ಸರ್ಕಾರಿ ಆಸ್ಪತ್ರೆಗಳಲ್ಲಿ ವೃದ್ಧರಿಗಾಗಿಯೇ ಪ್ರತ್ಯೇಕ ವಾರ್ಡ್!

ಬೆಂಗಳೂರು, ಫೆಬ್ರವರಿ 26: ಸರ್ಕಾರಿ ಆಸ್ಪತ್ರೆಗಳು ಅದರಲ್ಲಿಯೂ ಪ್ರಮುಖವಾಗಿ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ವೃದ್ಧರಿಗಾಗಿಯೇ ಪ್ರತ್ಯೇಕ ವಾರ್ಡ್ ತೆರೆಯಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ವೃದ್ಧರು ಸರತಿಯಲ್ಲಿ ಎಲ್ಲರಂತೆಯೇ ಚಿಕಿತ್ಸೆ ಪಡೆಯುವುದು ಒಂದೆಡೆಯಾದರೆ ತುರ್ತು ಸಂದರ್ಭದಲ್ಲಿ ಅವರಿಗೆ ಪ್ರತ್ಯೇಕ ಚಿಕಿತ್ಸೆಯ ಅಗತ್ಯವೂ ಇರುತ್ತದೆ. ಅನಾರೋಗ್ಯದಿಂದ ಬಳಲುತ್ತಿರುವ ವೃದ್ಧರಿಗೆ ಸುಲಭವಾಗಿ ಚಿಕಿತ್ಸೆ ದೊರಕಿಸಿಕೊಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿ ಕಾಯಿಲೆ ಸೇರಿ ಮುಪ್ಪಿನಲ್ಲಿ ಗಂಭೀರ ಸಮಸ್ಯೆ ಎದುರಿಸುವ ವಯೋವೃದ್ಧರು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳ ಬಾಗಿಲು ಕಾಯುವ ಪರಿಸ್ಥಿತಿ ಸದ್ಯಕ್ಕಿದೆ.

senior citizen patient will get seperate ward

ಈ ಯೋಜನೆಯನ್ವಯ ಜಿಲ್ಲಾ ಆಸ್ಪತ್ರೆಗಳಲ್ಲಿ 15 ಹಾಸಿಗೆವರೆಗಿನ ಪ್ರತ್ಯೇಕ ವಿಭಾಗ ನಿರ್ಮಾಣವಾಗಲಿದೆ. ತಾಲೂಕು ಆಸ್ಪತ್ರೆಗಳಲ್ಲೂ 10 ಬೆಡ್‌ವರೆಗಿನ ವಿಭಾಗ ಆರಂಭವಾಗುತ್ತಿದೆ. ಈ ವಿಭಾಗದಲ್ಲಿ 60 ವರ್ಷ ಮೇಲ್ಪಟ್ಟವರಿಗಷ್ಟೇ ಚಿಕಿತ್ಸೆ ನೀಡಲಾಗುತ್ತದೆ. ಈ ಸಾಲಿನಲ್ಲಿ 80 ಲಕ್ಷ ರೂ ಅನುದಾನ ಮೀಸಲಿಡಲಾಗಿದೆ.

ವಯೋವೃದ್ಧರಿಗೆ ಚಿಕಿತ್ಸಾ ವಿಭಾಗ ನಿರ್ಮಾಣ ಸಂಬಂಧ ಈಗಾಗಲೇ ರಾಜ್ಯದ ವಿವಿಧೆಡೆ ಸ್ಥಳ ಪರಿಶೀಲನೆ ಮಾಡಲಾಗುತ್ತಿದೆ. ಜಿಲ್ಲಾ, ತಾಲೂಕು ಆಸ್ಪತ್ರೆ ಆವರಣದಲ್ಲೇ ಸ್ಥಳಾವಕಾಶವಿದ್ದರೆ ಅಲ್ಲಿಯೇ ನಿರ್ಮಾಣ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+