ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್‌ಡಿಕೆ ಅವಕಾಶವಾದಿ ತರ್ಕದಲ್ಲೇ ಕಾಂಗ್ರೆಸ್ಸಿನ ಉತ್ತರವೂ ಅಡಗಿದೆ

By ಡಾ.ಹೆಚ್. ಸಿ. ಮಹದೇವಪ್ಪ
|
Google Oneindia Kannada News

ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್‌ ಅನ್ನು ಕಾಂಗ್ರೆಸ್‌ ಬೆಂಬಲಿಸಬೇಕು ಎಂಬ ತರ್ಕ ಬಳಸುವ ಕುಮಾರಸ್ವಾಮಿ ಅವರಿಗೆ 2018ರ ಮೈತ್ರಿಯ ವೇಳೆ ಕಾಂಗ್ರೆಸ್ ಪಕ್ಷವು ಹೆಚ್ಚು ಮತ ಹೊಂದಿತ್ತು ಎಂಬ ಅಂಶವನ್ನು ಬದಿಗೆ ಸರಿಸಿ ತಾವೇ ಮುಖ್ಯಮಂತ್ರಿ ಆಗುತ್ತಾರೆ.

ದಿನಕ್ಕೊಮ್ಮೆ ಗಂಟೆಗೊಮ್ಮೆ ಬದಲಾಗುವ ಇವರ ರೀತಿಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಸ್ವತಃ ಜೆಡಿಎಸ್ ಪಕ್ಷದ ಕಾರ್ಯಕರ್ತರೇ ಸೋತಿದ್ದು ಇವರ ಮೇಲೆ ನಂಬಿಕೆ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ. ಮೈತ್ರಿ ಇಲ್ಲದಿದ್ದರೆ ರಾಜ್ಯಸಭೆಯಲ್ಲಿ ಸಂಖ್ಯೆಯ ಆಧಾರಿತವಾಗಿ ಬಿಜೆಪಿಯೇ ಗೆಲ್ಲುತ್ತಿತ್ತು ಎಂಬುದು ಎಲ್ಲರಿಗೂ ಗೊತ್ತಿದ್ದ ವಿಚಾರವಾಗಿತ್ತು.\

ರಾಜ್ಯಸಭೆ: ಬಿಜೆಪಿಗೆ ಬಿದ್ದ ಆ ಎರಡು ಕಾಂಗ್ರೆಸ್ಸಿನ ಅಡ್ಡಮತ ಯಾರದ್ದು?ರಾಜ್ಯಸಭೆ: ಬಿಜೆಪಿಗೆ ಬಿದ್ದ ಆ ಎರಡು ಕಾಂಗ್ರೆಸ್ಸಿನ ಅಡ್ಡಮತ ಯಾರದ್ದು?

ಆದರೆ ಬಿಜೆಪಿ ಗೆಲ್ಲಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಹೇಳುತ್ತಿರುವ ಕುಮಾರಸ್ವಾಮಿ ಅವರು, ಕಾಂಗ್ರೆಸ್ ಪಕ್ಷದ ಬೆಂಬಲ ಸಿಗಲಿಲ್ಲ ಎಂದು ಅವರ ಮೇಲೆಯೇ ಗೂಬೆ ಕೂರಿಸಲು ಹೊರಟಿರುವುದು ಹಾಸ್ಯಾಸ್ಪದ ಸಂಗತಿ. ರೈತ ವಿರೋಧಿಯಾಗಿದ್ದ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯ ವಿರುದ್ಧ ಸದನದ ಹೊರಗೆ ಪ್ರತಿಭಟಿಸಿ ಸದನದ ಒಳಗೆ ಬೆಂಬಲಿಸುವ ಮೂಲಕ ಮಹಾ ನಾಟಕ ಆಡಿದ್ದವರು ಜೆಡಿಎಸ್ ನವರು.

Senior Congress Leader Dr H C Mahadevappa Reply To H D Kumaraswamy On RS Result

ನಿರ್ದಿಷ್ಟ ಕೋಮಿನ ಜನರನ್ನು ಟಾರ್ಗೆಟ್ ಮಾಡಿಕೊಂಡು ಈಗಾಗಲೇ ಜಾರಿಯಲ್ಲಿದ್ದರೂ ಮತ್ತೊಮ್ಮೆ ಅದೇ ಕಾನೂನನ್ನು ರೂಪಿಸಲು ಹೊರಟಿದ್ದ ಮತಾಂತರ ನಿಷೇಧ ಕಾಯ್ದೆಯ ವಿರುದ್ಧ ದನಿ ಎತ್ತದೇ ಬೆಂಬಲಿಸಿದರು. ಜೊತೆಗೆ ಅತಿ ಹೆಚ್ಚಿನ ಗೋಮಾಂಸ ರಫ್ತು ಮಾಡುತ್ತಲೇ ಗೋಹತ್ಯೆ ನಿಷೇಧ ಎಂಬ ನಾಟಕವಾಡಿದ ಬಿಜೆಪಿಗರ ದ್ವಿಮುಖ ನೀತಿಯ ವಿರುದ್ದ ಮಾತನ್ನೇ ಆಡದ ಜೆಡಿಎಸ್‌ನಲ್ಲಿ ಜಾತ್ಯಾತೀತತೆ ಮತ್ತು ಜನಪರ ನೀತಿ ಉಳಿದಿದೆ ಎಂದು ನಾವು ಭಾವಿಸುವುದಾದರೂ ಹೇಗೆ?

ಅಧಿಕಾರ ಪಡೆಯುವದಕ್ಕೆ ಮಾತ್ರ ಜಾತ್ಯಾತೀತತೆ ಎಂಬ ಪದವನ್ನು ಬಳಸಿಕೊಳ್ಳುವ ಕುಮಾರಸ್ವಾಮಿ ಅವರಿಗೆ, ಜಾತ್ಯಾತೀತತೆ ಎಂಬುದು ಅಧಿಕಾರವನ್ನು ಬಿಟ್ಟು ಕೊಡಬೇಕಾದಾಗಲೂ ಕೂಡಾ ಸಮನಾಗಿರುತ್ತದೆ ಎಂಬ ಅಂಶವು ಅರ್ಥ ಅರ್ಥವಾಗಬೇಕಲ್ಲವೇ? ಲೋಕಸಭೆಯಲ್ಲಿ ಸೋತ ದೇವೇಗೌಡರನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಿ ರಾಜ್ಯಸಭೆಗೆ ಕಳಿಸಿದೆ.

ರಾಜ್ಯಸಭಾ ಚುನಾವಣಾ ಫಲಿತಾಂಶ: ಬೆಕ್ಕಿಗೆ ಗಂಟೆ ಕಟ್ಟುವವರಾರು?ರಾಜ್ಯಸಭಾ ಚುನಾವಣಾ ಫಲಿತಾಂಶ: ಬೆಕ್ಕಿಗೆ ಗಂಟೆ ಕಟ್ಟುವವರಾರು?

Senior Congress Leader Dr H C Mahadevappa Reply To H D Kumaraswamy On RS Result

37 ಸ್ಥಾನವಿದ್ದ ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನವನ್ನೂ ನೀಡಿದೆ. ಈ ನಡೆಯನ್ನು ಜೆಡಿಎಸ್ ಗೌರವಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸದೇ ಇದ್ದ ಮೇಲೆ, ಅವರು ಯಾವ ಜಾತ್ಯಾತೀತತೆ ಬಗ್ಗೆ ಮಾತನಾಡುತ್ತಿದ್ದಾರೆ? ಜಾತ್ಯಾತೀತ ರಾಜಕಾರಣ ಎಂಬುದು ಗಂಟೆಗೊಂದು ಸಲ ಬದಲಿಸುವ ಇವರ ಅಧಿಕಾರ ಮೋಹಿ ಮನಸ್ಥಿತಿಗೆ ಬಲಿಯಾಗುತ್ತದೆಯಲ್ಲಾ ಎಂದು ನೆನೆದು ಬೇಸರವಾಗುತ್ತಿದೆ.

ಈ ಹಿಂದೆ ಜಾತ್ಯಾತೀತತೆ ಎಂದರೆ ಏನು ಎಂದು ಕೇಳಿದ್ದ ಕುಮಾರಸ್ವಾಮಿ ಅವರು ಜಾತ್ಯಾತೀತತೆಯ ಬ್ಯಾನರ್ ಮತ್ತು ಅದರ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳಬೇಕಾದ ಅಗತ್ಯ ಸಾಕಷ್ಟಿದೆ!

English summary
Senior Congress Leader Dr H C Mahadevappa Reply To H D Kumaraswamy On RS Result. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X