ಸಿದ್ದರಾಮಯ್ಯನವರ ಸಮಸ್ಯೆ ಏನು: ಕಾಗೋಡು ತಿಮ್ಮಪ್ಪ ಬಿಡಿಸಿಟ್ಟ ರಹಸ್ಯ
ಬೆಂಗಳೂರು, ಜ 30: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ದ ಈ ಹಿಂದೆ, ಬಹಿರಂಗವಾಗಿಯೇ ಮಾಜಿ ಸಂಸದ, ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಚ್.ಮುನಿಯಪ್ಪ ಅಸಮಾಧಾನ ಹೊರಹಾಕಿದ್ದರು. ಇದು ದೊಡ್ಡ ಸುದ್ದಿಯಾಗಿತ್ತು.
ಈಗ ಮತ್ತೋರ್ವ ಹಿರಿಯ ಮುಖಂಡ, ಮಾಜಿ ಸ್ಪೀಕರ್ ಕೂಡಾ, ಸಿದ್ದರಾಮಯ್ಯ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ. "ಯಾರಿಗೂ ಅಹಂ ಒಳ್ಳೆಯದಲ್ಲ" ಎನ್ನುವ ಮಾತನ್ನು ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
"ಸಿದ್ದರಾಮಯ್ಯನವರೇನೂ ಎಲ್ಲಾ ಬೆಳೆದು ನಿಂತವರಲ್ಲ. ಚುನಾವಣೆಯಲ್ಲಿ ಗೆದ್ದು, ಅಧಿಕಾರವನ್ನು ಪಡೆದು, ಎಲ್ಲಾ ಸೌಭಾಗ್ಯವನ್ನು ಪಡೆದಂತವರು" ಎಂದು ಕಾಗೋಡು, ಸಿದ್ದರಾಮಯ್ಯನವರ ಬಗ್ಗೆ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

"ಪರಮೇಶ್ವರ್ ಅವರೇನೂ ಹಿಂದಿನಿಂದಲೂ ರಾಜಕೀಯದಲ್ಲಿ ಇದ್ರಾ" ಎಂದು ಪ್ರಶ್ನಿಸಿರುವ ಕಾಗೋಡು, "ಸಂಸ್ಥೆಗಳನ್ನು ಕಟ್ಟಿಕೊಂಡು ವ್ಯವಹಾರ ಮಾಡಿಕೊಂಡಿದ್ದಾರೆ" ಎಂದು ಕಾಗೋಡು ಹೇಳಿದ್ದಾರೆ.
"ಒಂದು ರಾಜಕೀಯ ಪಕ್ಷ ಅಧಿಕಾರದಲ್ಲಿ ಇಲ್ಲದೇ ಇರುವಂತಹ ಸಂದರ್ಭದಲ್ಲಿ, ಅವರ ದುರ್ಬಲತೆ ಎದ್ದು ಕಾಣುತ್ತಿರುವಾಗ ಹೆಚ್ಚು ಕೆಲಸ ಮಾಡಬೇಕಾದಂತಹ ಅವಶ್ಯಕತೆಯಿದೆ. ರಾಜಕೀಯ ನಾಯಕರಿಗೆ ಅಹಂ ಪ್ರವೃತ್ತಿ ಬೆಳೆದಿದೆ" ಎಂದು ಪರೋಕ್ಷವಾಗಿ, ಸಿದ್ದರಾಮಯ್ಯನವರ ಬಗ್ಗೆ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.
"ಎಲ್ಲರಿಂದಗಿಯೇ ಸಿದ್ದರಾಮಯ್ಯ ಅಧಿಕಾರ ಪಡೆದುಕೊಂಡಿದ್ದು. ನಾನೇ ಎನ್ನುವ ಪ್ರವೃತ್ತಿ ಬೆಳೆದರೆ ಅದು ಒಳ್ಳೆಯ ಲಕ್ಷಣವಲ್ಲ" ಎಂದು ಹಿರಿಯ ಮುಖಂಡ, ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications