Rain in Karnataka: ಕರ್ನಾಟಕದಲ್ಲಿ ಭಾರೀ ಮಳೆ , ಶಾಲೆಗಳಿಗೆ ರಜೆ | Oneindia Kannada

English summary
Senior author, Socialist thinker, Kendra Sahitya Akademi Award winner DS Nagabhushana passes away on May 19th in Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X