ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಕೆ ಶಿವಕುಮಾರ್ ಭೇಟಿ ಮಾಡಿದ ಕಾಂಗ್ರೆಸ್ ಹಿರಿಯ ನಾಯಕರು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 26 : ಮಾಜಿ ಸಚಿವ ಡಿ. ಕೆ. ಶಿವಕುಮಾರ್‌ರನ್ನು ಕಾಂಗ್ರೆಸ್ ಹಿರಿಯ ನಾಯಕರು ಇಂದು ಭೇಟಿ ಮಾಡಿದರು. ನ್ಯಾಯಾಂಗ ಬಂಧನದಲ್ಲಿರುವ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿ ಇಡಿ ವಿಶೇಷ ನ್ಯಾಯಾಲಯದಲ್ಲಿ ಬುಧವಾರ ವಜಾಗೊಂಡಿದೆ.

ಗುರುವಾರ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್, ಹಿರಿಯ ನಾಯಕ ಆನಂದ್ ಶರ್ಮಾ ತಿಹಾರ್ ಜೈಲಿಗೆ ಭೇಟಿ ನೀಡಿ ಡಿ. ಕೆ. ಶಿವಕುಮಾರ್ ಭೇಟಿ ಮಾಡಿದರು. ಡಿ. ಕೆ. ಸುರೇಶ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಡಿ. ಕೆ. ಶಿವಕುಮಾರ್ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಡಿ. ಕೆ. ಶಿವಕುಮಾರ್

Senior Congress Leaders Meets DK Shivakumar In Tihar Jail

ಡಿ. ಕೆ. ಶಿವಕುಮಾರ್ ಭೇಟಿ ಮಾಡಿದ ಬಳಿಕ ಮಾತನಾಡಿದ ಆನಂದ್ ಶರ್ಮಾ, "ಅವರ ಆರೋಗ್ಯದ ಬಗ್ಗೆ ವಿಚಾರಿಸಿದ್ದೇವೆ. ಅವರ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ನ್ಯಾಯ ಸಮ್ಮತವಾಗಿಲ್ಲ. ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ" ಎಂದರು.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ತಿರಸ್ಕೃತವಾಗಲು ಕಾರಣಗಳೇನು?ಡಿಕೆ ಶಿವಕುಮಾರ್ ಜಾಮೀನು ಅರ್ಜಿ ತಿರಸ್ಕೃತವಾಗಲು ಕಾರಣಗಳೇನು?

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಡಿ. ಕೆ. ಶಿವಕುಮಾರ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ಟೋಬರ್ 1ರ ತನಕ ಅವರ ನ್ಯಾಯಾಂಗ ಬಂಧನದ ಅವಧಿ ಇದ್ದು, ಜಾಮೀನು ಅರ್ಜಿಯನ್ನು ಇಡಿ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಜಾಮೀನು ನಿರಾಕರಣೆ: ಡಿಕೆ ಶಿವಕುಮಾರ್ ಮುಂದಿನ ನಡೆ ಏನು?ಜಾಮೀನು ನಿರಾಕರಣೆ: ಡಿಕೆ ಶಿವಕುಮಾರ್ ಮುಂದಿನ ನಡೆ ಏನು?

ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ತಿಹಾರ್ ಜೈಲಿಗೆ ಭೇಟಿ ನೀಡಿದ್ದರು. ಆದರೆ, ಪಿ. ಚಿದಂಬರಂ ಭೇಟಿ ಮಾಡಿ ವಾಪಸ್ ಆಗಿದ್ದರು. ಡಿ. ಕೆ. ಶಿವಕುಮಾರ್ ಭೇಟಿ ಮಾಡಿರಲಿಲ್ಲ.

ಬುಧವಾರ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿಯನ್ನು ಇಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಗುರುವಾರ ದೆಹಲಿ ಹೈಕೋರ್ಟ್‌ನಲ್ಲಿ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

English summary
Senior Congress leaders Ahmed Patel, Anand Sharma met the Karnataka party leader D.K.Shivakumar along with DK Suresh at Tihar jail New Delhi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X